ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪರಿಂದ ನಗರ ಸಂಚಾರ

520

ಶಿವಮೊಗ್ಗ: ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರೆದಿದ್ದ ಅಧಿಕಾರಿಗಳ ಸಭೆಗೆ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿ ಬಜಾರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ರಸ್ತೆ ಬದಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ವ್ಯಾಪಾರ ನಡೆಸದಂತೆ ಬುದ್ದಿ ಹೇಳಿದರು. ನಂತರ ನಗರದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ, ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಹತ್ತು ಹಲವು ಸಲಹೆ-ಸೂಚನೆಗಳನ್ನು ನೀಡಿದರು.