ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಒಂದೇ ಒಂದು ಮಾತನ್ನೂ ಆಡಿಲ್ಲ: ರಾಹುಲ್ ಗಾಂಧಿ ಕಿಡಿ

352

ಪಂಜಾಬ್: ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸೆಪ್ಟೆಂಬರ್‌ನಲ್ಲಿ ೧೯ ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ನಂತರ ಈ ಬಗ್ಗೆ ಪ್ರಧಾನಿ ಮೋದಿ ಅವರು ಒಂದೇ ಒಂದು ಮಾತನ್ನ ಆಡಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಕಳೆದ ವಾರ ಸಂತ್ರಸ್ತ ಯುವತಿಯ ಕುಟುಂಬಕ್ಕೆ ಭೇಟಿ ನೀಡಿ ಪಂಜಬ್ ನ ಪಟಿಯಾಲದಲ್ಲಿ ಮಾಧ್ಯಮಗ ಳೊಂದಿಗೆ ಮಾತನಾಡಿದ ಸೋನಿಯಾ ಗಾಂಧಿ, ತಮ್ಮ ಮಗಳಿಗೆ ನ್ಯಾಯವನ್ನು ಕೊಡಿಸುವಲ್ಲಿ ಅವರು ಒಬ್ಬಂಟಿಯಲ್ಲ. ನಿಮ್ಮ ಜೊತೆ ನಾವಿದ್ದೇವೆ. ಇನ್ನು ‘ದೇಶದಲ್ಲಿ ಪ್ರತಿದಿನವೂ ಲಕ್ಷಾಂತರ ಮಹಿಳೆಯರು, ಒಂದು ದಿನದಲ್ಲಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗುವ ಲಕ್ಷಾಂತರ ಮಹಿಳೆಯರ ಕುಟುಂಬಗಳ ಜೊತೆ ನಾವಿದ್ದೇವೆ ಎಂದರು.
ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂ, ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಮತ್ತು ಇಡೀ ಯುಪಿ ಆಡಳಿತವು ಆಕೆಯ ಕುಟುಂಬವನ್ನು ಟಾರ್ಗೆಟ್ ಮಾಡಿದೆ, ಆದರೆ ಪ್ರಧಾನಿ ಈ ಬಗ್ಗೆ ಒಂದು ಮಾತೂ ಆಡಿಲ್ಲ’ ಎಂದು ಹೇಳಿದ್ದಾರೆ.
ಈ ಹಿಂದೆ ಪ್ರಧಾನಿ ಮೋದಿ ಅವರು ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ‘ಗೌರವಾನ್ವಿತ ಪ್ರಧಾನಿ ಮೋದಿ ಅವರು ಘಟನೆ ಬಗ್ಗೆ ನನ್ನೊಂದಿಗೆ ಮಾತನಾಡಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ನಿರ್ದೇಶನ ನೀಡಿದ್ದಾರೆ’ ಎಂದು ಆದಿತ್ಯನಾಥ್ ಅವರು ಟ್ವಿಟರ್ ನಲ್ಲಿ ಹಿಂದಿಯಲ್ಲಿ ಬರೆದುಕೊಂಡಿದ್ದರು.