ಯುವಜನರೇ ಹಾನಿಕಾರಕ ವಸ್ತುಗಳ ಬಳಕೆ ಮಾಡದಿರಿ…
ಶಿವಮೊಗ್ಗ : ಅತಿ ಕಡಿಮೆ ಸಮ ಯದಲ್ಲಿ ದೇಹದ ಶಕ್ತಿ , ಸಾಮಾ ರ್ಥ್ಯ ಹಾಗೂ ಸೌಂದರ್ಯ ಹೆಚ್ಚಿಸಿ ಕೊಳ್ಳಲು ಹಾನಿಕಾರಕ ವಸ್ತುಗಳ ಬಳಕೆ ಮಾಡಬೇಡಿ, ಉತ್ತಮ ದೈಹಿಕ ಸಾಮಾರ್ಥ್ಯ ಕಾಪಾಡಿಕೊ ಳ್ಳಬೇಕಾದರೆ ನಿರಂತರ ಶ್ರಮ ವಹಿಸಿ ಅಭ್ಯಾಸ ಮಾಡುವುದು ಒಂದೇ ನಮ್ಮ ಮುಂದಿರುವ ಮಾರ್ಗ ಎಂದು ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ.ವಿರೂಪಾಕ್ಷ ಸಲಹೆ ನೀಡಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಯ ಡಿವಿಎಸ್ ಕಲಾ, ವಿeನ ಮತ್ತು ವಾಣಿಜ್ಯ ಕಾಲೇಜು ಐಕ್ಯೂಎಸಿ ಘಟಕ, ಕುವೆಂಪು ವಿವಿ ಸಂಯುಕ್ತ ಆಶ್ರಯದಲ್ಲಿ ಡಿವಿಎಸ್ ರಂಗಮಂದಿರದಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆ ೨೦೨೩-೨೪ ಕಾರ್ಯಕ್ರಮ ಉದ್ಘಾ ಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ದೇಹ ದಾರ್ಢ್ಯ ಸ್ಪರ್ಧೆ ದೃಷ್ಟಿಯಿಂದ ಗಮ ನಿಸಿದಾಗ ಯುವಜನರು ದೇಹಕ್ಕೆ ಹಾನಿ ಉಂಟು ಮಾಡಬಲ್ಲ ಪೌಡ ರ್ ಗಳ ಬಳಕೆ ಮಾಡುತ್ತಿzರೆ. ಹಾನಿಕಾರಕ ವಸ್ತುಗಳ ಬಳಕೆಯು ಕಡಿಮೆ ಸಮಯದಲ್ಲಿ ಫಲಿತಾಂಶ ನೀಡಿದಂತೆ ಕಂಡರೂ ಜೀವನ ಪೂರ್ತಿ ನೋವು ನೀಡುವ ಕಾಯಿ ಗಳನ್ನು ನಿಮ್ಮ ದೇಹಕ್ಕೆ ಆವರಿ ಸುವಂತೆ ಮಾಡುತ್ತದೆ. ಆದ್ದರಿಂದ ಯಾವುದೇ ಹಾನಿಯುಂಟು ಮಾಡುವ ವಸ್ತುಗಳ ಬಳಕೆ ಮಾಡಬೇಡಿ ಎಂದು ತಿಳಿಸಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜ ಶೇಖರ್ ಮಾತನಾಡಿ, ಶಿಸ್ತಿನ ಜೀವನ ಶೈಲಿ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿ. ಯುವಜನರು ಕ್ರೀಡಾ ಚಟುವಟಿಕೆ ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ವಹಿಸಬೇಕು. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಪ್ರತಿಯೊಬ್ಬ ಕ್ರೀಡಾಪಟುವಿಗೂ ಅಭಿನಂದನೆ ಎಂದು ಹೇಳಿದರು.
ಡಿವಿಎಸ್ ಕಲಾ, ವಿeನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾ ರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ಆರೋಗ್ಯ ಜಗೃತಿ ದೃಷ್ಟಿಯಿಂದ ಇಂತಹ ಸ್ಪರ್ಧೆ ಕಾರ್ಯಕ್ರಮಗಳು ಅತ್ಯಂತ ಸಹಕಾರಿ. ಪ್ರತಿಯೊಬ್ಬ ವ್ಯಕ್ತಿಯೂ ದೈಹಿಕ ಹಾಗೂ ಮಾನಸಿಕ ಆರೋ ಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು. ಸ್ಪರ್ಧೆ ಕಾರ್ಯಕ್ರಮಗಳಲ್ಲಿ ಭಾಗವ ಹಿಸಬೇಕು ಎಂದು ತಿಳಿಸಿದರು.
ದೇಶಿಯ ವಿದ್ಯಾಶಾಲಾ ಸಮಿತಿಯ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಯುವಜನತೆ ಸಮಾ ಜದ ಆಸ್ತಿ, ದೇಹ ಸದೃಢ ಆಗಿಟ್ಟು ಕೊಂಡರೆ ಮನಸ್ಸು ಸಹ ಸದೃಢ ವಾಗಿರುತ್ತದೆ. ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವ ಕೇಂದ್ರಗಳು ಹೆಚ್ಚಾಗಬೇಕು. ಯುವ ವಿದ್ಯಾರ್ಥಿ ಗಳಲ್ಲಿ ಆರೋಗ್ಯ ಜಗೃತಿ ಮುಖ್ಯ ಎಂದು ಅಭಿಪ್ರಾಯಪಟ್ಟರು.
ದೇಶಿಯ ವಿದ್ಯಾಶಾಲಾ ಸಮಿತಿ ಯ ಖಜಂಚಿ ಬಿ.ಗೋಪಿನಾಥ್, ಐಕ್ಯೂಎಸಿ ಸಂಚಾಲಕ ಎನ್. ಕುಮಾರಸ್ವಾಮಿ, ಡಿವಿಎಸ್ ಕಲಾ, ವಿeನ ಮತ್ತು ವಾಣಿಜ್ಯ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಚಿನ್. ಕೆ , ಕೇತನಾ ಆರ್ತಿ, ಡಾ. ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.