ಸಕಾರಾತ್ಮಕ ಆಲೋಚನೆಗಳು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹಕಾರಿ…
ಶಿವಮೊಗ್ಗ: ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಯಶಸ್ಸು ಸಾಧಿಸಲು ಸ್ವಯಂ ಪರಿಶ್ರಮ ಅತ್ಯಂತ ಮುಖ್ಯ. ಸದೃಢ ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಅಲೋ ಚನೆಯು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹಕಾರಿ ಆಗುತ್ತದೆ ಎಂದು ಶಿವಮೊಗ್ಗ ನಗರಪಾಲಿಕೆ ಆಯುಕ್ತ ಮಾಯಣ್ಣಗೌಡ ಹೇಳಿ ದರು.
ಡಿವಿಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ಆಯೋಜಿಸಿದ್ದ ೨೦೨೨- ೨೩ ನೇ ಶೈಕ್ಷಣಿಕ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನ ಹಂತ ದಿಂದಲೇ ಉತ್ತಮ ಸ್ನೇಹಿತರ ಸಹ ವಾಸ ಬೆಳೆಸಿಕೊಳ್ಳಬೇಕು. ದಾರಿ ತಪ್ಪಿ ಸುವ ಹಾಗೂ ಋಣಾತ್ಮಕ ವಿಷಯ ಗಳಿಂದ ದೂರ ಇರಬೇಕು. ಕೆಟ್ಟ ಹವ್ಯಾಸವನ್ನು ಕಲಿಯಬಾರದು. ಸದಾ ಗೆಲುವು ಸಾಧಿಸುವ ಬಗ್ಗೆಯೇ ಅಲೋಚನೆ ಇರಬೇಕು. ನಿಮ್ಮ ಯಶಸ್ಸಿಗೆ ನೀವೇ ಕಾರಣರಾಗುತ್ತೀರಿ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಾಗ ರಾಜ್.ಪಿ. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಅತ್ಯಂತ ಮುಖ್ಯ. ಆರಂಭಿಕ ಹಂತದಲ್ಲಿ ಕಲಿಯುವ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಿಗೆ ಮಲ್ಯಯುತ ಅಂಶಗಳನ್ನು ಒಳಗೊಂಡಿರುವ ಶಿಕ್ಷಣ ನೀಡುವ ಕೆಲಸವನ್ನು ಡಿವಿಎಸ್ ಸಂಸ್ಥೆಯು ಮಾಡುತ್ತಿರುವುದು ಶ್ಲಾಘನೀಯ ಎಂದರು.
ವಿದ್ಯಾರ್ಥಿಗಳಿಗೆ ಏಕಾಗ್ರತೆ ಶಕ್ತಿ ಬಹಳ ಮುಖ್ಯ ಆಗಿದ್ದು, ಕ್ರೀಡಾ ಮತ್ತು ಶೈಕ್ಷಣಿಕ ಅಧ್ಯಯನದಲ್ಲಿ ಸಾಧನೆ ಮಾಡಲು ಸಹಕಾರಿ ಆಗುತ್ತದೆ. ಏಕಾಗ್ರತೆ ಶಕ್ತಿ ವೃದ್ಧಿಸಿ ಕೊಳ್ಳಲು ಪೂರಕ ಚಟುವಟಿಕೆಗಳನ್ನು ಪ್ರತಿ ನಿತ್ಯ ಅಭ್ಯಾಸ ಮಾಡಬೇಕು. ಕ್ರಿಯಾತ್ಮಕ ಆಲೋಚನೆ ಹಾಗೂ ಕೌಶಲ್ಯಗಳ ಕಲಿಕೆಗೂ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ಡಿವಿಎಸ್ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದ ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟ ದಲ್ಲಿ ವಿವಿಧ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿ ಉತ್ತಮ ಜೀವನ ರೂಪಿಸಿ ಕೊಂಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಸಾಧಕರ ಜೀವನ ಶೈಲಿಯೇ ಪ್ರೇರಣೆ ಎಂದರು.
ಡಿವಿಎಸ್ ಸಂಯುಕ್ತ ಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯ ಸಿ.ಕೆ.ಶ್ರೀಧರ್ ಮಾತನಾಡಿ, ಪ್ರತಿ ವರ್ಷ ಶೈಕ್ಷಣಿಕ ವರ್ಷದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಅಭಿನಂದಿಸಲಾಗುತ್ತದೆಂದರು.
ಡಿವಿಎಸ್ ಕಾರ್ಯದರ್ಶಿ ಎಸ್. ರಾಜಶೇಖರ್ ಸೇರಿದಂತೆ ಆಡಳಿತ ವರ್ಗ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊ ಟ್ಟರು. ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ಶಿಕ್ಷಕ ಜಿ.ಎಸ್.ವೆಂಕ ಟೇಶ್, ಎಸ್.ಕೇಶವಪ್ರಸಾದ್, ದಾದಾಪೀರ್, ಶಿಕ್ಷಕ ವರ್ಗ, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತಿತ ರರು ಉಪಸ್ಥಿತರಿದ್ದರು.