ಕಾಡಾನೆ ಉಪಟಳ: ಡಿಸಿಎಫ್ ಕಛೇರಿ ಎದುರು ಬೆಳೆ ಸುರಿದು ರೈತರ ಆಕ್ರೋಶ ಹೊರಹಾಕಿದ ರೈತರು…
ಶಿವಮೊಗ್ಗ : ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಿಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಪುರದಾಳು ಗ್ರಾಮದಲ್ಲಿ ಕಳೆದ ಹಲವು ತಿಂಗಳಿನಿಂದ ಕಾಡಾನೆಗಳ ಹಿಂಡು ರೈತರ ಹೊಲ, ಗzಗಳ ಮೇಲೆ ದಾಳಿ ನಡೆಸಿ ನಾಟಿ ಮಾಡಿದ್ದ ಭತ್ತದ ಗz, ಅಡಿಕೆ ಸಸಿ, ಫಸಲಿಗೆ ಬಂದಿದ್ದ ಬಾಳೆ ಹಾಗೂ ಮೆಕ್ಕೆಜೋಳವನ್ನು ನಾಶ ಮಾಡುತ್ತಿವೆ. ಕಳೆದ ಕೆಲವು ದಿನಗಳಿಂದ ಊರಿನ ಒಳಗೂ ಕಾಡಾನೆಗಳು ದಾಳಿ ಇಡುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾ ನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪುರದಾಳು ಗ್ರಾಮದ ಮೇಲಿನ ಪುರದಾಳು, ಬೇಳೂರು, ಕೌಲಾಪುರ ಸೇರಿದಂತೆ ಹಲವು ಕಡೆ ಕಾಡಾನೆಗಳು ದಿನನಿತ್ಯ ರೈತರ ಹೊಲಗಳಿಗೆ ದಾಳಿ ನಡೆಸುತ್ತಿವೆ. ಫಸಲಿಗೆ ಬಂದ ಬೆಳೆ ಕಾಡಾನೆಗಳು ಹಾನಿ ಮಾಡುತ್ತಿರುವುದರಿಂದ ರೈತರು ಲಕ್ಷಾಂತರ ರೂಪಾಯಿ ಬೆಳೆ ನಷ್ಟ ಅನುಭವಿಸುಂತಾಗಿದೆ. ಅಲ್ಲದೇ ಕಳೆದ ಕೆಲವು ತಿಂಗಳಿನಿಂದಿಚೇಗೆ ಆಲದೇವರ ಹಸೂರಿನಲ್ಲಿ ಕೂಲಿಕಾರ್ಮಿಕ ಹನುಮಂತ ಎಂಬುವ ವರು ಆನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಕಾಡಾನೆಗಳು ಗ್ರಾಮದೊಳಗೆ ನುಗ್ಗುತ್ತಿವೆ. ಇದರಿಂದ ಜನರು ಜೀವವನ್ನು ಕೈಯಲ್ಲಿ ಹಿಡಿದಿಟ್ಟು ಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯವರ ಗಮನದಲ್ಲಿದ್ದರೂ ಕ್ರಮ ಕೈಗೊಳ್ಳದೇ ಮೀನಾಮೇಷ ಏಣಿಸುತ್ತಿzರೆ ಎಂದು ರೈತರು ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಅವರು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದರು. ನಂತರ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಶಾಸಕರು, ತಕ್ಷಣ ಸಮಸ್ಯೆ ಪರಿಹಾರಕ್ಕಾಗಿ ಡಿಸಿಎಫ್ ಪ್ರಸನ್ನ ಪಟಗಾರ್ ಅವರಿಗೆ ಆಗ್ರಹಿಸಿದರು.
ಮುಳುಗಡೆ ರೈತರು ಕಾಡನ್ನು ಒತ್ತುವರಿ ಮಾಡಿಕೊಂಡಿರುವುದಕ್ಕೆ ಆನೆಗಳು ರೈತರ ಹೊಲಗಳಿಗೆ ಬರುತ್ತಿವೆ ಎಂದು ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾತಿಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಉಪ ಸಂರಕ್ಷಣಾಧಿಕಾರಿಗಳ ಮೂಲಕ ಅರಣ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪುರದಾಳು ಗ್ರಾ.ಪಂ ಉಪಾಧ್ಯಕ್ಷರಾದ ಕುಸುಮಾ ಜಗದೀಶ್, ಪ್ರಮುಖರಾದ ಮಾನಸ ಹೆಬ್ಬೂರು, ಪ್ರಭಾಕರ್ ಸಂಪೋಡಿ, ಆಶೋಕ್, ಗೋಪಾಲ್, ಮುಕುಂದಪ್ಪ ಕಿಡದುಂಬೆ, ಮುಕುಂದ ಎಂ.ಜಿ, ಕೃಷ್ಣಮೂರ್ತಿ ಹಿಳ್ಳೋಡಿ, ನಾಗರಾಜ್, ಸುರೇಶ್ ಜಿ, ವಸಂತ ಹಿಳ್ಳೋಡಿ, ಬಸವರಾಜ್, ರವಿ ಸಂಪೋಡಿ, ಕೋದಂಡ,ಶಿವಪ್ಪ ಸೇರಿದಂತೆ ನೂರಾರು ರೈತರು ಇದ್ದರು.
