ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸೊರಬದ ಬಂಗಾರ ಧಾಮದಲ್ಲಿ ಮಾಜಿ ಸಿಎಂ ಬಂಗಾರಪ್ಪರ ಜನ್ಮದಿನೋತ್ಸವ

Share Below Link

ಶಿವಮೊಗ್ಗ: ಶ್ರೀ ಎಸ್. ಬಂಗಾರಪ್ಪ ಫೌಂಡೇ ಷನ್ ಹಾಗೂ ಶ್ರೀ ಎಸ್. ಬಂಗಾ ರಪ್ಪ ವಿಚಾರ ವೇದಿಕೆ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ದಿ| ಎಸ್. ಬಂಗಾರಪ್ಪ ಅವರ ೯೩ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಅ. ೨೬ರಂದು ಸೊರಬದ ಬಂಗಾg ಧಾಮದಲ್ಲಿ ಬೆಳಗಿನಿಂದ ಸಂಜೆಯ ವರೆಗೆ ಆಯೋಜಿಸಲಾಗಿದೆ ಎಂದು ವಿಚಾರ ವೇದಿಕೆಯ ಅಧ್ಯಕ್ಷ ವೇಣು ಗೋಪಾಲ್ ನಾಯಕ್ ಹೇಳಿದರು.
ಈ ಕುರಿತು ಸುದ್ದಿಗೋಷ್ಠಿ ಯಲ್ಲಿ ವಿವರಣೆ ನೀಡಿದ ಅವರು, ಬಂಗಾರಪ್ಪ ನವರು ಸಮಾಜವಾದಿ ಚಿಂತಕರಾಗಿದ್ದರು. ಅಭಿವೃದ್ಧಿಯ ಹರಿಕಾರರಾಗಿದ್ದರು. ಬಡವರ ಬಂಧುವಾಗಿ ಹಲವಾರು ಯೋಜ ನೆಗಳನ್ನು ಜರಿಗೆ ತಂದು ಜನ ಮಾನಸದಲ್ಲಿ ಉಳಿದಿzರೆ. ರಾಜ ಕೀಯ ಕ್ಷೇತ್ರದಲ್ಲಿ ಅವರೊಂದು ನಕ್ಷತ್ರವಾಗಿzರೆ. ಇಂತಹ ಬಂಗಾರಪ್ಪ ನವರ ಜನ್ಮ ದಿನೋತ್ಸವವನ್ನು ನಮನ- ಚಿಂತನ- ಸನ್ಮಾನದ ಮೂಲಕ ಆಯೋಜಿಸಲಾಗಿದೆ ಎಂದರು.


ಜನ್ಮ ದಿನೋತ್ಸವದ ಅಂಗವಾಗಿ ೪ ಜನರಿಗೆ ಬಂಗಾರ ಪ್ರಶಸ್ತಿ ನೀಡ ಲಾಗುವುದು. ಈ ಪ್ರಶಸ್ತಿ ೧ ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂ ಡಿರುತ್ತದೆ. ಈ ಬಾರಿ ಸಾಹಿತ್ಯ ಬಂಗಾರದ ಪ್ರಶಸ್ತಿಯು ಪ್ರಸಿದ್ಧ ಸಾಹಿತಿ ಡಾ. ಕಾಳೇಗೌಡ ನಾಗವಾರ, ಧರ್ಮ ಬಂಗಾರ ಪ್ರಶಸ್ತಿ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಬೆಂಗಳೂರು ಇವರ ಪರವಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಎಲ್. ರೇವಣಸಿದ್ದಯ್ಯ ಅವರಿಗೆ, ಜನಪದ ಬಂಗಾರ ಪ್ರಶಸ್ತಿಯು ಚೌಡಿಕೆ ಕಲಾವಿದೆ ರಾಧಾಬಾಯಿ ಮಾದರ್ ಅವರಿಗೆ ಹಾಗೂ ಕಲಾ ಬಂಗಾರ ಪ್ರಶಸ್ತಿ ಯನ್ನು ರಂಗಭೂಮಿ ಕಲಾವಿದ ಜೇವರ್ಗಿ ರಾಜಣ್ಣ ಅವರಿಗೆ ನೀಡಲಾಗುವುದು ಎಂದರು.
ಪ್ರಶಸ್ತಿ ಪ್ರದಾನ ಸಮಾರಂಭ ಸಂಜೆ ೫ ಗಂಟೆಗೆ ಬಂಗಾರ ಧಾಮ ದಲ್ಲಿ ನಡೆಯಲಿದ್ದು, ಸಚಿವ ಕೆ.ಹೆಚ್. ಮುನಿಯಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸು ವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸಚಿವ ಸಂತೋಷ್ ಲಾಡ್, ಶಾಸಕ ಬೇಳೂರು ಗೋಪಾಲಕೃಷ್ಣ, ಪ್ರಜವಾಣಿ, ಡೆಕ್ಕನ್ ಹೆರಾಲ್ಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ತಿಲಕ್ ಕುಮಾರ್, ನಾಟಕ ಅಕಾ ಡೆಮಿ ಅಧ್ಯಕ್ಷ ಡಾ.ಕೆ.ವಿ. ನಾಗರಾಜ್ ಮೂರ್ತಿ. ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ ನಾಯಕ್ ಉಪ ಸ್ಥಿತರಿದ್ದು, ಸಮಾರಂಭದ ಅಧ್ಯಕ್ಷತೆ ಯನ್ನು ಸಚಿವ ಎಸ್. ಮಧು ಬಂಗಾ ರಪ್ಪ ವಹಿಸಲಿzರೆ ಎಂದರು.
ಬಂಗಾರಪ್ಪ ವಿಚಾರ ವೇದಿಕೆ ಪ್ರಮುಖ ಹಾಗೂ ಯುವ ಮುಖಂಡ ಜಿ.ಡಿ. ಮಂಜುನಾಥ್ ಅವರು ಮಾತನಾಡಿ, ಬಂಗಾ ರಪ್ಪನವರ ಚಿಂತನೆಗಳು, ಆದರ್ಶ ಗಳು ಎ ಕಾಲಕ್ಕೂ ವರ್ತಮಾನ ವಾಗಿಯೇ ಇರುತ್ತವೆ. ಈ ಹಿನ್ನೆಲೆ ಯಲ್ಲಿ ಅ. ೨೬ರ ಬೆಳಗ್ಗೆ ೧೦.೩೦ಕ್ಕೆ ಸೊರಬದ ಡಾ. ರಾಜ್ ಕುಮಾರ್ ರಂಗಮಂದಿರದಲ್ಲಿ ಬಂಗಾರಪ್ಪ ನವರ ಚಿಂತನೆಗಳು ಕುರಿತ ಸುಸ್ಥಿರ ಬದುಕು -ಪ್ರಸ್ತುತತೆಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಹೆಚ್.ಎಲ್. ಪುಷ್ಪಾ ಮತ್ತು ಕನ್ನಡ ಸಾಹಿತ್ಯ ಪರಿಷತ್ ಜಿಧ್ಯಕ್ಷ ಡಿ. ಮಂಜುನಾಥ್ ಅವರು ಉಪನ್ಯಾಸ ನೀಡುವರು. ವಿಚಾರ ಸಂಕಿರಣದ ಉದ್ಘಾಟನೆಯನ್ನು ಪ್ರಸಿದ್ಧ ಕವಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು, ಸಾಹಿತಿ ಡಾ. ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸುವರು ಎಂದರು.
ನಂತರ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎ ಕಾರ್ಯಕ್ರಮಗಳಿಗೆ ಬಂಗಾರಪ್ಪ ನವರ ಅಭಿಮಾನಿಗಳು, ಹಿತೈಷಿ ಗಳು ಆಗಮಿಸಲಿzರೆ. ಸಾರ್ವಜನಿ ಕರು ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ವಿಚಾರ ವೇದಿಕೆಯ ಪ್ರಮುಖರಾದ ಶಮಂತ್, ಆದರ್ಶ ಹುಂಚದಕಟ್ಟೆ ಉಪಸ್ಥಿತರಿದ್ದರು.