ಜಿಲ್ಲಾ ಸುದ್ದಿತಾಜಾ ಸುದ್ದಿ

ಅ.18ರಿಂದ 20ರವರೆಗೆ ೩ದಿನ ಕೃಷಿ ಮತ್ತು ತೋಟಗಾರಿಕೆ ಮೇಳ…

Share Below Link

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ ೧೮ ರಿಂದ ೨೧ ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ -೨೦೨೪ನ್ನು ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಸಿದ್ಧತೆ ನಡೆಸಿದೆ ಎಂದು ವಿವಿ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಎಂಬ ಧೈಯವಾಕ್ಯದೊಂದಿಗೆ ಈ ಕೃಷಿ ಮೇಳ ನಡೆಯುವುದು ಎಂದರು. ವಿಶೇಷವಾಗಿ ಈ ಮೇಳ ದಲ್ಲಿ ತಂತ್ರಜನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಹೈ-ಟೆಕ್ ತೋಟಗಾರಿಕೆ- ಹೈಡೋ ಫೋನಿಕ್ ಕೃಷಿ, ಪುಷ್ಪ ಕೃಷಿ, ಜೇನು ಸಾಕಾಣಿಕೆ ಮತ್ತು ಕೀಟ ಪ್ರಪಂಚ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ, ಸಂಸ್ಕರಣೆ ಮತ್ತು ಮಲ್ಯವರ್ಧನೆ, ಸಾವಯವ ಕೃಷಿ, ಅಣಬೆ ಬೇಸಾಯ, ಸಮಗ್ರ ಜಲಾನಯನ ಅಭಿವೃದ್ಧಿ, ಪಶುಸಂ ಗೋಪನೆ ಮತ್ತು ಮೀನುಗಾರಿಕೆ ತಂತ್ರ ಜನಗಳು, ಹವಾಮಾನ ಆಧಾರಿತ ಕೃಷಿ, ಅಡಿಕೆಯಲ್ಲಿ ಬಹುಸ್ತರೀಯ ಪದ್ಧತಿ, ಅಡಿಕೆ ಬೆಳೆಯ ಸಮಗ್ರ ಕೃಷಿ ಪದ್ಧತಿ, ಪಾರಂಪರಿಕ ಅಡಿಕೆ ಸಂಸ್ಕರಣಾ ಕ್ರಮಗಳು, ಅಡಿಕೆಯ ವಿವಿಧ ತಳಿಗಳು, ಅಡಿಕೆ ಸಂಸ್ಕರಣೆ ಹಾಗೂ ಮಲ್ಯವರ್ಧಿತ ಉತ್ಪನ್ನಗಳು, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ ಏರ್ಪಡಿಸಿದೆ ಎಂದು ವಿವರಿಸಿದರು.


ಅಲ್ಲದೇ ಶ್ರೇಷ್ಟ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸ ಲಾಗಿದೆ ಎಂದ ಅವರು, ಕೃಷಿ ಮೇಳದ ತಾಂತ್ರಿಕ ಸಮಾವೇಶದಲ್ಲಿ ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆಯನ್ನು ಕೊಡಿಸಲಾಗುವುದು ಎಂದರು.
ನಾವು ಸೇವಿಸುವ ಆಹಾರವು ಸರಿಯಾದ ಪೋಷಕಾಂಶ ಗಳೊಂದಿಗೆ ಸಮತೋಲನದಲ್ಲಿರ ಬೇಕು. ಈ ಸಂದರ್ಭದಲ್ಲಿ ಅತಿ ಹೆಚ್ಚು ಸೂಕ್ತ ರಾಗಿ, ಜೋಳ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆಯುವುದ ರಿಂದ ವಿಕಸಿತ ಕೃಷಿಯನ್ನು ಕಾಪಾಡಿ ಕೊಳ್ಳಲು ಸಾಧ್ಯವಾಗುತ್ತದೆ ಎಂಬಂತಹ ವಿಚಾರಗಳನ್ನು ಈ ಕೃಷಿ-ತೋಟಗಾರಿಕೆ ಮೇಳದಲ್ಲಿ ಮನದಟ್ಟು ಮಾಡಲು ಪ್ರಯತ್ನಿಸಿ ದ್ದೇವೆ ಎಂದವರು ನುಡಿದರು.
ಅ.೧೮, ೧೯ ಮತ್ತು ೨೦ರಂದು ಮೂರು ದಿನಗಳ ಕಾಲ ಕೃಷಿ ವಿಜ್ಞಾನಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಮತ್ತು ಪ್ರಗತಿಪರ ರೈತರ ಜೊತೆ ಸಂವಾದ ಇರುತ್ತದೆ . ಅಲ್ಲದೇ ಕೃಷಿ ಮೇಳದ ಸಂದರ್ಭ ದಲ್ಲಿ ಕೃಷಿ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆಯ ‘ಸಸ್ಯಕಾಶಿ’ಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಏಳು ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿ ಕೃಷಿ ಮೇಳವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನ ಉದ್ಘಾಟಿಸಲಿದ್ದು, ಕೃಷಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ತೋಟಗಾರಿಕೆ ಸಚಿವರು ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿಶೇಷ ಸಾಧನೆಗೈದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು. ಅಲ್ಲದೆ ರೈತ ಸಮೂಹಕ್ಕೆ ಮಾಹಿತಿಗಾಗಿ ವಿವಿಧ ಬೆಳೆ ಮತ್ತು ತಾಂತ್ರಿಕತೆಗಳನ್ನು ಹೊತ್ತ ತಾಂತ್ರಿಕ ಕೈಪಿಡಿಗಳ ಬಿಡುಗಡೆ ಮಾಡಲಾಗುವುದು.
ಈ ಮೇಳದಲ್ಲಿ ಮೀನುಗಾರಿಕೆ, ಯಂತ್ರೋಪಕರಣಗಳು, ಪಶು ಸಂಗೋಪನೆ ಸೇರಿದಂತೆ ವಿವಿಧ ರೀತಿಯ ೨೦೦ಕ್ಕೂ ಹೆಚ್ಚಿನ ಸ್ಟಾಲ್‌ಗಳನ್ನು ತೆರೆಯಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ|| ಕೆ.ಟಿ.ಗುರುಮೂರ್ತಿ, ಶಿಕ್ಷಣ ನಿರ್ದೇಶಕ ಡಾ|| ಹೇಮ್ಲಾ ನಾಯ್ಕ್, ಕೃಷಿ ಡೀನ್ ಡಾ|| ತಿಪ್ಪೇಶ್ ಡಿ ಸೇರಿದಂತೆ ವಿವಿಯ ವಿವಿಧ ವಿಭಾಗಗಳ ಉಪನ್ಯಾಸಕರು, ತಾಂತ್ರಿಕ ವರ್ಗದವರು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.