ಶಿವಮೊಗ್ಗ: ಡಿ.೧೨ರವರೆಗೂ ನಿಷೇಧಾe ಮುಂದುವರಿಕೆ

432

ಶಿವಮೊಗ್ಗ : ಜಿಯಲ್ಲಿ ಈಚೆಗೆ ನಡೆದ ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿಧಿಸಲಾಗಿದ್ದ ನಿಷೇಧಾeಯನ್ನು ಡಿ.೧೨ರವರೆಗೂ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಜಿ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ.೧೨ರ ಶನಿವಾರ ಮುಂಜನೆ ೧೦ ಗಂಟೆಯವರೆಗೂ ನಿಷೇಧಾeಯನ್ನು ನಗರದಾದ್ಯಂತ ವಿಸ್ತರಣೆ ಮಾಡಲಾ ಗಿದೆ. ಈಗಾಗಲೇ ಜರಿಯಲ್ಲಿರುವಂತೆ ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರೆಯಲಿದೆ ಎಂದಿzರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿದಿನ ಮುಂಜನೆ ೭ ರಿಂದ ೧೧ ಗಂಟೆಯವರೆಗೂ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಇಂತಹ ಕಠಿಣ ಕ್ರಮಗಳು ಅನಿವಾರ್ಯವಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಈಗಾಗಲೇ ಅನೇಕ ಸಂಘಟನೆ ಗಳು ೧೪೪ ಸೆಕ್ಷನ್ ಹಿಂಪಡೆಯುವಂತೆ ಮನವಿ ಮಾಡಿದ್ದು ಸಾಮಾನ್ಯ ಜನರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಸಡಿಲಗೊಳಿಸುವಂತೆ ಮನವಿ ಮಾಡಿzರೆ.
ಆದರೆ ಪರಿಸ್ಥಿತಿ ಇನ್ನೂ ಬೂದಿಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೇತೃತ್ವದಲ್ಲಿ ಶಾಂತಿ ಸಭೆಗಳು ನಿರಂತರವಾಗಿ ನಡೆಯುತ್ತಿವೆ. ಆದಾಗ್ಯೂ ಕೆಲ ಸಂಘಟನೆಗಳ ಪ್ರಮುಖರು, ಜನಪ್ರತಿನಿಧಿಗಳು ಪತ್ರಿಕಾಗೋಷ್ಟಿ ಹಾಗೂ ಮಾಧ್ಯಮಗಳಿಗೆ ಹೇಳಿ ನೀಡುವ ಮೂಲಕ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದು, ಈ ರೀತಿಯ ಹೇಳಿಕೆಗಳಿಂದ ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗದಿರಲಿ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆಯೊಂದಿಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ನಗರದಲ್ಲಿ ಪುನಃ ನಿಷೇಧಾe ಮುಂದುವರೆಸಿ ಆದೇಶ ಹೊರಡಿಸಲಾಗಿದೆ.
ಡಿ.೩ರಂದು ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ಹ ನಡೆದಿದ್ದು, ಈ ಸಂಬಂಧ ಜಿಯ ಕೆಲವು ಪ್ರದೇಶಗಳಲ್ಲಿ ಕೋಮು ಗಲಭೆ ಉಂಟಾಗಿತ್ತು. ನಂತರ ಶಾಂತಿ ಕಾಪಾಡುವ ಸಲುವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾe ಜರಿಗೊಳಿಸಲಾಗಿತ್ತು.