ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

೧೦೦ ಕೋಟಿಗೂ ಹೆಚ್ಚು ಬೆಳೆ ನಷ್ಟ; ಸೂಕ್ತ ಪರಿಹಾರಕ್ಕೆ ಆಗ್ರಹ

Share Below Link

ಹೊನ್ನಾಳಿ : ಹೊನ್ನಾಳಿ – ನ್ಯಾಮತಿ ಅವಳಿ ತಾಲೂಕಿನಲ್ಲಿ ೧೦೦ ಕೋಟಿಗೂ ಹೆಚ್ಚು ಬೆಳೆ ನಷ್ಟವಾಗಿದ್ದು ಕೂಡಲೇ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ರೈತರ ನೆರವಿಗೆ ದಾವಿಸ ಬೇಕೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸರ್ಕಾರವನ್ನು ಆಗ್ರಹಿಸಿದರು.
ಬಿಜೆಪಿ ಹೊನ್ನಾಳಿ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಎರಡನೇ ದಿನದ ಬರ ಅಧ್ಯಾಯನದ ಪ್ರವಾಸದ ಹಿನ್ನೆಲೆ ಯಲ್ಲಿ ಮಾರಿಕೊಪ್ಪ, ಹತ್ತೂರು, ಚಿಕ್ಕೇರಹಳ್ಳಿ, ದೊಡ್ಡೇರಹಳ್ಳಿ, ಕತ್ತಿಗಿ, ಮಾದೇನಹಳ್ಳಿ ಗ್ರಾಮಗಳಲ್ಲಿ ಬರ ಅಧ್ಯಾಯನ ಪ್ರವಾಸ ನಡೆಸಿ ರೈತರಿಂದ ಮಾಹಿತಿ ಪಡೆದು ಅವರು ಮಾತನಾಡಿದರು.


ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳು ಸೇರಿದಂತೆ ರಾಜ್ಯದ ೨೨೩ ತಾಲೂಕುಗಳಲ್ಲಿ ಬರ ಪೀಡಿತ ಎಂದು ಸರ್ಕಾರ ಘೋಷಣೆ ಮಾಡಿ ಕೇವಲ ೩೨೪ ಕೋಟಿ ರೂಪಾಯಿ ಮಾತ್ರ ಹಣ ಬಿಡುಗಡೆ ಮಾಡಿದ್ದು, ಇದರಲ್ಲಿ ದಾವಣಗೆರೆ ಜಿಗೆ ೯ ಕೋಟಿ ಹಣ ಬಿಡುಗಡೆ ಮಾಡಿದ್ದು ಇದರಿಂದ ರೈತರ ಕಣ್ಣೀರು ಒರೆಸಲು ಸಾಧ್ಯವಾ ಎಂದು ಪ್ರಶ್ನಿಸಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸೇರಿದಂತೆ ೩೦ ಸಾವಿರ ಹೆಕ್ಟೇರ್‌ಗೂ ಹೆಚ್ಚು ಬೆಳೆಗಳು ಹಾಳಾಗಿದ್ದು ಸುಮಾರು ನೂರು ಕೋಟಿಗೂ ಹೆಚ್ಚು ಬೆಳೆ ನಷ್ಟವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ರೇಣುಕಾಚಾರ್ಯ, ಸರ್ಕಾರ ಕೂಡಲೇ ರೈತರ ನೆರವಿಗೆ ದಾವಿಸುವ ಮೂಲಕ ಬರ ಪರಿಹಾರದ ಹಣವನ್ನು ಬಿಡಿಗಡೆ ಮಾಡುವಂತೆ ಆಗ್ರಹಿಸಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಬೊಕ್ಕಸದಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಹಣ ಬಿಡುಗಡೆ ಮಾಡಿದ್ದರು. ಅಲ್ಲದೇ ಮನೆ ಕಳೆದುಕೊಂಡವರಿಗೆ ಹಣ ಬಿಡುಗಡೆ ಮಾಡಿದ್ದರು ಎಂದ ಅವರು, ಈಗಿನ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ, ಸರ್ಕಾರ ಕೂಡಲೇ ಬರ ಪರಿಹಾರದ ಹಣ ಬಿಡುಗಡೆ ಮಾಡ ಬೇಕು ಇಲ್ಲದೇ ಇದ್ದರೇ ಮುಂದಿನ ದಿನಗಳಲ್ಲಿ ಹೊನ್ನಾಳಿ ಮಂಡಲದ ವತಿಯಿಂದ, ರೈತರೊಂದಿಗೆ ಉಗ್ರ ಹೋರಾಟ ಮಾಡ ಬೇಕಾಗುತ್ತದೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಒಂದೆಡೆ ಭೀಕರ ಬರಗಾಲದಿಂದ ಕೃಷಿ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದರೆ, ಮತ್ತೊಂದೆಡೆ ವಿದ್ಯುತ್ ಕಣ್ಣಾ ಮುಚ್ಚಾಲೆ ಆಟದಿಂದ ಕತ್ತಲ ಕರ್ನಾಟಕವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ ರೇಣುಕಾಚಾರ್ಯ, ನಾವು ರೈತರ ಜಮೀನಿಗೆ ಭೇಟಿ ನೀಡಿ ರೈತರ ನಾಡಿ ಮಿಡಿತ ಹಾಗೂ ಸಂಕಷ್ಟವನ್ನು ಹಾಲಿಸುವ ಕೆಲಸ ಮಾಡುತ್ತಿದ್ದೇವೆಂದರು.
ರೈತರು ಹಾಗೂ ಯೋಧರು ದೇಶದ ಬೆನ್ನೆಲೆಬು ಅಂತಹ ರೈತರಿಗೆ ಸಂಕಷ್ಟ ಎದುರಾಗಿದ್ದು ಸರ್ಕಾರ ಕೂಡಲೇ ರೈತರ ಸಂಕಷ್ಟಕ್ಕೆ ದಾವಿಸುವುದರ ಜೊತೆಗೆ ಎಕರೆಗೆ ೨೦ ಸಾವಿರ ಪರಿಹಾರ ನೀಡ ಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ತಾಲೂಕು ಪ್ರಧಾನಕಾರ್ಯದರ್ಶಿ, ತಾ.ಪಂ.ಮಾಜಿ ಉಪಾಧ್ಯಕ್ಷ ಸಿ.ಆರ್.ಶಿವಾನಂದ್, ಪುರಸಭೆ ಮಾಜಿ ಅಧ್ಯಕ್ಷರಾಧ ರಂಗನಾಥ್, ಪುರಸಭೆ ಸದಸ್ಯರಾಧ ಕೆ.ವಿ. ಶ್ರೀಧರ್, ಮುಖಂಡರಾದ ಪೇಟೆ ಪ್ರಶಾಂತ್, ಬೀರಪ್ಪ, ಪಲ್ಲವಿ ರಾಜು ಚೋರಡಿ ಶಿವು, ಪ್ರಭುಗೌಡ್ರು, ಚಿನ್ನಪ್ಪಳ್ಳಿ,ಹನುಮಂತಪ್ಪ ಸೇರಿದಂತೆ ಕಾರ್ಯಕರ್ತರು, ಗ್ರಾಮಸ್ಥರು, ರೈತರಿದ್ದರು.