ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ರಂಗಾಯಣ ಹೆಜ್ಜೆ:ಸಿಎಂ ಯಡಿಯೂರಪ್ಪ

226

ಶಿವಮೊಗ್ಗ: ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ ೧೦ವರ್ಷಗಳಲ್ಲಿ ದಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.
ಶಿವಮೊಗ್ಗ ರಂಗಾಯಣದ ನೂತನ ವೆಬ್‌ಸೈಟ್ ಅನಾವರಣ ಗೊಳಿಸಿ ಮಾತನಾಡಿದ ಅವರು, ಶಿವಮೊಗ್ಗ ರಂಗಾಯಣ ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತ ರನ್ನು ಸೆಳೆಯುತ್ತಿದೆ. ರಂಗಸಂಕ್ರಾತಿ ರಾಷ್ಟ್ರೀಯ ನಾಟಕೋತ್ಸವ, ವಿಶ್ವ ಮಾನವ ಅಂತಾರಾಷ್ಟ್ರೀಯ ರಂಗೋತ್ಸವ, ವಿಶ್ವರಂಗಭೂಮಿ ದಿನಾಚರಣೆ, ರೆಪರ್ಟರಿಯ ಹಲವಾರು ನಾಟಕಗಳನ್ನು ರಂಗತೇರು ಹೆಸರಿನಲ್ಲಿ ರಾಜ್ಯದಾದ್ಯಂತ ಪ್ರದರ್ಶನ ನಡೆಸಿದೆ. ಕೋವಿಡ್ ಹಿನ್ನೆಲೆಯಲ್ಲಿ ರಂಗ ಚಟುವಟಿಕೆಗಳಿಗೆ ಹಿನ್ನಡೆ ಉಂಟಾದರೂ ಆನ್‌ಲೈನ್ ಕಾರ್ಯ ಕ್ರಮಗಳ ಮೂಲಕ ರಂಗಚಟುವಟಿಕೆ ಗಳನ್ನು ಜೀವಂತವಾಗಿರಿಸಿರುವುದು ಪ್ರಶಂಸನೀಯ ಎಂದರು.
ರಂಗ ದಿಗ್ಗಜ ಬಿ.ವಿ.ಕಾರಂತರ ಕನಸಿನ ಕೂಸಾದ ರಂಗಾಯಣ ಮೈಸೂರಿನಿಂದ ಪ್ರಾರಂಭವಾಗಿ ಇಂದು ರಾಜ್ಯದ ೪ಭಾಗಗಳಲ್ಲಿ ತನ್ನ ಶಾಖೆ ಯನ್ನು ವಿಸ್ತರಿಸಿಕೊಂಡಿದೆ. ಶಿವಮೊಗ್ಗ ದಲ್ಲಿ ರಂಗಾಯಣಕ್ಕೆ ಸುಸಜ್ಜಿತವಾದ ಸುವರ್ಣ ಸಾಂಸ್ಕೃತಿಕ ಭವನವನ್ನು ಒದಗಿಸಲಾಗಿದ್ದು, ರಂಗ ಚಟುವಟಿಕೆಗಳಿಗೆ ಎ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ ದರು. ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ಶಾಸಕ ಅರಗ eನೇಂದ್ರ, ವಿಧಾನ ಪರಿಷತ್ ಸದಸ್ಯ ರಾದ ಆಯನೂರು ಮಂಜುನಾಥ, ರುದ್ರೇಗೌಡ, ಜಿಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಸಿಇಓ ವೈಶಾಲಿ, ರಂಗಸಮಾಜದ ಸದಸ್ಯ ಹಾಲಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.