ಶಿವಮೊಗ್ಗ ಜಿಲ್ಲೆ ಬಿಜೆಪಿ ಸಂಘಟನೆಯ ಪ್ರಯೋಗ ಶಾಲೆ: ಕಟೀಲ್

323

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಪಕ್ಷ ಸಂಘಟನೆಗೆ ಪ್ರಯೋಗಶಾಲೆ ಇದ್ದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ಪಟ್ಟರು.
ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳು ಆಗಮಿಸಿದ ಅವರನ್ನು ಸಕ್ರೆಬೈಲು ಆನೆ ಬಿಡಾರದ ಬಳಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಬರಮಾಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿದೆ. ಇದು ಹೋರಾಟಗಳ ನಾಡಾಗಿದ್ದು, ಇಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಡಲಾಗು ತ್ತಿದೆ. ಸಂಘಟನೆಗೆ ಒಂದು ರೀತಿಯ ಪ್ರಯೋಗ ಶಾಲೆ ಇದ್ದಂತೆ ಎಂದು ಜಿಲ್ಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದು ಸ್ವಾಗತ ಎಂದರು.
ಬಿಜೆಪಿಯ ಕಾಂiiಕಾರಿಣಿಯ ಸಭೆಯಲ್ಲಿ ಲವ್ ಜಿಹಾದ್, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಚರ್ಚಿಸಲಾ ಗುವುದು ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಬರಬಹುದಾದ ವಿಷಯ ಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಈ ಬಾರಿಯ ಗ್ರಾ.ಪಂ. ಚುನಾ ವಣೆಯಲ್ಲಿ ನಾವು ಅಭೂತಪೂರ್ವ ಯಶಸ್ಸು ಪಡೆದಿದ್ದೇವೆ. ಸುಮಾರು ೬೨ ಸಾವಿರ ಬಿಜೆಪಿ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಶಾಲಿ ಗಳಾಗಿದ್ದಾರೆ. ಇದು ನಮ್ಮ ಸಂಘಟನೆಗೆ ಮತ್ತಷ್ಟು ಬಲ ತಂದಿದೆ ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು, ಬಿಜೆಪಿ ವಿರುದ್ದ ಮಾತನಾಡುತ್ತಿದ್ದಾರೆ. ಇವರು ಮಾನಸಿಕ ಅಸ್ವಸ್ಥತೆಯನ್ನು ಕಳೆದು ಕೊಂಡಿದ್ದಾರೆ. ಗ್ರಾ.ಪಂ. ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ತಳ್ಳಿದೆ ಎಂದರು.
ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರಿದ್ದರು.