ಸೀಲ್‌ಡೌನ್ ಪ್ರದೇಶಕ್ಕೆ ಭೇಟಿ-ಆತ್ಮಸ್ಥೈರ್ಯ ತುಂಬಿದ ಶಾಸಕ ಎಂಪಿ ರೇಣುಕಾಚಾರ್ಯ

473

ಹೊನ್ನಾಳಿ: ತಾಲೂಕಿನ ಮುಕ್ತೆನ ಹಳ್ಳಿ ಗ್ರಾಮದಲ್ಲಿ ಬೆಂಗಳೂರಿನಿಂದ ಬಂದ ಯುವಕನಿಕೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ೬ ಮನೆ ಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಇಂದು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು, ಸೀಲ್‌ಡೌನ್‌ನಲ್ಲಿರುವ ಕುಟುಂಬಗಳಿಗೆ ಫುಡ್ ಕಿಟ್ ನೀಡಿ, ಆತ್ಮಸ್ಥೈರ್ಯ ತುಂಬಿ, ಜನರು ಸಾಮಾಜಿಕ ಅಂತರವನ್ನು ಕಾಯ್ದು ಕೊಂಡು ಕೊರೊನಾ ಸೋಂಕಿನಿಂದ ಜಗೃತರಾಗಿರುವಂತೆ ಮನವಿ ಮಾಡಿದರು.
ಜಿ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಹಾಗು ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.