ವಿದ್ಯಾರ್ಥಿ ದೆಸೆಯಿಂದಲೇ ನಿರ್ದಿಷ್ಟ ಗುರಿಯೊಂದಿಗೆ ಉತ್ತಮ ಭವಿಷ್ಯರೂಪಿಸಿಕೊಳ್ಳಿ …
ಹೊನ್ನಾಳಿ : ವಿದ್ಯಾರ್ಥಿ ದೆಸೆಯಿಂದಲೇ ನಿರ್ದಿಷ್ಟ ಗುರಿಯೊಂದಿಗೆ ಅಭ್ಯಾಸ ಮಾಡಿ ತಮ್ಮ ಗುರಿ ಸಾಧಿಸಿ ಸಮಾಜದ ಋಣ ತೀರಿಸಬೇಕೆಂದು ಚನ್ನಗಿರಿ ವಿಭಾಗದ ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಕರೆ ನೀಡಿದರು.
ತಾಲ್ಲೂಕಿನ ಕಡದಕಟ್ಟೆಯ ಹೊರವಲಯದ ಶ್ರೀ ಸಾಯಿ ಗುರುಕುಲ ವಸತಿಯುತ ಶಾಲಾ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳ ಲಾಗಿದ್ದ ಗುರು ಪೂರ್ಣಿಮೆ ಮತ್ತು ವಿದ್ಯಾರ್ಥಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಾನೂನು ಬಾಹಿರ ಚಟುವಟಿಕೆಗಳಿಗೆ ಭಾಗಿಯಾಗಿ ತಮ್ಮ ಉತ್ತಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದೆಂದು ಕಿವಿ ಮಾತು ಹೇಳಿದರು.
ಮೊಬೈಲ್, ಆನ್‌ಲೈನ್ ಗೇಮಿಂಗ್, ಗಾಂಜ, ಮದ್ಯವ್ಯಸನ, ಗುಟ್ಕಾ ಮತ್ತಿತರ ದುಷ್ಚಟಗಳಿಗೆ ದಾಸರಾಗದೇ ವಿದ್ಯಾಭ್ಯಾಸದ ಕಡೆಗೆ ಮಾತ್ರವೇ ಗಮನಹರಿಸಬೇಕೆಂದು ಸಲಹೆ ನೀಡಿದರಲ್ಲದೇ, ಹೆಣ್ಣು ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಮಾಹಿತಿ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಪ್ರದೀಪ್ ಗೌಡ ಮಾತನಾಡಿ, ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿಶೆಷ ಆದ್ಯತೆ ನೀಡುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆಯು ಶ್ರಮಿಸುತ್ತಿದೆ ಎಂದರು.
ಮಕ್ಕಳ ವಿವಿಧ ಘಟಕಗಳನ್ನು ಸ್ಥಾಪಿಸಿ ಮಕ್ಕಳಿಗೆ ಜವಾಬ್ದಾರಿ ನೀಡಿದ್ದು ಅವುಗಳನ್ನು ಸಮರ್ಥ ವಾಗಿ ನಿಭಾಯಿಸಬೇಕೆಂದು ಕರೆ ನೀಡಿದರು.
ಸಂಸ್ಥೆಯ ಖಜಂಚಿ ಸೋಮಣ್ಣ ಮಾತನಾಡಿ ವಿದ್ಯಾರ್ಥಿಗಳು ಕಷ್ಟ ಪಟ್ಟು ಅಭ್ಯಾಸ ಮಾಡದೇ ಇಷ್ಟ ಪಟ್ಟು ಅಭ್ಯಾಸ ಮಾಡಬೇಕು, ಬಾಲ್ಯದಿಂದಲೇ ಸಾಧಕರ ಜೀವನ ಚರಿತ್ರೆಗಳನ್ನು ಓದುವ ಅಭ್ಯಾಸ ರೂಢಿಸಿಕೊಂಡು ಅವರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರವೇ ಉನ್ನತ ಹುzಗಳನ್ನು ಅಲಂಕರಿಸಬಹುದೆಂದು ಉದಾಹರಣೆಗಳ ಮೂಲಕ ತಿಳಿ ಹೇಳಿದರು.
ಸೈಯದ್ ಮಂಜೂರ್ ವಿದ್ಯಾರ್ಥಿಗಳಿಗೆ ಪ್ರತಿeವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಸಲಹೆಗಾರ ಡಿ.ಎಸ್. ಪ್ರದೀಪ್ ಗೌಡ, ಪ್ರಾಂಶುಪಾಲ ಸುರೇಂದ್ರ, ಶೈಕ್ಷಣಿಕ ಮಾರ್ಗದರ್ಶಕ ರಾಘವನ್, ಶಿಕ್ಷಣ ಸಂಯೋಜಕ ಎ.ಜಿ.ಹರೀಶ್ ಕುಮಾರ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

