ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ : ಗಣೇಶೋತ್ಸವಕ್ಕೆ ಸಕಲ ಸಿದ್ಧತೆ…

Share Below Link

ಶಿವಮೊಗ್ಗ : ಇಂದು ಗೌರಿ ಹಬ್ಬ. ನಾಳೆ ಗಣೇಶನ ಹಬ್ಬ. ಇಂದು ಶಿವಮೊಗ್ಗ ಸೇರಿದಂತೆ ಜಿಯಡೆ ಅತ್ಯಂತ ಸಡಗರ- ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮತ್ತು ನಾಳಿನ ಗಣೇಶ ಹಬ್ಬಕ್ಕೆ ಎ ಸಿದ್ಧತೆಗಳನ್ನು ಮಾಡಿಕೊಳ್ಳಲಾ ಗುತ್ತಿದೆ.
ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಗೌರಿ ಯನ್ನು ಪ್ರತಿಷ್ಠಾಪಿಸಿ, ಮುತ್ತೈದೆ ಯರು ಕುಟುಂಬ ಸಮೇತ ಬಂದು ತಾಯಿಗೆ ಬಾಗಿನ ನೀಡಿ ಕುಟುಂಬದ ಸದಸ್ಯರ ಹೆಸರಿನಲ್ಲಿ ಪೂಜೆ ನೆರವೇರಿಸಿದರು. ಮುತ್ತೈದೆ ಭಾಗ್ಯ ಕರುಣಿಸುವಂತೆ ದೇವಿಯಲ್ಲಿ ಪ್ರಾರ್ಥಿಸಿಕೊಂಡರು.
ಹಬ್ಬದ ಹಿನ್ನೆಲೆಯಲ್ಲಿ ಮುಂಜ ನೆಯಿಂದಲೇ ಭಕ್ತರು ದೇವಾಲಯ ಗಳಿಗೆ ಆಗಮಿಸುತ್ತಿದ್ದ ದೃಶ್ಯ ಸಾಮಾ ನ್ಯವಾಗಿತ್ತು. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲು ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿತ್ತು. ಗೌರಿಹಬ್ಬ ಪ್ರಮುಖವಾಗಿ ಮಹಿಳೆಯರ ಹಬ್ಬವಾಗಿದ್ದು, ಇದಕ್ಕಾಗಿ ಮಹಿಳೆಯರು ಸಡಗರ- ಸಂಭ್ರಮದಿಂದ ಇಂದು ತಮ್ಮ ತಮ್ಮ ಮನೆಗಳಲ್ಲಿ ಹಬ್ಬದ ಸಡಗರದಲ್ಲಿ ಸಂಭ್ರಮಿಸುತ್ತಿzರೆ. ಬಾಗಿನ ಕೊಡಲು ಎ ರೀತಿಯ ಸಿದ್ಧತೆ ಗಳನ್ನು ಮಾಡಿಕೊಂಡಿzರೆ. ವಿಶೇಷ ಅಡಿಗೆಗಳನ್ನು ಮಾಡಿ, ಮನೆಮಂದಿ ಯೊಂದಿಗೆ ಹಬ್ಬವನ್ನು ಆಚರಿಸುತ್ತಿ zರೆ. ಮಹಿಳೆಯರು ತವರು ಮನೆಗೆ ಬಂದು ಹಬ್ಬದ ಸಡಗರದ ಲ್ಲಿzರೆ.
ನಾಳೆ ಗಣೇಶನ ಹಬ್ಬಕ್ಕೆ ಎ ರೀತಿಯ ಸಿದ್ಧತೆಗಳನ್ನು ಸಾರ್ವಜನಿ ಕರು ಮಾಡಿಕೊಳ್ಳುತ್ತಿzರೆ. ನಗರ ಹೊರವಲಯದ ಸೈನ್ಸ್ ಫೀಲ್ಡಿನಲ್ಲಿ ಗಣೇಶ ಮೂರ್ತಿಗಳ ಮಾರಾಟ ಜೋರಾಗಿದ್ದು, ತಾಲ್ಲೂಕು ಹಾಗೂ ಗ್ರಾಮೀಣ ಭಾಗಗಳಿಂದ ಜನರು ಆಗಮಿಸಿ ಮೂರ್ತಿಗಳನ್ನು ಖರೀದಿ ಸುತ್ತಿzರೆ. ವಿವಿಧ ಗಾತ್ರ ಮತ್ತು ವಿನ್ಯಾಸದ ಮೂರ್ತಿಗಳಿಗೆ ಉತ್ತಮ ಬೇಡಿಕೆ ಕಂಡುಬಂದಿದೆ.
ಹಬ್ಬದ ಪ್ರಯುಕ್ತ ರೈಲು ಹಾಗೂ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು, ಸಾರಿಗೆ ಇಲಾಖೆಯು ಹೆಚ್ಚುವರಿ ಬಸ್ಸುಗಳನ್ನು ಸಜ್ಜುಗೊಳಿಸಿದೆ. ಪೊಲೀಸ್ ಇಲಾಖೆ ಮಾರುಕಟ್ಟೆ, ದೇವಾಲಯ ಮತ್ತು ಸಾರಿಗೆ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಿದೆ.
ಇನ್ನೊಂದೆಡೆ ಗಣಪತಿ ಪೆಂಡಾಲ್‌ಗಳು ಸಿದ್ಧವಾಗಿವೆ. ಗಣೇಶನನ್ನು ಬರಮಾಡಿಕೊಳ್ಳಲು ಅಂತಿಮ ಸಿದ್ಧತೆಯಾಗುತ್ತಿದೆ. ಪೆಂಡಾಲ್ಗಳಲ್ಲಿ ಅಲಂಕಾರ ಮಾಡಲಾಗುತ್ತಿದೆ. ಅಲಂಕಾರ ಮತ್ತು ಪೂಜೆಗಾಗಿ ಹೂವು, ಹಣ್ಣು, ಅಲಂಕಾರಿಕ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಯತ್ತ ಮುಖ ಮಾಡಿzರೆ. ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿದೆ. ಗೌರಿ ಹಬ್ಬ ಸಡಗರದಿಂದ ನಡೆದರೆ, ನಾಳಿನ ಗಣೇಶ ಹಬ್ಬಕ್ಕೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ.