ವಿಐಎಸ್‌ಪಿಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ
ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಂಪನಿಯ ಆವರಣದೊಳಗಿರುವ ಫ್ಯಾಕ್ಟರಿ ಮೀಟಿಂಗ್ ಹಾಲ್‌ನಲ್ಲಿ ಸಂಭ್ರಮದಿಂದ ಆಚರಿಸಲಾ ಯಿತು.
ಈ ಸಂದರ್ಭದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕ (ವರ್ಕ್ಸ್) ಕೆ.ಎಸ್. ಸುರೇಶ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಜೆ. ಜಗದೀಶ್, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಉಪಾಧ್ಯಕ್ಷರಾದ ನಿತಿನ್ ಜೋಸ್ ಅವರು ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಿರಿಯ ಪ್ರಬಂಧಕರು (ಸಿಬ್ಬಂದಿ) ನವೀನ್ ರಾಹುಲ್ ಕಾರ್ಯಕ್ರಮ ನಿರೂಪಿಸಿದರು. ವಿಐಎಸ್‌ಎಲ್ ಕಾರ್ಮಿಕ ಸಂಘದ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾದಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಗಳು, ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.