ತಮ್ಮಲ್ಲಿರುವ ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿ…
ಶಿಕಾರಿಪುರ : ಪ್ರತಿಯೊಬ್ಬರಲ್ಲಿ ಸುಪ್ತವಾದ ಪ್ರತಿಭೆ ಅಡಗಿದ್ದು,ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಇಲ್ಲಿನ ಪುರಸಭಾಧ್ಯಕ್ಷ ಸುನಂದ ಮಂಜುನಾಥ್ ಸಲಹೆ ನೀಡಿದರು.

ತಾಲೂಕು ಕಸಾಪ ಆಯೋಜಿಸಿದ್ದ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲೂ ಪ್ರತಿಭೆ ಇದ್ದು ಆ ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು.ನಿಮ್ಮಲ್ಲಿರುವ ಸಾಹಿತ್ಯ ಕ್ಷೇತ್ರದ ಪ್ರತಿಭೆಯನ್ನು ಪ್ರದರ್ಶಿಸಲು ಕನ್ನಡ ಸಾಹಿತ್ಯ ಪರಿಷತ್ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮದ ಮೂಲಕ ವೇದಿಕೆ ಯನ್ನು ಕಲ್ಪಿಸಿದ್ದು,ವೇದಿಕೆಯ ಸದ್ಬಳಕೆ ಮಾಡಿಕೊಂಡು ಹೆಸರಾಂತ ಕವಿಗಳಾಗಿ ಹೊರಹೊಮ್ಮ ಬೇಕು.ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಮಾತೃಭಾಷೆ ಕನ್ನಡದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿ ಕೊಳ್ಳಬೇಕೆಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ತಾ.ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್ಎಸ್.ರಘು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದೆ.ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಗಳನ್ನು ಆಯೋಜಿಸುತ್ತಿದೆ.ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉzಶದಿಂದ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ. ನೀವು ಕೂಡ ಕವಿಗಳಾಗಿ, ಲೇಖಕರಾಗಿ ಹೊರ ಹೊಮ್ಮವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಜನಪದ ಪರಿಷತ್ ಅಧ್ಯಕ್ಷ ಬಿ. ಪಾಪಯ್ಯ, ಸೆಲೆಬ್ರೇಶನ್ ವರ್ಲ್ಡ್ ಮಾಲೀಕ ವೀರನಗೌಡ, ಬಾಳೆಕಾಯಿ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಮೋಹನ್ ರಾಜ್, ಡಾ.ಪ್ರಕಾಶ್, ಜಿಯಾವು ಉಪನ್ಯಾಸಕ ಪುಟ್ಟಪ್ಪ ಬಿಳವಾಣಿ, ಬಂಗಾರಪ್ಪ, ಕೋಟೋಜಿರಾವ್, ದಿನೇಶ್ ಇನ್ನಿತರರಿದ್ದರು.
