ಜಿಲ್ಲಾ ಸುದ್ದಿತಾಜಾ ಸುದ್ದಿ

ಕರಾಳ ಇತಿಹಾಸಕ್ಕೆ ೫೦ ವರ್ಷ: ಬಿಜೆಪಿಯಿಂದ ವಿಶೇಷ ಕಾರ್‍ಯಕ್ರಮ…

Share Below Link

ಹೊನ್ನಾಳಿ : ಕೇಂದ್ರದಲ್ಲಿ ೧೯೭೫ರ ಸಮಯದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಮಯದಲ್ಲಿ ತನ್ನ ಸ್ವಾರ್ಥ ಸಾಧನೆಗಾಗಿ ದೇಶಕ್ಕೆ ತುರ್ತು ಪರಿಸ್ಥಿತಿ ಘೋಷಣೆ ಮಾಡಿ ಪ್ರಜಪ್ರಭುತ್ವದ ಅಂಗಾಂಗ ತುಂಡರಿಸಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಆಶಯಕ್ಕೆ ಘಾಸಿ ಮಾಡಿದ ಘಟನೆಗೆ ಇಂದಿಗೆ ೫೦ ವರ್ಷ ಪೂರೈಸಿದೆ ಎಂದು ಸಂಸದ ಬಿ ವೈ ರಾಘವೇಂದ್ರ ನುಡಿದರು.
ದೇಶದೊಳಗೆ ಯಾರೂ ಸಹ ಊಹಿಸಿದ ಅನೇಕ ಘಟನಾವಳಿಗಳನ್ನು ಇಂದಿನ ಯುವ ಜನಾಂಗಕ್ಕೆ ಹಾಗೂ ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಮಹತ್ವಾಕಾಂಕ್ಷೆಯಿಂದ ಬಿಜೆಪಿ ದೇಶದಾದ್ಯಂತ ತುರ್ತು ಪರಿಸ್ಥಿತಿ ಹೇರಿಕೆ – ಕರಾಳ ಇತಿಹಾಸಕ್ಕೆ ೫೦ ವರ್ಷ ಎಂಬ ಅರ್ಥಪೂರ್ಣ ಕಾರ್ಯಕ್ರಮದ ಹಮ್ಮಿಕೊಂಡಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಧ್ಯಕ್ಷರು ಮತ್ತು ತಾಲ್ಲೂಕು ಅಧ್ಯಕ್ಷರು, ಮಾಜಿ ಶಾಸಕರು, ಪಕ್ಷದ ಹಿರಿಯ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.