ತಾಜಾ ಸುದ್ದಿರಾಜಕೀಯ

5 ಕೆಜಿ ಅಕ್ಕಿ, ೫ ಕೆಜಿ ಸಿರಿಧಾನ್ಯ, ಪ್ರತಿದಿನ ಅರ್ಧ ಲೀಟರ್ ಹಾಲುಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್: ಬಿಜೆಪಿ ಪ್ರಣಾಳಿಕೆ..

Share Below Link

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ ೫ ಕೆಜಿ ಅಕ್ಕಿ ಜೊತೆ ಇನ್ನೂ ೫ ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆ ಯನ್ನು ಬಿಡು ಗಡೆ ಮಾಡಿದರು.
ನಂತರ ಮಾತನಾಡಿದ ಪ್ರಣಾ ಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು ೩೮ ವಿವಿಧ ವಿಭಾಗ, ೧೭೮ ಕ್ಷೇತ್ರ ಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ ೨೯,೩೦೬ ಸಲಹೆ ಸೇರಿ ಒಟ್ಟು ೬ ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. ೧೭ ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿ ಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ ೯೦೦ ಸಲಹೆ ಬಂದಿವೆ, ೫೦ ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದರು.
ಆರೋಗ್ಯಯುಕ್ತ ನಾಡು, ಯುವಕರ ಸಬಲೀಕರಣ, ಮಹಿಳೆ ಯರನ್ನು ಮುಖ್ಯ ವಾಹಿನಿಗೆ ತರಲು ಮತ್ತು ವೃದ್ಧರು, ಅಂಗವಿ ಕಲರು, ವಿಧವೆಯರಿಗೆ ಅನುಕೂಲಕರ ಕಾರ್ಯಕ್ರಮ ರೂಪಿಸಲಾಗಿದೆ. ಸಿಲಿಂಡರ್ ಬೆಲೆ ಬಗ್ಗೆಯೂ ಪ್ರಣಾಳಿಕೆ ಯಲ್ಲಿದೆ ಎಂದು ತಿಳಿಸಿದರು.
ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬೇರೆ ಪಕ್ಷದ ರೀತಿ ಸುಳ್ಳು ಭರವಸೆ ಕೊಡದೆ ಈಡೇರಿಸುವ ಭರವಸೆ ಕೊಡುತ್ತಿದ್ದೇವೆ. ಕಾಂಗ್ರೆಸ್ ೧೩ ರಾಜ್ಯದಲ್ಲಿ ಭರವಸೆ ನೀಡಿದ್ದರೂ ಜನರು ತಿರಸ್ಕಾರ ಮಾಡಿದ್ದಾರೆ. ಜನರಿಗೆ ಅವರ ಮೇಲೆ ವಿಶ್ವಾಸ ಇಲ್ಲ, ಕಾಂಗ್ರೆಸ್ ಆಡಳಿತ ರಾಜ್ಯ ಗಳಲ್ಲಿ ಭರವಸೆ ಈಡೇರಿಸಲಾಗಿಲ್ಲ, ಹಾಗಾಗಿ ಅವರನ್ನು ಜನ ನಂಬಲ್ಲ ಎಂದರು.
ಸಿಎಂ ಬೊಮ್ಮಾಯಿ ಅವರು ಮಾತನಾಡಿ, ಇಡೀ ರಾಷ್ಟ್ರದ ಆಡಳಿತ ಚುಕ್ಕಾಣಿ ಹಿಡಿದಿರುವ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ, ದೇಶದ ಆಡಳಿತದಲ್ಲಿ ದಿಕ್ಸೂಚಿ ಪಾತ್ರ ವಹಿಸುತ್ತಿದೆ. ದೇಶವನ್ನು, ರಾಜ್ಯ ವನ್ನು ಗಮನದಲ್ಲಿರಿಸಿಕೊಂಡು ಪ್ರಣಾಳಿಕೆ ಮಾಡಬೇಕು, ಆಡಳಿತ ನಡೆಸಬೇಕಿದೆ. ಅತ್ಯಂತ ಪ್ರಬಲ ರಾಜ್ಯಗಳ ಒಕ್ಕೂಟವೇ ದೇಶದ ಬಲ. ಕರ್ನಾಟಕದ ಅಭ್ಯುದಯಕ್ಕೆ ಪೂಕರ ವಾಗಿ ಪ್ರಣಾಳಿಕೆ ಸಿದ್ಧಪಡಿ ಸಲಾಗಿದೆ ಎಂದು ಹೇಳಿದರು.
ಬಿಜೆಪಿ ಪ್ರಣಾಳಿಕೆಯಲ್ಲಿ ಏನೇನಿದೆ…?

  • ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ ೩ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.
  • ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಅರೋ ಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿ ಕೆಯ ವಾರ್ಡ್‌ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸು ತ್ತೇವೆ.
  • ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂ ಬ ಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.
  • ಉನ್ನತ ಮಟ್ಟದ ಸಮಿತಿ ಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗ ರಿಕ ಸಂಹಿತೆ ಜಾರಿಗೊಳಿಸುತ್ತೇವೆ.
  • ರಾಜ್ಯದಾದ್ಯಂತ ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆ ಯಡಿ ೧೦ ಲಕ್ಷ ವಸತಿ ನಿವೇಶನ ಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
  • ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆ ಯಡಿ ಎಸ್‌ಸಿ, ಎಸ್‌ಟಿ ಸಮು ದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ ೧೦ ಸಾವಿರದವ ರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.
  • ಬೆಂಗಳೂರಿನ ಅಪಾರ್ಟ್ ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯಿದೆ ೧೯೭೨ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿ ಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನ ಗೊಳಿಸುತ್ತೇವೆ.
  • ವಿಶ್ವೇಶ್ವರಯ್ಯ ವಿದ್ಯಾ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆ ಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
  • ಸಮನ್ವಯ ಯೋಜನೆ ಯಡಿ ತ್ವರಿತಗತಿಯಲ್ಲಿ ಎಸ್‌ಎಂಇ ಗಳು ಮತ್ತು ಐಟಿಐಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
  • ಐಎಎಸ್/ಕೆಎಎಸ್/ಬ್ಯಾಂಕಿಂಗ್/ ಸರ್ಕಾರಿ ಉದ್ಯೋ ಗಾಕಾಂಕ್ಷಿಗಳು ತರಬೇತಿ ಪಡೆ ಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾ ಕಾಂಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
  • ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ /ಆರೋಗ್ಯ ಕೇಂದ್ರಗಳಲ್ಲಿನ ಮೂಲ ಸೌಕರ್ಯಗಳನ್ನು ಸುಧಾರಿ ಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತ ವಾಗಿ ಸಂಪೂರ್ಣ ಆರೋಗ್ಯ ತಪಾ ಸಣೆಯ ಸೌಲಭ್ಯ ಕಲ್ಪಿಸುತ್ತೇವೆ.
  • ನಮ್ಮಮುಂದಿನ ಪೀಳಿಗೆ ಗಾಗಿ ಬೆಂಗಳೂರನ್ನು ಅಭಿವೃದ್ಧಿ ಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾ ಗುತ್ತದೆ. ತಂತ್ರಜನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮ ವನ್ನು ಕಾರ್ಯಗತ ಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾ ಡಿಕೊಡುವ ಸುಸಂಘಟಿತ ಸಾರಿಗೆ ಜಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋ ವೇಶನ್‌ನ ಜಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
  • ಕರ್ನಾಟಕವನ್ನು ಎಲೆಕ್ನಿಕ್ ವಾಹನಗಳ ಪ್ರಮುಖ ಕೇಂದ್ರ ವನ್ನಾಗಿ ರೂಪಿಸುತ್ತೇವೆ. ಪೂರಕ ವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ೧,೦೦೦ ಸ್ಟಾರ್ಟ್ ಅಪ್ ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್ ಗಳನ್ನು ಎಲೆಕ್ನಿಕ್ ಬಸ್‌ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲ ಯದಲ್ಲಿ ಇಬಿ ಸಿಟಿ ಅಭಿವೃದ್ಧಿ.
  • ಎಲ್ಲಾ ಗ್ರಾಮ ಪಂಚಾ ಯಿತಿ ಗಳಲ್ಲಿ ಕಿರು ಶೀತಲೀಕರಣ ಸೌಲಭ್ಯ ಗಳು ಮತ್ತು ಕೃಷಿ ಸಂಸ್ಕ ರಣಾ ಘಟಕ ಗಳನ್ನು ಸ್ಥಾಪಿಸಲು ೨,೩೦,೦೦೦ ಕೋಟಿ ಮೊತ್ತದ ಕೆ- ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿ ಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, ೫ ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್ ಗಳು ಮತ್ತು ೩ ಹೊಸ ಆಹಾರ ಸಂಸ್ಕ ರಣಾ ಪಾರ್ಕ್‌ಗಳನ್ನು ಸ್ಥಾಪಿಸು ತ್ತೇವೆ.
  • ಅತ್ಯಾಧುನಿಕ ಮೂಲ ಸೌಕ ರ್ಯಗಳನ್ನು ಒದಗಿಸಿ ಕರ್ನಾಟಕ ವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್ ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್ ಮತ್ತು ಕಾವೇರಿ ಸರ್ಕ್ಯೂಟ್ ಗಾಣಗಾಪುರ ಕಾರಿಡಾರ್‌ರ ಅನ್ನು ಅಭಿವೃದ್ಧಿ ಪಡಿಸಲು ೯೧,೫೦೦ ಕೋಟಿ ವಿನಿಯೋಗಿಸುತ್ತೇವೆ.
  • ಉತ್ಪಾದನಾ ವಲಯದಲ್ಲಿ ೧೦ ಲಕ್ಷ ಉದ್ಯೋಗಗಳನ್ನು ಬೆಂಗಳೂರಿನ ಆಚೆ ಸೃಷ್ಟಿಸುವ ಲಾಜಿಸ್ಟಿಕ್ಸ್ ಕೈಗಾರಿಕಾ ಕ್ಲಸ್ಟರ್‌ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯ ಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಸಂಯೋಜಿ ಸುವ ಮೂಲಕ ಉತ್ಪಾದನಾ ಆಧರಿತ ಪ್ರೋತ್ಸಾಹ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತೇವೆ.