ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ: ಸಾರ್ವಜನಿಕರಿಗೆ ಎಸ್‌ಪಿ ಮನವಿ

Share Below Link

ಶಿವಮೊಗ್ಗ : ಅ.೨೩ರಂದು ಸಂಜೆ ಮನೆ ಮನೆಗೆ ಪೊಲೀಸ್ ಕಾರ್‍ಯಕ್ರಮದ ಭಾಗವಾಗಿ ಜಿ.ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುರಲೆ ಸಿzಶ್ವರ ಸಮು ದಾಯ ಭವನದಲ್ಲಿ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾ ಡಿದ ಎಸ್‌ಪಿ ಮಿಥನ್, ನಿಮ್ಮ ಸುತ್ತಮುತ್ತ ಹಾಗೂ ಗ್ರಾಮಗಳಲ್ಲಿ ಯಾವುದೇ ಕಾನೂನು ಬಾಹಿರ ಕೃತ್ಯಗಳು ನಡೆಯುತ್ತಿ ದ್ದಲ್ಲಿ, ಅಂತಹ ವಿಚಾರಗಳನ್ನು ಪೊಲೀಸ್ ಇಲಾಖೆ ಯ ಗಮನಕ್ಕೆ ತರುವುದು ನಿಮ್ಮ ಪ್ರಾಥಮಿಕ ಜವಾಬ್ದಾರಿಯಾಗಿರು ತ್ತದೆ. ಈ ಕುರಿತು ನೀವು ಹತ್ತಿರದ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ ೧೧೨ಗೆ ಕರೆಮಾಡಿ ಮಾಹಿತಿ ನೀಡಬಹುದು. ಈ ಕುರಿತು ಮಾಹಿತಿ ನೀಡಿದವರ ವಿವರವನ್ನು ಪೊಲೀಸ್ ಇಲಾಖೆಯು ಗೌಪ್ಯವಾಗಿ ಇರಿಸುತ್ತದೆ ಎಂದರು.


ಅಕ್ರಮ ಮಧ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಂಡು ಅಬಕಾರಿ ಕಾಯ್ದೆಯಡಿ ಪ್ರಕರಣಗಳನ್ನು ಸಹಾ ದಾಖಲಿಸಿರುತ್ತದೆ ಹಾಗೂ ಸಾರ್ವಜನಿಕ ಹಿತಾಸಕ್ತಿಯಲ್ಲಿ ಕೈಗೊಳ್ಳಬೇಕಾಗುವ ಎ ಕ್ರಮಗಳನ್ನು ಸಂಬಂಧಪಟ್ಟ ಇಲಾಖೆಗಳ ಸಹಯೋಗ ದೊಂದಿಗೆ ಕಾನೂನಿನ ರೀತಿ ಜರಿಗೆ ತರಲಾಗಿರುತ್ತದೆ ಎಂದು ವಿವರಿಸಿದರು.
ಈ ವ್ಯಾಪ್ತಿಗೆ ಒಳಪಡುವ ಹಲವು ಗ್ರಾಮಗಳಲ್ಲಿ ಹೆzರಿಯೂ ಹಾದು ಹೋಗಿದ್ದು, ವಾಹನಗಳ ದಟ್ಟಣೆಯು ಹೆಚ್ಚಿರುತ್ತದೆ ಹಾಗೂ ಕೆಲವು ಬಾರಿ ಪಾದಚಾರಿಗಳ ನಿರ್ಲಕ್ಷತನದಿಂದಲೂ ಸಹ ಹಾಗೂ ರಸ್ತೆ ದಾಟುವಾಗ ರಸ್ತೆಯ ಎರಡು ಬದಿ ನೋಡದೆ ರಸ್ತೆದಾಟಲು ಮುಂದಾದಾಗಲೂ ಕೂಡ ಅಪಘಾತ ಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಯನ್ನು ಗಮನದಲ್ಲಿಟ್ಟು ಕೊಂಡು ಸೂಚನಾ ಫಲಕ ಹಾಗೂ ರಸ್ತೆಯಲ್ಲಿ ವೈeನಿಕ ರೀತಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತದೆ ಎಂದರು.
ಸಂಚಾರ ಸುರಕ್ಷತೆಯ ಸಂಬಂಧ ಕೈಗೊಳ್ಳಲಾಗುವ ಎ ಮುನ್ನೆಚ್ಚರಿಕಾ ಕಾರ್ಯಕ್ರಮಗಳು ಹಾಗೂ ಅಳವಡಿಸಲಾಗುವ ಉಪಕರಣಗಳಿಗೆ ಸಂಬಂಽಸಿದಂತೆ ಶಿವಮೊಗ್ಗ ಜಿ ಪೊಲೀಸ್‌ನ ಅಽಕಾರಿಗಳು ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿ, ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳ ಬಹುದೆಂದು ಚರ್ಚಿಸಿ ಸಾರ್ವಜನಿಕರ ಹಿತದೃಷ್ಟಿಯಲ್ಲಿ ಅವಶ್ಯಕ ಮತ್ತು ಅಗತ್ಯ ವೆನಿಸುವಂತಹ ಎ ರೀತಿಯ ಕ್ರಮಗ ಳನ್ನು ಕೈಗೊಳ್ಳಲಾಗುತ್ತದೆ ಎಂದರು.
ರಸ್ತೆಗಳು ಬಂದು ಸೇರುವ ಕಡೆ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಮುಂಜಗ್ರತಾ ಹಾಗೂ ಸೂಚನಾ ಫಲಕಗಳನ್ನು ಅಳವಡಿ ಸುವುದರಿಂದ ರಸ್ತೆ ಅಪಘಾತ ಗಳನ್ನು ಬಹುತೇಕ ಕಡಿಮೆ ಮಾಡಲು ಸಾಧ್ಯ ವಿರುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಕ್ರಮ ಕೈಗೊಳ್ಳಲಿದೆ ಎಂದರು.
ಯಾವುದೇ ಅಪರಾಧಗಳು ಜರುಗ ದಂತೆ ತಡೆಯಲು ಹಾಗೂ ಒಂದು ವೇಳೆ ಯಾವುದೇ ರೀತಿಯ ಅಪರಾಧ ಕೃತ್ಯ ಗಳು ಜರುಗಿದಲ್ಲಿ ಕೂಡಲೇ ಪತ್ತೆ ಹಚ್ಚುವ ಸಂಬಂಧ ಸಾರ್ವಜನಿಕರು ತಮ್ಮ ಅಂಗಡಿ ಮುಂಗಟ್ಟು ಹಾಗೂ ಮನೆಗಳಲ್ಲಿ ರಸ್ತೆ ಕಾಣುವ ರೀತಿಯಲ್ಲಿ, ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್ ಗಳಿಗೆ ಸಿಸಿ ಕ್ಯಾಮೆ ರಾ ಗಳನ್ನು ಅಳವಡಿಸಿಕೊಳ್ಳುವುದು ಸೂಕ್ತ ವಿರುತ್ತದೆ. ಹಾಗೂ ನೀವುಗಳು ನಿಮ್ಮ ಗ್ರಾಮದ ಸೂಕ್ಷ್ಮ ಮತ್ತು ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ನಿಮ್ಮ ಹಂತದಲ್ಲಿ ಅಳವಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಈ ಕಾರ್ಯದಲ್ಲಿ ಪೊಲೀಸ್ ಇಲಾಖೆಯು ನಿಮ್ಮೊಂದಿಗೆ ಎ ರೀತಿಯ ಸಹಕಾರವನ್ನು ನೀಡಲಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಯು ಪ್ರಮುಖ ಆದ್ಯತೆ ನೀಡಲಿದ್ದು, ಯಾರೇ ಆಗಲಿ ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಅಥವಾ ಸಾರ್ವಜ ನಿಕವಾಗಿ ಉಪಟಳ ನೀಡುವುದು ಕಂಡುಬಂದಲ್ಲಿ ಕೂಡಲೇ ತುರ್ತು ಸಹಾಯವಾಣಿ ೧೧೨ಗೆ ಕರೆ ಮಾಡಿ ಮಾಹಿತಿ ನೀಡಿ, ಆ ಕೂಡಲೇ ಈ ಆರ್ ವಿ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿ ಶೀಲಿಸಿ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿzರೆ. ಸಾರ್ವಜನಿಕರೆಲ್ಲರೂ ಯಾವುದೇ ತುರ್ತು ಸಂದರ್ಭದಲ್ಲಿ ೧೧೨ ಸಹಾಯ ವಾಣಿಗೆ ಕರೆ ಮಾಡಿ ಸಹಾಯ ಪಡೆಯ ಬಹುದಾಗಿರುತ್ತದೆ. ಈ ಬಗ್ಗೆ ನಿಮ್ಮ ಕುಟುಂಬಸ್ಥರಿಗೆ ನಿಮ್ಮ ಸುತ್ತಮುತ್ತಲಿನ ಹೆಣ್ಣುಮಕ್ಕಳಿಗೆ ವಿಶೇಷವಾಗಿ ಕಲಿಕೆಗಾಗಿ ಹೋಗುವಂತಹ ಶಾಲಾ ಹೆಣ್ಣುಮಕ್ಕಳಿಗೆ ಕಾಲೇಜು ಮಕ್ಕಳಿಗೆ ತಿಳಿಸಿ ಕೊಡುವಂತೆ ಹೇಳಿದರು.


ಯುವಕರಲ್ಲಿ ಅರಿವು ಮೂಡಿಸುವ ಸಂಬಂಧ ಮತ್ತು ಕಾನೂನಿನ ಬಗ್ಗೆ ಅವರಿಗೆ ತಿಳುವಳಿಕೆಯನ್ನು ಹೆಚ್ಚಿಸುವ ಸಂಬಂಧ ಪೊಲೀಸ್ ಇಲಾಖೆಯು ಶೈಕ್ಷಣಿಕ ಸಂಸ್ಥೆಗಳಿಗೆ ಭೇಟಿ ನೀಡಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳುತ್ತಿದ್ದು, ಸಂಬಂಧಪಟ್ಟ ಠಾಣಾ ವ್ಯಾಪ್ತಿಗೆ ಒಳಪಡುವಂತಹ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನಲ್ಲಿ ಅವರಿಗಿರುವಂತಹ ಹಕ್ಕು ಮತ್ತು ರಕ್ಷಣೆಗಳು, ಕಾಯ್ದೆಗಳು, ಸ್ವಯಂ ರಕ್ಷಣಾ ವಿಧಾನಗಳು, ಸೈಬರ್ ಕ್ರೈಂ ಕುರಿ ತು ಅರಿವು, ಮಾದಕ ದ್ರವ್ಯದ ದುಷ್ಪರಿ ಣಾಮಗಳು ಹಾಗೂ ಇತರ ವಿಚಾರ ಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ ಎಂದರು.
ಸಮಾಜ ಮತ್ತು ಪೊಲೀಸ್ ಇಲಾ ಖೆಯ ನಡುವೆ ಇರುವಂತಹ ಭಿನ್ನಾಭಿ ಪ್ರಾಯಗಳನ್ನು ದೂರ ಮಾಡಲು ಪೊ ಲೀಸ್ ಇಲಾಖೆಯ ಹಂತದ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿರಂತರವಾಗಿ ಶ್ರಮವಹಿಸುತ್ತಾ ದುಡಿಯುತ್ತಿzರೆ. ನಾವೆಲ್ಲರೂ ಒಂದಾಗಿ ಮುನ್ನಡೆ ದಾಗ ಮಾತ್ರ ಅಪರಾಧ ಮುಕ್ತ ಸಮಾಜ ನಿರ್ಮಿಸಲು ಸಾಧ್ಯವಿರು ತ್ತದೆ. ನ್ಯಾಯ ಪಡೆಯುವಂತಹದ್ದು ಎ ಸಾರ್ವಜನಿಕರ ಹಕ್ಕಾಗಿರುತ್ತದೆ. ನೀವುಗಳು ಯಾವುದೇ ಹಿಂಜರಿಕೆ ಇಲ್ಲದೆ ಮುಂದೆ ಬಂದಾಗ ಮಾತ್ರ ನಿಮಗೆ ನ್ಯಾಯ ದೊರಕಿಸಿಕೊಡಲು ಸಾಧ್ಯವಾ ಗುತ್ತದೆ. ಆದ್ದರಿಂದ ಯಾವುದೇ ಹಿಂಜರಿಕೆ ಇಲ್ಲದೆ, ಪೋಲಿಸ್ ಇಲಾಖೆಯೊಂದಿಗೆ ಕೈಜೋಡಿಸುವಂತೆ ವಿನಂತಿಸಿದರು.
ಮನೆ ಮನೆಗೆ ಪೊಲೀಸ್ ಎಂಬುದು ಘನ ಕರ್ನಾಟಕ ರಾಜ್ಯ ಸರ್ಕಾರದ ಒಂದು ಮುಖ್ಯವಾದ ಯೋಜನೆಯಾಗಿರುತ್ತದೆ. ಈ ಹಿಂದೆ ಗ್ರಾಮಗಳನ್ನು ಬೀಟ್ ಗಳೆ ಂದು ವಿಂಗಡಿಸಿಕೊಂಡು, ಬೀಟ್ ವ್ಯವಸ್ಥೆಯ ಮುಖಾಂತರವಾಗಿ ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ ಈಗ ಮುಂದುವರೆದು ಪ್ರತಿ ಸಾರ್ವ ಜನಿಕರ ಮನೆ ಮನೆಗೆ ಪೊಲೀಸ್ ಇಲಾಖೆಯು ತಲುಪಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದರು.
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಭಾಗವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿಮ್ಮ ಮನೆಗಳಿಗೆ ಭೇಟಿ ನೀಡಲಿzರೆ. ಈ ಸಂದರ್ಭ ದಲ್ಲಿ ತಮ್ಮ ಮನೆಗಳಿಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆ ಕಾಣಾ ಧಿಕಾರಿಗಳು ಬೀಟ್ ಸಿಬ್ಬಂದಿಗಳು ಅವರ ಹೆಸರುಗಳು ಮತ್ತು ಫೋನ್ ನಂಬರ್, ಸೈಬರ್ ಸಹಾಯವಾಣಿ ಮಕ್ಕಳ ಸಹಾಯವಾಣಿ ತುರ್ತು ಸಹಾಯವಾಣಿ ಹಾಗೂ ಪೋಲಿ ಸ್ ಉಪ ವಿಭಾಗಾಧಿಕಾರಿಗಳ ಫೋನ್ ನಂಬರ್‌ಗಳನ್ನು ಒಳಗೊಂ ಡ ವಿವರವನ್ನು ಮುದ್ರಿಸಿರುವ ಸ್ಟಿಕ್ಕರ್‌ಗಳನ್ನು ಅಂಟಿಸುತ್ತಾರೆ. ಮಾಹಿತಿಯನ್ನು ಮುದ್ರಿಸಿರುವ ಸ್ಟಿಕರ್‌ಗಳನ್ನು ಸೂಕ್ತವೆನಿಸಿದ ಜಗದಲ್ಲಿ ನೀವೇ ಅಂಟಿಸಿ ಹಾಗೂ ಸದರಿ ಸ್ಟಿಕರ್ ಗಳನ್ನು ಯಾವುದೇ ಕಾರಣಕ್ಕೂ ಕಿತ್ತು ಹಾಕಬೇಡಿ, ಯಾ ವುದೋ ತುರ್ತು ಸಂದರ್ಭದಲ್ಲಿ ಇವು ನಿಮ್ಮ ಸಹಾಯಕ್ಕೆ ಬರುತ್ತವೆ. ಪೊಲೀಸ್ ಇಲಾಖೆಯು ಸದಾ ನಿಮ್ಮ ಸೇವೆಗೆ ಸಿದ್ದರಿದ್ದು ನಿಮಗೆ ಅವಶ್ಯಕತೆ ಇರುವಂತಹ ಎ ರೀತಿಯ ಸಹಕಾರವನ್ನು ಕಾನೂನಿನ ಚೌಕಟ್ಟಿಗೆ ಒಳಪಟ್ಟು ನೀಡಲಿದೆ ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಎ.ಜಿ. ಕಾರ್‍ಯಪ್ಪ, ಡಿವೈಎಸ್‌ಪಿ ಸಂಜೀವ್ ಕುಮಾರ್ , ಗ್ರಾಮಾಂತರ ಠಾಣೆಯ ಪೊಲೀ ಸ್ ನಿರೀಕ್ಷಕ ಸತ್ಯನಾರಾಯಣ, ಹಾಗೂ ಪುರಲೆ, ಚಿಕ್ಕಲ್, ಗುರು ಪುರ, ಸಿzಶ್ವರ ನಗರ, ವೆಂಕಟೇಶ ನಗರ, ಹೊಳೆಬೆನವಳ್ಳಿ ಗ್ರಾಮಗಳ ಮುಖಂಡರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.