ಸಿಎಂ ಪರಿಹಾರ ನಿಧಿಗೆ ರೂ.೫ ಕೋಟಿ ದೇಣಿಗೆ

535

ದಾವಣಗೆರೆ:ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಇವರು ಕೊರೊನಾ ವೈರಸ್ ತಡೆಗಟ್ಟಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಹಾಗೂ ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳ ವತಿಯಿಂದ ಏ.೨೪ರಂದು ಬೆಳಿಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರೂ. ೫ ಕೋಟಿ ಮೆತ್ತದ ಚೆಕ್ ನೀಡಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅಜುಂ ಪರವೀಜ್, ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಮ್ಯಾನೇಜಿಂಗ್ ಡೈರೆಕ್ಟರ್ ಚಾರುಲತಾ ಸೋಮಾಲ್ ಇದ್ದರು.