ಆರೋಗ್ಯಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಎಸ್‌ಪಿ ನೇತೃತ್ವದಲ್ಲಿ ರನ್ ಫಾರ್ ಯೂನಿಟಿ…

Share Below Link

ಶಿವಮೊಗ್ಗ : ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ೧೫೦ನೇ ಜನ್ಮದಿನೋತ್ಸವದ ಅಂಗವಾಗಿ, ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಶಿವಮೊಗ್ಗ ಪೊಲೀಸ್ ವತಿಯಿಂದ ಡಿ.ಎ.ಆರ್. ಪೊಲೀಸ್ ಕವಾಯತು ಮೈದಾನದಿಂದ ರನ್ ಫಾರ್ ಯೂನಿಟಿ ಮ್ಯಾರಥಾನ್ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ೨೦೨೫ನೇ ಸಾಲಿನ ಗಣೇಶ ಹಾಗೂ ಈದ್ ಮಿಲಾದ್ ಬಂದೋಬಸ್ತ್ ಸಂದರ್ಭದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿಗಳು ಪ್ರಶಂಸನಾ ಪತ್ರಗಳನ್ನು ವಿತರಿಸಿ ಗೌರವಿಸಿದರು.
ರಾಷ್ಟ್ರೀಯ ಏಕತಾ ದಿನದ ಪ್ರತಿe ವಿಧಿಯನ್ನು ಸ್ವೀಕರಿಸಿ, ಮ್ಯಾರಥಾನ್‌ಗೆ ಚಾಲನೆ ನೀಡಲಾಯಿತು. ನಂತರ ಜಿಲ್ಲಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಮ್ಯಾರಥಾನ್ ಓಟವು ಡಿಎಆರ್ ಪೊಲೀಸ್ ಮೈದಾನದಿಂದ ಪ್ರಾರಂಭಿಸಿ, ನಂತರ ಅಶೊಕ ವೃತ್ತ, ಗೋಪಿ ವೃತ್ತ, ಐಬಿ ವೃತ್ತದಿಂದ ಡಿಎಆರ್ ಪೊಲೀಸ್ ಮೈದಾನಕ್ಕೆ ಬಂದು ಮುಕ್ತಾಯವಾಯಿತು.