ಕ್ಷೇತ್ರದ ಜನತೆಗೆ ಟೋಲ್‌ಗೇಟ್ ಬರೆ ಹಾಕಿದ ಬಿಎಸ್‌ವೈ ಕುಟುಂಬ ಕ್ಷಮೆಯಾಚಿಸಲಿ…
ಶಿಕಾರಿಪುರ : ಸುದೀರ್ಘ ಕಾಲದಿಂದ ಕ್ಷೇತ್ರದ ಶಾಸಕರಾಗಿ ಮುಖ್ಯಮಂತ್ರಿಯಾಗಿ ಕುಟುಂಬಸ್ಥರು ಅಧಿಕಾರ ಗಳಿಸಲು ಕಾರಣಕರ್ತರಾದ ತಾಲೂಕಿನ ಜನತೆಗೆ ಟೋಲ್ ಗೇಟ್ ನಿರ್ಮಿಸಿಕೊಟ್ಟ ಯಡಿಯೂರಪ್ಪ ನವರ ಕುಟುಂಬ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಕೆ.ಡಿ.ಪಿ ಸದಸ್ಯ ರಾಘವೇಂದ್ರ ನಾಯ್ಕ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಹೊರವಲಯ ಕುಟ್ರಳ್ಳಿ ಸಮೀಪ ನಿರ್ಮಾಣವಾಗಿರುವ ಟೋಲ್ ಗೇಟ್ ರೈತರು ಕೂಲಿಕಾರ್ಮಿಕರ ಸಹಿತ ಸಂಚರಿಸುವ ಪ್ರತಿಯೊಬ್ಬರಿಗೂ ಆರ್ಥಿಕವಾಗಿ ಹೊರೆಯಾಗಿದ್ದು ತೆರವುಗೊಳಿಸು ವಂತೆ ನಿನ್ನೆ ಹೋರಾಟ ಸಮಿತಿ ಯಶಸ್ವಿ ಬಂದ್ ಮೂಲಕ ಎಚ್ಚರಿಸುವ ಪ್ರಯತ್ನಕ್ಕೆ ತಾಲೂಕಿನ ಜನತೆ ಪರವಾಗಿ ಅಭಿನಂದಿಸುವು ದಾಗಿ ತಿಳಿಸಿದರು.
ಟೋಲ್ ಗೇಟ್ ತೆರವು ಗೊಳಿಸಲು ಕಳೆದ ವರ್ಷದಿಂದ ನಿರಂತರವಾಗಿ ಹೋರಾಟ ಸಮಿತಿ ಕೈಗೊಂಡ ಪ್ರಯತ್ನ ಅತ್ಯಂತ ಶ್ಲಾಘನೀಯವಾಗಿದ್ದು ಸಮಿತಿ ಯಲ್ಲಿರುವ ಬಹುತೇಕ ಬಿಜೆಪಿ ಸಕ್ರೀಯ ಕಾರ್ಯಕರ್ತರು ಪ್ರತಿಭಟನಾ ಸಭೆಯಲ್ಲಿ ಕೇವಲ ಸರ್ಕಾರ ಹಾಗೂ ಉಸ್ತುವಾರಿ ಸಚಿವರ ವಿರುದ್ದ ವಾಗ್ದಾಳಿ ನಡೆಸಿ ೨೦೨೨ರಲ್ಲಿ ಗೇಟ್ ನಿರ್ಮಾಣಕ್ಕೆ ನಾಂದಿ ಹಾಡಿದ ಬಿಜೆಪಿ ಸರ್ಕಾರ, ಉಸ್ತುವಾರಿ ಸಚಿವರು, ಸಂಸದ, ಶಾಸಕರನ್ನು ಮರೆತಿದ್ದು ವಿಷಾಧನೀಯ ಎಂದ ಅವರು, ಕೇವಲ ೩೦ ಕಿ.ಮೀ ಅಂತರದಲ್ಲಿ ಗೇಟ್ ನಿರ್ಮಾಣಕ್ಕೆ ಯಡಿಯೂರಪ್ಪ ಕುಟುಂಬ ನೇರ ಕಾರಣವಾಗಿದ್ದು ಸುದೀರ್ಘ ಕಾಲದಿಂದ ತಾಲೂಕಿನ ಶಾಸಕರಾಗಿ ಮುಖ್ಯಮಂತ್ರಿಯಾಗಿ, ಸಂಸದ ಶಾಸಕರಾಗಲು ಬೆಂಬಲಿಸಿದ ಜನತೆಗೆ ಟೋಲ್ ಗೇಟ್ ನಿರ್ಮಾಣದ ಮೂಲಕ ಋಣ ತೀರಿಸುವ ಪ್ರಯತ್ನ ಮಾಡಿzರೆ ಎಂದು ವ್ಯಂಗ್ಯವಾಡಿದರು.
೨೦೨೨ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿ ಉಸ್ತುವಾರಿ ಸಚಿವರು, ಸಂಸದ, ಶಾಸಕರು ಬಿಜೆಪಿ ಪಕ್ಷದವರಾಗಿದ್ದು ಈ ಸಂದರ್ಭದಲ್ಲಿ ಗೇಟ್ ನಿರ್ಮಾಣಕ್ಕೆ ಚಾಲನೆ ದೊರೆತಿದ್ದು ಜನತೆ ಬಗ್ಗೆ ಪ್ರಾಮಾಣಿಕ ಕಾಳಜಿ ಹೊಂದಿದ್ದಲ್ಲಿ ಕೂಡಲೇ ವಿರೋಧಿಸಿದಲ್ಲಿ ಇದೀಗ ಜನತೆ ಪರದಾಡುವ ಸ್ಥಿತಿ ನಿರ್ಮಾಣ ವಾಗುತ್ತಿರಲಿಲ್ಲ. ಸಾಮಾಜಿಕ ಜಲತಾಣದ ಮೂಲಕ ಹೋರಾಟ ಬೆಂಬಲಿಸುವ ಜತೆಗೆ ಗೇಟ್ ತೆರವುಗೊಳಿಸದಿದ್ದಲ್ಲಿ ಜನ ನುಗ್ಗಿ ಕಿತ್ತೊಗೆಯುವ ಪ್ರಚೋದನಕಾರಿ ಹೇಳಿಕೆ ನೀಡುವ ಸಂಸದರು ಮುಗ್ದರನ್ನು ಪ್ರಚೋದಿಸಿ ಜೈಲಿಗೆ ಕಳುಹಿಸದೆ ಅಗತ್ಯ ಸಾಮಗ್ರಿಗಳ ಜತೆ ನೇತ್ತೃತ್ವ ವಹಿಸಿ ಕೊಂಡು ತೆರವುಗೊಳಿಸುವಂತೆ ಸಲಹೆ ನೀಡಿದ ಅವರ ಮಗು ಚಿವುಟಿ ತೊಟ್ಟಿಲು ತೂಗುವ ಇಬ್ಬಗೆಯ ನೀತಿ ಬಿಟ್ಟು ನೇರ ರಾಜಕಾರಣ ಮಾಡುವಂತೆ ತಿಳಿಸಿದರು.
ಇದುವರೆಗೂ ಇಬ್ಬಗೆ ನೀತಿಯ ರಾಜಕಾರಣದಿಂದಾಗಿ ಸತತ ಅಧಿಕಾರ ಅನುಭವಿಸಿದ್ದು ಭವಿಷ್ಯದಲ್ಲಿ ಇಂತಹ ರಾಜಕಾರಣಕ್ಕೆ ಜನತೆ ತಕ್ಕ ಪಾಠ ಕಲಿಸಲಿzರೆ ಎಂದು ಎಚ್ಚರಿಸಿದ ಅವರು, ಹೋರಾಟಕ್ಕೆ ಬೆಂಬಲ ಸೂಚಿಸಿ ಬಂದ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದೆ ಪರೋಕ್ಷವಾಗಿ ಹೋರಾಟ ಹತ್ತಿಕ್ಕುವ ಪ್ರಯತ್ನ ಅತ್ಯಂತ ಖಂಡನೀಯವಾಗಿದ್ದು ಜನತೆಗೆ ಹೊರೆಯಾಗಿರುವ ಟೋಲ್ ಗೇಟ್‌ನಿಂದ ವಾರ್ಷಿಕ ಕಾರು ಮಾಲೀಕರು ರೂ ೩೦-೪೦ ಸಾವಿರ ಪಾವತಿಸಬೇಕಾಗಲಿದೆ ಎಂದು ತಿಳಿಸಿದರು.
ಭವಿಷ್ಯದ ಚುನಾವಣೆಯಲ್ಲಿ ಅಹಿಂದಾ ವರ್ಗದ ಚಕ್ರವ್ಯೂಹ ಬೇಧಿಸಲು ಸಿದ್ದರಾಗುವಂತೆ ಸವಾಲು ಹಾಕಿದ ಅವರು ಟೋಲ್ ಗೇಟ್ ತೆರವಿಗೆ ನಡೆದ ಬಂದ್ ಯಡಿಯೂರಪ್ಪನವರ ಕುಟುಂಬಕ್ಕೆ ತಗುಲಿದೆ ಕಪ್ಪು ಚುಕ್ಕೆಯಾಗಿದೆ ಎಂದರು.
ಯುವ ಕಾಂಗ್ರೆಸ್ ಉಪಾಧ್ಯಕ್ಷ ಚರಣ್ ಬನ್ನೂರು ಮಾತನಾಡಿ, ೩೦ ಕಿ.ಮೀ ಅಂತರದಲ್ಲಿನ ೨ ಟೋಲ್ ತಾಲೂಕಿನ ಜನತೆಗೆ ತೊಂದರೆ ಕೊಡುವ ಏಕೈಕ ಉzಶ ಹೊಂದಿದೆ ಜನತೆ ತಕ್ಕ ಉತ್ತರ ನೀಡಲಿzರೆ ಎಂದರು.
ಶಿರಾಳಕೊಪ್ಪ ಪುರಸಭಾ ಸದಸ್ಯ ಪಿ.ಜಫರ್ ಮಾತನಾಡಿ, ನೂತನ ಶೌಚಾಲಯ ಬಾಗಿಲು ತೆರೆಯಲು ಧಾವಿಸುವ ಸಂಸದರು ಗೇಟ್ ತೆರವು ಹೋರಾಟದಲ್ಲಿ ಪಾಲ್ಗೊಳ್ಳದೆ ಜಣತನ ಪ್ರದರ್ಶಿಸಿzರೆ ಎಂದು ವ್ಯಂಗ್ಯವಾಡಿದರು.
ಗೋಷ್ಠಿಯಲ್ಲಿ ತಾ. ಆದಿಜಂಬವ ಸಮಾಜದ ಅಧ್ಯಕ್ಷ ನಿಂಗಪ್ಪ, ಡಿಎಸ್ ಎಸ್ ಸಂಚಾಲಕ ಜಗದೀಶ್ ಚುರ್ಚುಗುಂಡಿ, ಯುವ ಕಾಂಗ್ರೆಸ್ ಅದ್ಯಕ್ಷ ಮಂಜುನಾಯ್ಕ, ಪ್ರ.ಕಾ ಅನಿಲ್ ಸಾಲೂರು, ವಿದ್ಯಾರ್ಥಿ ಘಟಕ ಅಧ್ಯಕ್ಷ ಸಮೀರ್, ಅನ್ವರ್ ಬಾಷಾ ಮತ್ತಿತರರು ಉಪಸ್ಥಿತರಿದ್ದರು.
