ಶಂಕರಾಚಾರ್ಯರ ಜಯಂತಿ ಆಚರಣೆ…

528

ಶಿವಮೊಗ್ಗ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಶ್ರೀ ಶಂಕರಾಚಾರ್ಯ ಜಯಂತಿಯ ಉದ್ಘಾಟನೆಯನ್ನು ಉಪ ಮೇಯರ್ ಸುರೇಖಾ ಮುರಳೀಧರ್ ನೆರವೇರಿಸಿದರು. ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷg ನಟರಾಜ ಭಾಗವತ್ ಅವರು ಶಂಕರಾಚಾರ್ಯರ ಆದರ್ಶಗಳನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು.
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ತಾಲ್ಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಮಾಧವ ಮೂರ್ತಿ, ಶಂಕರಮಠದ ಧರ್ಮಾಧಿಕಾರಿ ಡಾ|| ನಾರಾಯಣ ಪಿ., ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.