ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿ : ಅವಕಾಶ ಸದ್ಬಳಕೆ ಮಾಡಿಕೊಳ್ಳಲುಜಿ ನ್ಯಾಯಾಧೀಶರ ಕರೆ…

Share Below Link

ಶಿವಮೊಗ್ಗ: ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೇಲೆ ಶೇ.೫೦ ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು.
ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಲ್ಲಿ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಿಗೆ ದಂಡವನ್ನು ಪಾವತಿಸಲು ಶೇ.೫೦ ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಸೆ.೧೨ರವರೆಗೆ ಈ ರಿಯಾಯಿತಿ ಅನ್ವಯಿಸುತ್ತದೆ. ಆದ್ದರಿಂದ ಬಾಕಿ ಉಳಿಸಿಕೊಂಡಿರುವವರು ಕೂಡಲೇ ಈ ಅವಕಾಶವನ್ನು ಬಳಕೆ ಮಾಡಿಳ್ಳಬೇಕೆಂದರು.
ಪೊಲೀಸ್ ಇಲಾಖೆಯಿಂದ ಆ.೨೩ ರಿಂದ ಸೆ.೨ ರವರೆಗೆ ಈ ರಿಯಾಯಿತಿಯಡಿ ಒಟ್ಟು ೧೫,೪೬೫ ಇ-ಚಲನ್ ಪ್ರಕರಣಗಳನ್ನು ರೂ.೬೩,೨೨,೭೫೦/- ಮೊತ್ತ ಪಾವತಿಸಿ ಮುಕ್ತಾಯ ಮಾಡಲಾಗಿದೆ. ಇಂದಿನಿಂದ ಇನ್ನು ೯ ದಿನಗಳ ಕಾಲದವರೆಗೆ ಮಾತ್ರ ಈ ಅವಕಾಶವಿದ್ದು ಸಾರ್ವಜನಿಕರು ತಮ್ಮ ವಾಹನಗಳ ಮೇಲೆ ಪೊಲೀಸರಿಂದ ನೋಂದಾಯಿಸಲ್ಪಟ್ಟ ದಂಡವನ್ನು ಶೀಘ್ರವಾಗಿ ಪಾವತಿಸುವಂತೆ ಅವರು ತಿಳಿಸಿದರು.
ರಾಷ್ಟ್ರೀಯ ಲೋಕ್ ಅದಾಲತ್: ಶಿವಮೊಗ್ಗ ಜಿಯ ಎ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಮತ್ತು ಪಕ್ಷಗಾರರಿಗೆ ತ್ವರಿತ ನ್ಯಾಯ ದಾನದ ದೃಷ್ಟಿಯಿಂದ ಈ ವರ್ಷದ ೩ನೇ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ದಿನಾಂಕ: ೧೩.೦೯.೨೦೨೫ ರಂದು ಹಮ್ಮಿಕೊಳ್ಳಲಾಗಿದೆ.


ಅಂದು ಎ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾದದ ವ್ಯಾಜ್ಯಗಳು, ಅಪಘಾತಕ್ಕೆ ಸಂಬಂಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬಂಧಿಸಿದ ವ್ಯಾಜ್ಯಗಳು, ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ಉಭಯ ಪಕ್ಷಗಾರರ ಉಪಸ್ಥಿತಿಯಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಿಕೇತರ ಸಂಧಾನಕಾರರು ರಾಜೀ ಸಂಧಾನದ ಪ್ರಕ್ರಿಯೆಯನ್ನು ಕೈಗೊಂಡು ಪಕ್ಷಗಾರರು ವಿವಾದವನ್ನು ಇತ್ಯರ್ಥಪಡಿಸಿಕೊಂಡರೆ ಅದರಂತೆ ಅಂತಿಮ ಆದೇಶವನ್ನು ಅದೇ ದಿನದಂದು ನೀಡುವ ಅವಕಾಶವನ್ನು ಸಾರ್ವಜನಿಕರು ಮತ್ತು ಪಕ್ಷಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಈ ಮೂಲಕ ಮನವಿ ಮಾಡಿದರು.
ಈ ಮುಂಚೆ ದಿನಾಂಕ: ೧೨.೦೭.೨೦೨೫ ರಂದು ಕೈಗೊಳ್ಳಲಾದ ಈ ವರ್ಷದ ೨ನೇ ರಾಪ್ಟ್ರೀಯ ಲೋಕ್ ಅದಾಲತ್‌ನಲ್ಲಿ ವಿಚಾರಣೆಗೆ ಬಾಕಿ ಇದ್ದ ೧೪೨೨೫ ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿದ್ದು, ಅವುಗಳ ಮೂಲಕ ಪಕ್ಷಗಾರರು ಒಟ್ಟು ರೂ. ೩೦,೫೦,೧೫,೩೮೭/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಲಾಗಿರುತ್ತದೆ. ಅದೇ ಸಂದರ್ಭದಲ್ಲಿ ಒಟ್ಟು ೧,೪೪,೮೨೫ ವ್ಯಾಜ್ಯ ಪೂರ್ವ ಪ್ರಕರಣಗಳು ಕೊನೆಗೊಂಡಿದ್ದು, ಅವುಗಳ ಮೂಲಕ ಒಟ್ಟು ರೂ. ೭೫,೪೦,೮೦,೮೩೧/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ ಎಂದು ತಿಳಿಸಿದರು.
ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ – ೯೦ ದಿನಗಳ ಮಧ್ಯಸ್ಥಿಕೆ ಅಭಿಯಾನ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಶಿವಮೊಗ್ಗ ಜಿಯಲ್ಲಿನ ಎ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾಹದ ವ್ಯಾಜ್ಯಗಳು, ಅಪಘಾತಕ್ಕೆ ಸಂಬಂಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬಂಧಿಸಿದ ವ್ಯಾಜ್ಯಗಳು, ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರ ಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ೯೦ ದಿನಗಳ ಮಧ್ಯಸ್ಥಿಕೆ ಅಭಿಯಾನವನ್ನು ದಿನಾಂಕ: ೦೧.೦೭.೨೦೨೫ ರಿಂದ ೩೦.೦೯.೨೦೨೫ ರವರೆಗೆ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು.


ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ತಮಗೆ ಸೂಕ್ತ ಎನ್ನಿಸುವ ನ್ಯಾಯಯುತವಾದ ಪರಿಹಾರಗಳನ್ನು ಪಡೆದುಕೊಳ್ಳಲು ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ಅಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ನೇಮಿಸಲು ತಾವಾಗಲೀ ಅಥವಾ ವಕೀಲರ ಮೂಲಕ ಮನವಿ ಮಾಡಿಕೊಂಡು ಅದರಂತೆ ಮಧ್ಯಸ್ಥಿಕೆ ಪ್ರಕರಣಗಳನ್ನು ಜಿ ಕಾನೂನು ಸೇವೆಗಳ ಪ್ರಾಧಿಕಾರ, ಜಿಯ ಎ ಕಾನೂನು ಸೇವಾ ಸಮಿತಿಯಲ್ಲಿ ಮಧ್ಯಸ್ಥಿಕೆದಾರರಾಗಿ ಸೇವೆ ಸಲ್ಲಿಸುತ್ತಿರುವ ನುರಿಯ ಹಿರಿಯ ನ್ಯಾಯವಾದಿಗಳ ಸಹಾಯದಿಂದ ಪ್ರಕರಣಗಳಲ್ಲಿ ನ್ಯಾಯ ಪಡೆದುಕೊಳ್ಳಬಹುದು. ಈವರೆಗೆ ೧೪೨೦ ಪ್ರಕರಣಗಳನ್ನು ಮಧ್ಯಸ್ಥಿಕೆಗಾಗಿ ಗುರುತಿಸಿದ್ದು, ೧೧೨ ಪ್ರಕರಣಗಳನ್ನು ಯಶಸ್ವಿಯಾಗಿ ರಾಜೀ ಮೂಲಕ ಬಗೆಹರಿಸಲಾಗಿದೆ ಎಂದರು.
ಖಾಯಂ ಲೋಕ್ ಅದಾಲತ್ ಜಗೃತಿ ಅಭಿಯಾನ : ಸಾರ್ವಜನಿಕ ಉಪಯುಕ್ತ ಸೇವೆಗಳನ್ನು ನೀಡುತ್ತಿರುವ ಬ್ಯಾಂಕ್‌ಗಳು, ವಿಮಾ ಕಂಪನಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಲ್ಲಿ ಖಾಯಂ ಲೋಕ್ ಅದಾಲತ್ ಕುರಿತು ಜಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಖಾಯಂ ಲೋಕ್ ಅದಾಲತ್ ಒಂದು ವಿಶೇಷ ನ್ಯಾಯಾಲಯವಾಗಿದ್ದು, ಪ್ರಕರಣಗಳ ರಾಜೀ ಸಂಧಾನವೇ ಈ ನ್ಯಾಯಾಲಯದ ಮೊದಲ ಆದ್ಯತೆಯಾಗಿದೆ. ಪ್ರಯಾಣಿಕರನ್ನು ಅಥವಾ ಸರಕನ್ನು ಸಾಗಿಸುವ ಭೂ ಸಾರಿಗೆ, ಜಲಸಾರಿಗೆ, ವಾಯು ಸಾರಿಗೆ ಸೇವೆಗಳು, ಅಂಚೆ ತಂತಿ, ದೂರವಾಣಿ ಸೇವೆಗಳು, ವಿದ್ಯುತ್, ನೀರು ಸರಬರಾಜು, ಸಾರ್ವಜನಿಕ ನೈರ್ಮಲ್ಯ ಹಾಗೂ ಚರಂಡಿ ವ್ಯವಸ್ಥೆ, ವಿಮಾ ಸೇವೆ, ಆಸ್ಪತ್ರೆ ಹಾಗೂ ಔಷಧಾಲಯಗಳ ಸೇವೆ, ಹಣಕಾಸು ಸಂಸ್ಥೆ ಹಾಗೂ ಬ್ಯಾಂಕ್ ಸೇವೆ, ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟ ಸೇವೆ, ಗೃಹ ಹಾಗೂ ರಿಯಲ್ ಎಸ್ಟೇಟ್ ಸೇವೆ ಒಳಗೊಂಡಂತೆ ಇನ್ನಿತರ ಸಾರ್ವಜನಿಕ ಉಪಯುಕ್ತ ಸೇವೆಗಳ ಪ್ರಕರಣಗಳನ್ನು ಈ ನ್ಯಾಯಾಲಯದಲ್ಲಿ ಸಲ್ಲಿಸಬಹುದು. ಇತರೆ ನ್ಯಾಯಾಲಯಗಳಂತೆ ಇಲ್ಲಿ ಶುಲ್ಕ ಕಟ್ಟುವಂತಿಲ್ಲ ಹಾಗೂ ಯಾವುದೇ ಆದಾಯದ ಮಿತಿ ಇರುವುದಿಲ್ಲ. ಈ ಖಾಯಂ ಲೋಕ್ ಅದಾಲತ್ ರಾಜ್ಯದ ೬ ಜಿಗಳಲ್ಲಿ ಕಚೇರಿ ಹೊಂದಿದ್ದು ಶಿವಮೊಗ್ಗ ಜಿಯು ಮಂಗಳೂರಿನ ವ್ಯಾಪ್ತಿಗೆ ಬರುತ್ತದೆ. ಮುಂದಿನ ದಿನಗಳಲ್ಲಿ ಮಂಗಳೂರಿನ ಪೀಠವು ನಿಯಮಿತವಾಗಿ ಶಿವಮೊಗ್ಗಕ್ಕೆ ಬಂದು ಅದಾಲತ್ ನಡೆಸಲಿದೆ ಎಂದು ಮಾಹಿತಿ ನೀಡಿದರು.
ಖಾಯಂ ಜನತಾ ನ್ಯಾಯಾಲಯದಲ್ಲಿ ಜಿ ಮತ್ತು ಸತ್ರ ನ್ಯಾಯಾಧೀಶರು ಅಧ್ಯಕ್ಷರಾಗಿ ಹಾಘೂ ಇಬ್ಬರು ಸದಸ್ಯರು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದಂತೆ ಕರ್ತವ್ಯ ನಿರ್ವಹಿಸುತ್ತಾರೆ. ರೂ.೧ ಕೋಟಿ ಮಲ್ಯದ ವ್ಯಾಜ್ಯಗಳನ್ನು ಅಥವಾ ಹಣಕಾಸಿನ ವ್ಯವಹಾರ ಪ್ರಕರಣಗಳನ್ನು ದಾಖಲಿಸಬಹುದು. ಅರ್ಜಿದಾರರಿಗೆ ಯಾವುದೇ ಆದಾಯ ಮಿತಿ ಇರುವುದಿಲ್ಲ ಹಾಗೂ ನ್ಯಾಯಾಲಯದ ಶುಲ್ಕವಿರುವುದಿಲ್ಲ. ಖಾಯಂ ಜನತಾ ನ್ಯಾಯಾಲಯದಲ್ಲಿ ನೀಡಿದ ಐತೀರ್ಪು ಅವಾರ್ಡ್ನ್ನು ಯಾವುದೇ ಸಿವಿಲ್ ಅಥವಾ ಜಿ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿಲ್ಲ.
ನಾಲ್ಸಾ ಕಾನೂನು ಉಚಿತ ಸಹಾಯ ವಾಣಿ ೧೫೧೦೦ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿಯ ಸೂಚನೆಯಂತೆ ಜಿ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ವತಿಯಿಂದ ಒಬ್ಬ ಮಹಿಳಾ ವಕೀಲರು ಹಾಗೂ ಒಬ್ಬ ಪುರುಷ ವಕೀಲರನ್ನು ಉಚಿತ ಸಹಾಯವಾಣಿ ಸಂಖ್ಯೆ ೧೫೧೦೦ ಗೆ ಬರುವ ಕರೆಗಳನ್ನು ಸ್ವೀಕರಿಸಿ ಸಾರ್ವಜನಿಕರ ಕುಂದು ಕೊರತೆಗೆ ಉಚಿತ ಕಾನೂನು ಸಲಹೆ ನೀಡಲು ನೇಮಿಸಲಾಗಿದ್ದು, ಸಾರ್ವಜನಿಕರು ಈ ಉಚಿತ ಸಹಾಯವಾಣಿ ಸಂಖ್ಯೆ ಕರೆ ಮಾಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಹೊರತುಪಡಿಸಿ ಉಳಿದಂತೆ ತಮಗೆ ಅವಶ್ಯಕವಿರುವ ತುರ್ತು ಕಾನೂನು ಸಲಹೆಯನ್ನು ಪಡೆದುಕೊಳ್ಳಬಹುದೆಂದರು.
ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಹಾಜರಿದ್ದರು.