ಜಿಲ್ಲಾ ಸುದ್ದಿತಾಜಾ ಸುದ್ದಿ

ಕೊಂಕಣ ರೈಲ್ವೇ ಮುಂದುವರೆದ ಅಭಿವೃದ್ಧಿ ಕಾಮಗಾರಿಗಳಿಗೆ ೯೦೦೦ಕೋಟಿ ಮಂಜೂರು…

Share Below Link

ಶಿವಮೊಗ್ಗ : ಕೊಂಕಣ ರೈಲ್ವೆಯ ಮುಂದುವರೆದ ಅಭಿವೃದ್ಧಿ ಕಾಮಗಾರಿಗಳಿಗೆ ೯೦೦೦ ಕೋಟಿ ರೂ.ಗಳನ್ನು ಮಂಜೂರು ಮಾಡುವುದರ ಜೊತೆಗೆ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವು ಯೋಜನೆಗಳನ್ನು ಕೈಗೆತ್ತಿ ಕೊಳ್ಳುವ ಮೂಲಕ ರಾಜ್ಯದ ರೈಲ್ವೇ ಕ್ಷೇತ್ರದ ವಿಕಾಸಕ್ಕಾಗಿ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೇಳಿದರು.
ಅವರು ಇಂದು ನಗರದ ಪ್ರವಾಸಿ ಮಂದಿರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳ ಪಡುವ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.
ಈ ಭಾಗದ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು, ಮೂಲ ಸೌಕರ್ಯ ಯೋಜನೆಗಳು ಹಾಗೂ ಪ್ರಯಾಣಿಕರಿಗೆ ಒದಗಿಸಲಾಗುತ್ತಿ ರುವ ಸೌಲಭ್ಯಗಳ ಪ್ರಗತಿಯನ್ನು ಪರಿಶೀಲಿಸಿರುವುದಾಗಿ ತಿಳಿಸಿದ ಅವರು, ರಾಜ್ಯದಲ್ಲಿ ೫೨೦೦೦ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಮುಂದಿನ ೨೫-೩೦ವರ್ಷಗಳ ಅವಧಿಯ ದೂರದೃಷ್ಟಿಯನ್ನಿಟ್ಟು ಕೊಂಡು ರೈಲ್ವೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಉzಶಿಸಲಾಗಿದೆ ಎಂದ ಅವರು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಯೋಜನೆಯ ಗುತ್ತಿಗೆದಾರ ರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಿ, ಅಂದಿನ ಟಂಡರ್ ರದ್ದುಗೊಳಿಸಿ, ಮುಂದಿನ ಎರಡು ತಿಂಗಳೊಳಗಾಗಿ ಹೊಸ ಟೆಂಡರ್‌ಆಹ್ವಾನಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಹೆಚ್ಚಿಸುವುದಾಗಿ ತಿಳಿಸಿದ ಅವರು, ಶಿವಮೊಗ್ಗ-ಬೀರೂರು ರೈಲ್ವೆ ಮಾರ್ಗದ ಡಬ್ಲಿಂಗ್‌ಗೆ ಈಗಾಗಲೇ ಸರ್ವೆ ಕಾರ್ಯ ನಡೆಯುತ್ತಿದೆ. ಶೃಂಗೇರಿ-ಶಿವಮೊಗ್ಗ ಹೊಸ ರೈಲು ಮಾರ್ಗದ ಪ್ರಸ್ತಾವನೆಯೂ ಪ್ರಗತಿಯಲ್ಲಿದೆ ಎಂದರು.
ಕೇಂದ್ರ ಸರ್ಕಾರವು ಹೊಸ ರೈಲ್ವೆ ಯೋಜನೆಗಳಿಗೆ, ವಿಸ್ತೃತ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿದೆ. ವಿಶೇಷವಾಗಿ ಮಂಗಳೂರು, ಉಡುಪಿ, ಶಿವಮೊಗ್ಗ ಭಾಗಗಳ ರೈಲ್ವೆ ಸಂಪರ್ಕ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳನ್ನು ಪರಿಶೀಲಿಸ ಲಾಗಿದೆ. ೨೦೧೮ರಲ್ಲಿ ಅನುಮೋದಿ ತಗೊಂಡಿದ್ದ ಶಿವಮೊಗ್ಗ- ಶೃಂಗೇರಿ- ಮಂಗಳೂರು ರೈಲ್ವೇ ಮಾರ್ಗಕ್ಕೆ ೨೦೨೫ರಲ್ಲಿಯೇ ಅಂತಿಮ ಹಂತದ ಸರ್ವೇ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.
೧೭೮ಕಿ.ಮೀ. ದೂರದ ತಾಳಗುಪ್ಪ- ಸಿದ್ಧಾಪುರ-ಸಿರ್ಸಿ- ಮುಂಡಗೋಡ-ಹುಬ್ಬಳ್ಳಿ ಮಾರ್ಗದ ಸರ್ವೇ ಕಾರ್ಯವನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳ ಲಾಗುವುದು. ೧೫೧೧ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುದ ತಾಳಗುಪ್ಪ -ಹೊನ್ನಾವರ ಹೊಸ ಮಾರ್ಗಕ್ಕೆ ೨೦೨೫ರಲ್ಲಿಯೇ ಅನುಮೋದನೆ ನೀಡಲಾಗಿದೆ. ಭದ್ರಾವತಿ -ಚಿಕ್ಕಬಾಸೂರು- ಚನ್ನಗಿರಿಯ ೧೭೩ಕಿ.ಮೀ. ವ್ಯಾಪ್ತಿಯ ರೈಲು ಮಾರ್ಗದ ಸರ್ವೆ ಕಾರ್ಯಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲಿ ಸರ್ವೇ ಕಾರ್ಯ ಆರಂಭಗೊಳ್ಳಲಿದೆ. ಇದರೊಂದಿಗೆ ಚಿಕ್ಕಮಗಳೂರು -ಶೃಂಗೇರಿ, ಹುಬ್ಬಳ್ಳಿ -ಅಂಕೋಲ, ಶಿವಮೊಗ್ಗ- ತೀರ್ಥಹಳ್ಳಿ-ಶೃಂಗೇರಿ ಮಾರ್ಗದ ಸಮೀಕ್ಷೆಗೂ ಸೂಚಿಸಲಾಗಿದೆ ಎಂದರು.
೧೦೦ಕೋ. ರೂ.ಗಳ ಅಂದಾಜು ವೆಚ್ಚದಲ್ಲಿ ತುಮಕೂರು ಮತ್ತು ೫೦ಕೋ. ರೂ.ಗಳ ಅಂದಾಜು ವೆಚ್ಚದಲ್ಲಿ ಶಿವಮೊಗ್ಗ ನಗರಗಳ ರೈಲ್ವೇ ನಿಲ್ದಾಣಗಳನ್ನು ಅತ್ಯಾಧುನಿಕ ನಿಲ್ದಾಣಗಳನ್ನಾಗಿ ಮಾರ್ಪಡಿಸಲು ಉzಶಿಸಲಾಗಿದೆ ಎಂದ ಅವರು, ಈಗಾಗಲೇ ಕಾಮಗಾರಿ ಪೂರ್ಣಗೊಂಡಿರುವ ಸಾಗರ ಮತ್ತು ತಾಳಗುಪ್ಪ ರೈಲ್ವೇ ನಿಲ್ದಾಣಗಳನ್ನು ಉದ್ಘಾಟಿಸಲಾಗುವುದು ಎಂದ ಅವರು, ಭದ್ರಾವತಿ ರೈಲ್ವೇ ನಿಲ್ದಾಣವನ್ನೂ ಶಿವಮೊಗ್ಗ ರೈಲ್ವೇ ನಿಲ್ದಾಣದ ರೀತಿಯಲ್ಲಿಯೇ ಅಭಿವೃದ್ಧಿಪಡಿಸಲಾಗುವುದು ಎಂದರು.
ಕೋಟೆಗಂಗೂರು ಕೋಚಿಂಗ್ಡಿಪೋವನ್ನು ಮುಂದಿನ ವರ್ಷಾರಂಭದಲ್ಲಿ ಲೋಕಾರ್ಪಣೆಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಶಿವಮೊಗ್ಗ ಟರ್ಮಿನಲ್ನಿರ್ಮಾಣಕ್ಕೆ ೯೭ಕೋ ರೂ.ಗಳನ್ನು ಮಂಜೂರು ಮಾಡಲಾಗಿದೆ. ಅಲ್ಲದೇ ನಿರೀಕ್ಷೆಯಂತೆ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸಾಕಷ್ಟು ಸಂಖ್ಯೆಯ ರೈಲ್ವೇ ಮೇಲ್ಸೇತುವೆಗಳು, ಕೆಳಸೇತುವೆಗಳನ್ನು ನಿರ್ಮಿಸಿ, ಅತ್ಯಲ್ಪ ಅವಧಿಯಲ್ಲಿ ಲೋಕಾರ್ಪಣೆಗೊಳಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದ ಅವರು, ರೈಲ್ವೇ ಕ್ಷೇತ್ರದಲ್ಲಿ ಕೈಗೊಂಡ ಕ್ರಾಂತಿಕಾರಿ ಯೋಜನೆಗಳ ವ್ಯವಸ್ಥಿತ ಅನುಷ್ಟಾನದಿಂದಾಗಿ ರೈಲ್ವೇ ಅಫಘಾತದ ಪ್ರಮಾಣ ಶೇ೦.೦೧ಕ್ಕೆ ಬಂದು ನಿಂತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಸಚಿವ ಹಾಗೂ ಶಾಸಕ ಆರಗ eನೇಂದ್ರ, ರೈಲ್ವೇ ಪ್ರಾದೇಶಿಕ ವ್ಯವಸ್ಥಾಪಕ ಉದಿತ್ಮಿತ್ತಲ್, ಎಸ್.ದತ್ತಾತ್ರಿ, ಎ.ಎಸ್.ನವೀನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *