ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿ : ಸಚಿವ ಲಾಡ್
ಶಿವಮೊಗ್ಗ : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗ ಲಿದ್ದು, ಬಡವರಿಗಾಗಿ ರೂಪಿಸಿ ರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕರೆ ನೀಡಿದರು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ ಇಂದು ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮು ಚ್ಚಯ ಭವನ ಲೋಕಾರ್ಪಣೆ ಹಾಗೂ ಶಿವಮೊಗ್ಗ ಜಿಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವಪೂರ್ಣವಾದ ಬಿಲ್‌ಗಳನ್ನು ಪಾಸ್ ಮಾಡಿದೆ. ಅಮೇಜನ್, ಸ್ವಿಗ್ಗಿ, ಝೊಮ್ಯಾಟೊ ಬ್ಲಿಂಕ್‌ಇಟ್ ಗಳಲ್ಲಿ ಕೆಲಸ ಮಾಡುವ ೫ ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರು ರಾಜ್ಯ ದಲ್ಲಿ ಇzರೆ. ಅವರಿಗಾಗಿಯೇ ಪ್ರಪ್ರಥಮವಾಗಿ ಕರ್ನಾಟಕದಲ್ಲಿ ಸಮರ್ಪಕವಾದ ಗಿಗ್ ಬಿಲ್ ಪಾಸ್ ಆಗಿದೆ. ಸಾಗಾಣಿಕೆ ದರದ ಮೇಲೆ ಶೇ.೧ ರಿಂದ ಶೇ.೫ ಹಣ ಮತ್ತು ಸರ್ಕಾರ ನೀಡುವ ಹಣದಿಂದ ಅವರಿಗೆ ಅನುಕೂಲ ಮಾಡಲಾ ಗುತ್ತಿದೆ. ಎರಡನೆಯದು ಸಹ ನಟರು, ಟಿಕೆಟ್ ನೀಡುವ ವರು, ತಂತ್ರಜ್ಞರು, ಪೌರಾಣಿಕ ನಾಟಕ ನಟರು ಸೇರಿದಂತೆ ಹಿನ್ನೆಲೆಯಲ್ಲಿ ಕೆಲಸ ಮಾಡುವ ಕೆಲಸಗಾರಗಾಗಿ ಸಿನಿ ಬಿಲ್ ಪಾಸ್ ಮಾಡಿದ್ದು, ಶೇ. ೧ ರಿಂದ ೨ ಸೆಸ್ ಮತ್ತು ಸರ್ಕಾರದ ಹಣ ಸೇರಿಸಿ ಅನುಕೂಲ ಮಾಡ ಲಾಗಿದೆ. ಹಾಗೂ ಕಮರ್ಷಿಯಲ್ ಡ್ರೈವರ್ ಕ್ಲೀನರ್, ಮೆಕ್ಯಾನಿಕ್ ಇತರೆ ಕಾರ್ಮಿಕರ ಸಾರಿಗೆ ಬಿಲ್ ಪಾಸ್ ಮಾಡಿದ್ದು, ಅಪಘಾತ, ಮರಣ ಅಥವಾ ತೊಂದರೆಯಾ ದಲ್ಲಿ ರೂ. ೫ ಲಕ್ಷ ನೀಡುವ ಯೋಜನೆ ಜರಿಗೆ ತರಲಾಗಿದೆ. ಪ್ರತಿ ತಾಸಿಗೆ ೨೦ ಸಾವಿರ ಮರಣ ಸಂಭವಿಸುತ್ತಿದ್ದು ಪ್ರತಿ ದಿನ ೪೮೦ ಜನ ಪ್ರಾಣ ಕಳೆದು ಕೊಳ್ಳುತ್ತಿzರೆ. ದುಡಿಯುವ ವರ್ಗವೇ ಇದಕ್ಕೆ ಹೆಚ್ಚು ಬಲಿಯಾಗುತ್ತಿರುವ ಕಾರಣ ದೇಶದ ಜಿಡಿಪಿಗೆ ಶೇ.೩ ನಷ್ಟವಾಗುತ್ತಿದೆ. ಸಭೆಗಳಲ್ಲಿ ಈ ಕುರಿತು ಜಿಧಿಕಾರಿಗಳು ಅಪಘಾತ ಆಗದಂತೆ ಅರಿವು ಮೂಡಿಸಿ, ಹೆಲ್ಮೆಟ್ ಕಡ್ಡಾಯಗೊಳಿಸಬೇಕು ಎಂದರು.
೨೦ ಜನರಿಗಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುವೆಡೆ ಮಾಲೀಕರು ೫ ವರ್ಷ ಕೆಲಸ ಮಾಡಿದ ಕಾರ್ಮಿಕರಿಗೆ ಕಡ್ಡಾಯ ವಾಗಿ ಗ್ರಾಚುಟಿ ಪಾವತಿಸಬೇಕು. ಈ ರೀತಿಯ ೬ ಸಾವಿರ ಕಂಪೆನಿ ಗಳು ಇಲಾಖೆಯಡಿ ನೋಂದಣಿ ಯಾಗಿದ್ದು, ಅಧಿಕಾರಿಗಳು ಗ್ರಾಚುಟಿ ಪಾವತಿ ಬಗ್ಗೆ ಪರಿಶೀಲಿ ಸಬೇಕೆಂದು ಸೂಚಿಸಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿವೆ. ಸರ್ಕಾರ ರೂ. ೫೬ ಸಾವಿರ ಕೋಟಿಯಿಂದ ೬೦ ಸಾವಿರ ಕೋಟಿವರೆಗೆ ಇದಕ್ಕಾಗಿ ಪ್ರತಿ ವರ್ಷ ವೆಚ್ಚ ಮಾಡುತ್ತಿದೆ. ೮೩ ಸಾವಿರ ಕೋಟಿ ಅಭಿವೃದ್ಧಿಗಾಗಿ ನೀಡಿದೆ. ಶಕ್ತಿ ಯೋಜನೆಯಿಂದ ಹೆಣ್ಣು ಮಕ್ಕಳ ಓಡಾಟ ಹೆಚ್ಚಿದೆ. ಶೇ.೪೦ ಹೆಣ್ಣು ಮಕ್ಕಳ ಪ್ರಯಾಣ ಹೆಚ್ಚಿದೆ. ಗ್ಯಾರಂಟಿ ಯೋಜನೆ ಗಳಡಿ ಬಡವರಿಗೆ ನೀಡುತ್ತಿರು ವುದು ಉಳಿತಾಯಕ್ಕಾಗಿ ಅಲ್ಲ. ಆ ಹಣ ಸಂಪೂರ್ಣವಾಗಿ ಮತ್ತೆ ಮಾರುಕಟ್ಟೆಗೆ ವಾಪಸ್ ಬರುತ್ತಿರುವ ಕಾರಣ ರಾಜ್ಯದ ಜಿಡಿಪಿ ಭಾರತದಲ್ಲಿ ನಂ.೧ ಕ್ಕೇರಿದೆ.
ಸಚಿವರು ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಮತ್ತು ಮೃತಪಟ್ಟವರ ಅವಲಂಬಿತರಿಗೆ ಚೆಕ್ ವಿತರಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಶಾರದಾ ಪೂರ್‍ಯಾನಾಯ್ಕ, ಎಸ್ ಎನ್ ಚನ್ನಬಸಪ್ಪ, ಎಂಎಲ್‌ಸಿ ಡಾ| ಸರ್ಜಿ, ಅರುಣ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.

