೭೪ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ದತೆಗೆ ಜಿಧಿಕಾರಿಗಳ ಸೂಚನೆ…

445

ದಾವಣಗೆರೆ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಹರಡುವಿಕೆ ನಿಯಂತ್ರಣದ ಹಿನ್ನೆಲೆ ಯಲ್ಲಿ ೭೪ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾರ್ಗ ಸೂಚಿಯನ್ವಯ ಸರಳವಾಗಿ, ಅಚ್ಚುಕಟ್ಟಾಗಿ ಆಚರಿಸಲಾಗುವುದು ಎಂದು ಡಿಸಿ ಬೀಳಗಿ ತಿಳಿಸಿದರು.
ಆ.೧೫ರಂದು ಆಚರಿಸಲಿರುವ ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿ ದಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವ ಬಗ್ಗೆ ಸಂಬಂಧಿಸಿದ ಅಧಿಕಾರಿ ಗಳೊಂದಿಗೆ ಚರ್ಚಿಸಲು ಕರೆದಿದ್ದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ ಮಕ್ಕಳಿಗೆ ಅವಕಾಶ ಇರುವುದಿಲ್ಲ. ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ, ಸ್ಯಾನಿಟೈಸೇಷನ್ ನಿರ್ವಹಿಸಿ ಹೆಚ್ಚು ಜನರನ್ನು ಸೇರಿಸದೇ ಜಿ ಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಬೇಕಿದೆ. ಜೊತೆಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಸಂಜೆಯೂ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ.
ಆ.೧೫ ರ ಬೆಳಿಗ್ಗೆ ೯ ಗಂಟೆಗೆ ಜಿ ಕ್ರೀಡಾಂಗಣದಲ್ಲಿ ಧ್ವಜರೋಹಣ ವನ್ನು ಜಿ ಉಸ್ತುವಾರಿ ಸಚಿವರು ನೆರವೇರಿಸಲಿದ್ದು, ಈ ಬಾರಿ ಡಿಆರ್, ಸಿವಿಲ್, ಹೋಂ, ಅಬಕಾರಿ, ಅರಣ್ಯ ಮತ್ತು ಅಗ್ನಿ ಶಾಮಕದಳ ಒಟ್ಟು ಆರು ತಂಡಗಳು ಮಾತ್ರ ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ ಇತರೆ ವಿದ್ಯಾರ್ಥಿಗಳ ತಂಡಗಳಿಗೆ ಅವಕಾಶ ಇರುವುದಿಲ್ಲ. ಧ್ವಜರೋಹಣದ ನಂತರ ಉಸ್ತುವಾರಿ ಸಚಿವರು ಸ್ವಾತಂತ್ರ್ಯ ದಿನಾಚರಣೆ ಕುರಿತು ಸಂದೇಶ ನೀಡುವರು. ಸ್ವಾತಂತ್ರ್ಯೋತ್ಸವದಂದು ಕೋವಿಡ್ ಸೈನಿಕರಾದ ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಕೋವಿಡ್ ಗುಣಮುಖರಾದವರು, ಪೌರ ಕಾರ್ಮಿಕರನ್ನು ಗೌರವಿಸಲಾಗುವುದು.
ಅಂದು ಬೆಳಿಗ್ಗೆ ಜಿ ಕ್ರೀಡಾಂಗಣ ದಲ್ಲಿ ಬೆಳಿಗ್ಗೆ ೯ ಗಂಟೆಗೆ ಸರಿಯಾಗಿ ಧ್ವಜರೋಹಣ ನೆರವೇರಲಿದ್ದು, ಜಿ ಮಟ್ದದ ಇಲಾಖಾ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಅಂದು ಬೆಳಿಗ್ಗೆ ೭.೩೦ ಗಂಟೆಗೆ ತಪ್ಪದೇ ಧ್ವಜರೋಹಣ ನೆರವೇರಿಸಿ, ನಂತರ ಜಿಡಳಿತ ಭವನದ ಆವರಣದಲ್ಲಿ ಬೆಳಿಗ್ಗೆ ೭.೫೦ಕ್ಕೆ ನಡೆಯುವ ಧ್ವಜರೋಹಣ ಕಾರ್ಯ ಕ್ರಮಕ್ಕೆ ಹಾಜರಿರುವಂತೆ ಸೂಚಿಸಿದರು.
ಧ್ವಜಾರೋಹಣದ ಪೂರ್ವ ಸಿದ್ದತೆ, ಧ್ವಜ ಕಟ್ಟುವ ಇತರೆ ಜವಾಬ್ದಾರಿ ಯನ್ನು ಜಿ ಪೊಲೀಸ್ ಅಧೀಕ್ಷಕರು, ಉಪ ನಿರೀಕ್ಷಕರು ಜಿ ಸಶಸ್ತ್ರ ಮೀಸಲು ಪಡೆ ಮತ್ತು ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿ ಇವರಿಗೆ ಜವಾಬ್ದಾರಿ ವಹಿಸಲಾಯಿತು.
ವೇದಿಕೆ ನಿರ್ಮಾಣ, ಶಾಮಿಯಾನ, ವಿದ್ಯುತ್ ದೀಪಾಲಂಕಾರ ಇತರೆ ವ್ಯವಸ್ಥೆಗಳನ್ನು ಪಾಲಿಕೆ ಆಯುಕ್ತರು, ನೀರಿನ ವ್ಯವಸ್ಥೆ ಯನ್ನು ಲೋಕೋಪಯೋಗಿ ಇಲಾಖೆ ವೇದಿಕೆಗೆ ಹೂಕುಂಡ, ಅಲಂಕಾರ ವ್ಯವಸ್ಥೆಯನ್ನು ತೋಟಗಾರಿಕೆ ಇಲಾಖೆಯವರು ವಹಿಸಬೇಕೆಂದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ ಜೊತೆಗೆ ವಿತರಣೆಯ ಜವಾಬ್ದಾರಿಯನ್ನು ಉಪವಿಭಾಗಾಧಿಕಾರಿಗಳು ಮತ್ತು ವಾರ್ತಾಧಿಕಾರಿಗಳಿಗೆ ವಹಿಸಲಾಯಿತು. ಕ್ರೀಡಾಂಗಣ ಸಿದ್ದತೆ ಮತ್ತು ಸ್ವಚ್ಚತೆಯ ಜವಾಬ್ದಾರಿಯನ್ನು ಪಾಲಿಕೆ ಆಯುಕ್ತರು, ಡಿಹೆಚ್‌ಓ, ಅಗ್ನಿಶಾಮಕ ದಳ, ಲೋಕೋಪಯೋಗಿ ಇಲಾಖೆ ಇವರಿಗೆ ನೀಡಲಾಯಿತು.
ಸರ್ಕಾರಿ ಕಟ್ಟಡಗಳ ಮೇಲೆ ದೀಪಾಂಲಕಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಆ.೧೪ ಮತ್ತು ೧೫ ರಂದು ವಿದ್ಯುತ್ ದೀಪಾಂಲಕಾರ ಮಾಡಲು ಆಯಾ ಇಲಾಖಾಧಿಕಾರಿಗಳಿಗೆ ಸೂಚಿಸಲಾ ಯಿತು. ನಗರದ ಮುಖ್ಯ ವೃತ್ತ್ತಗಳಿಗೆ ದೀಪಾಲಂಕಾರ ಮಾಡಲು ಅಭಿಯಂತರರು, ಕೆಆರ್‌ಐಡಿಎಲ್ ದಾವಣಗೆರೆ ಇವರಿಗೆ ವಹಿಸಲಾ ಯಿತು. ಮತ್ತು ಜಿಡಳಿತ ಭವನದ ಕಟ್ಟಡದ ಮೇಲೆ ವಿದ್ಯುತ್ ದೀಪಾಲಂಕಾರ ಮಾಡುವ ಜವ್ದಾಬಾರಿ ಯನ್ನು ಆಯುಕ್ತರು, ಮಹಾನಗರ ಪಾಲಿಕೆ ದಾವಣಗೆರೆ ಇವರಿಗೆ ವಹಿಸಲಾಯಿತು ಹಾಗೂ ಕಾರ್ಯಪಾಲಕ ಇಂಜನಿಯರ್, ಬೆಸ್ಕಾಂ, ದಾವಣಗೆರೆ ಇವರಿಗೆ ಅಗತ್ಯ ಸಹಕಾರ ನೀಡುವಂತೆ ತಿಳಿಸಲಾಯಿತು.
ಅಂದು ಪ್ಲಾಸ್ಟಿಕ್ ಧ್ವಜಗಳನ್ನು ಬಳಸುಂತಿಲ್ಲ. ಒಂದು ಪಕ್ಷ ಅಂಗಡಿಗಳಲ್ಲಿ, ವ್ಯಾಪಾರ ವಹಿವಾಟು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ಬಳಕೆ ಮಾಡಿದಲ್ಲಿ ಅಂತಹವರ ವಿರುದ್ದ ಮಾಲಿನ್ಯ ನಿಯಂತ್ರಣ ಮಂಡಳಿಯವರು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ವಿವಿಧ ಇಲಾಖೆಗಳ ಪ್ರಗತಿ ವಿವರ ಹಾಗ ಭಾಷಣ ತಯಾರಿ, ಶಿಷ್ಟಾಚಾರ ಪಾಲನೆ, ಉಪಹಾರದ ವ್ಯವಸ್ಥೆ, ಸಮಾರಂಭದ ಮೇಲುಸ್ತುವಾರಿ, ಉಪಹಾರದ ವ್ಯವಸ್ಥೆಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಜಿ ರಕ್ಷಣಾಧಿಕಾರಿ ಹನುಮಂತರಾಯ, ಎಸಿ ಮಮತಾ ಹೊಸಗೌಡರ್, ನಗರಾಭಿವದ್ದಿ ಕೋಶದ ಯೋಜನಾ ನಿರ್ದೇಶಕಿ ನಜ, ಜಿ.ಪಂ ಯೋಜನಾ ನಿರ್ದೇಶಕರಾದ ಜಗದೀಶ್, ಡಿಡಿಪಿಐ ಪರಮೇಶ್ವರಪ್ಪ, ಡಿಹೆಚ್‌ಓ ಡಾ.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವದ್ದಿ ಇಲಾಖೆಯ ಉಪ ನಿರ್ದೇಶಕ ವಿಜಯಕುಮಾರ, ಡಿವೈಎಸ್‌ಪಿ ನಾಗೇಶ್ ಐತಾಳ್ ಇತರೆ ಜಿ ಮಟ್ಟದ ಅಧಿಕಾರಿಗಳು ಹಾಜರಿದ್ದರು.