ನ.೭ರಿಂದ ೪ ದಿನಗಳ ನಗರದಲ್ಲಿ ಕಾಲ ಕೃಷಿ ಮೇಳ…
ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿವಿ ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನ.೭ರಿಂದ ೧೦ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಿದೆ ಎಂದು ವಿವಿ ಕುಲಪತಿ ಡಾ.ಆರ್.ಸಿ. ಜಗದೀಶ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಈ ಮೇಳದಲ್ಲಿ ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರಾತ್ಯಕ್ಷಿಕೆಗಳು, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ವಿeನಿಗಳ- ರೈತ ರೊಂದಿಗೆ ಸಂವಾದ ಕಾರ್ಯಕ್ರಮಗಳು ಮತ್ತು ವಿಚಾರ ಗೋಷ್ಠಿಗಳನ್ನು ಏರ್ಪಡಿಸಲಾಗುವುದು ಎಂದರು.
ಈ ಮೇಳದಲ್ಲಿ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು, ಸಸಿಗಳು ಮತ್ತು ತಳಿಗಳ ಪ್ರದರ್ಶನ ಮತ್ತು ಮಾರಾಟದ ಜೊತೆಗೆ ತಂತ್ರeನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ ಕೃಷಿ ಮತ್ತು ತೋಟಗಾರಿಕೆ- ಅರಣ್ಯ-ಸಮಗ್ರ ಪದ್ಧತಿಗಳು ಕೃಷಿ ಮತ್ತು ತೋಟಗಾರಿಕಾ ವಸ್ತು ಪ್ರದರ್ಶನ, ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರಾತ್ಯಕ್ಷಿಕೆ , ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಜೈವಿಕ ಪರಿಕರಗಳ ಪ್ರದರ್ಶನ, ರೈತ – ವಿeನಿ ಸಂವಾದ ಮತ್ತು ವಿಚಾರ ಗೋಷ್ಠಿಯನ್ನು ಏರ್ಪಡಿಸಲಾಗಿರುತ್ತದೆ ಎಂದರು.

ಅನೇಕ ವಿಶೇಷತೆಗಳೊಂದಿಗೆ ಆಯೋಜಿಸಲಾಗುತ್ತಿರುವ ಈ ಮೇಳದಲ್ಲಿ ತಂತ್ರeನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಪುಷ್ಪ ಕೃಷಿ, ತಾರಸಿ ತೋಟ ಮತ್ತು ಲಂಬ ತೋಟ, ಜೇನು ಸಾಕಾಣಿಕೆ ಮತ್ತು ಕೀಟ ಪ್ರಪಂಚ, ಸಿರಿಧಾನ್ಯಗಳ ಮಹತ್ವ, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ. ಸಂಸ್ಕರಣೆ ಮತ್ತು ಮಲ್ಯವರ್ಧನೆ, ಸಮಗ್ರ ಜಲಾನಯನ ಅಭಿವೃದ್ಧಿ, ಕೃಷಿ-ತೋಟಗಾರಿಕ-ಅರಣ್ಯ ಸಮಗ್ರ ಪದ್ಧತಿಗಳು, ಸಾವಯವ ಕೃಷಿ, ಅಣಬೆ ಬೇಸಾಯ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ತಂತ್ರeನಗಳು, ಕೊಯೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮಲ್ಯವರ್ಧಿತ ಕೃಷಿ ಉತ್ಪನ್ನಗಳು, ಹವಾಮಾನ ಆಧಾರಿತ ಕೃಷಿ, ಕೃಷಿ ಪರಿಕರ ಮತ್ತು ಯಂತ್ರೋಪಕರಣ ಪ್ರದರ್ಶನ, ಶ್ರೇಷ್ಟ- ಕೃಷಿಕರು ಮತ್ತು ಕೃಷಿಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದವರು ತಿಳಿಸಿದರು.
ಈ ಮೇಳದ ವಿಶೇಷತೆ ಎಂದರೆ ಸಮಗ್ರ ಕೃಷಿ ಪದ್ಧತಿ, ಅಂತರ್ಜಲ ಮರುಪೂರಣ, ಹೈಟಿಕ್ ತೋಟಗಾರಿಕೆ. ಪುಷ್ಪ ಕೃಷಿ ಮತ್ತು ತಾರಸಿ ತೋಟ, ಜೇನುವನ ಮತ್ತು ಕೀಟ ಪ್ರಪಂಚ, ಪರಿಸರ ಕೃಷಿ ಪ್ರವಾಸೋದ್ಯಮ, ಸಿರಿಧಾನ್ಯಗಳ ತ್ವಗಳ ಮಲ್ಯವರ್ಧನೆ ಮತ್ತು ತಾಂತ್ರಿಕತೆಗಳು, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ, ಸಂಸ್ಕರಣೆ ಮತ್ತು ಮಲ್ಯವರ್ಧನೆ, ಸಹಕಾರ ಕೃಷಿ, ಮಲ್ಯವರ್ಧನೆ ಹಾಗೂ ಮಾರಾಟದ ಚರ್ಚಾ ಗೋಷ್ಠಿಗಳು ಇತ್ಯಾದಿ ಕಾರ್ಯಕ್ರಮಗಳ ಮೂಲಕ ಆಕರ್ಷಿಸಲು ಉzಶಿಸಲಾಗಿದೆ ಎಂದರು.
ಈ ವರ್ಷ ದಕ್ಷಿಣ ಭಾರತದ ಪ್ರಪ್ರಥಮ ಬಾರಿಗೆ ಸಹ್ಯಾದ್ರಿ ಸಿಂಧೂರ ಎಂಬ ಸಣ್ಣ ಕೆಂಪಕ್ಕಿ ಭತ್ತದ ತಳಿಯನ್ನು ಬಿಡುಗಡೆ ಮಾಡಿರು ವುದು ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ಕೆಹೆಚ್ ಪಿ-೧೧ ಭತ್ತದ ತಳಿಯನ್ನು ಗುಡ್ಡಗಾಡು ಪ್ರದೇಶಕ್ಕೆ ಬಿಡುಗಡೆ ಮಾಡಿಲಾಗಿದೆ. ಅಲ್ಲದೆ ಪ್ರಸಕ್ತ ಸಾಲಿನಲ್ಲಿ ರಾಗಿ ತಳಿ ಕೆಎಂಆರ್ ೬೩೦ ಮತ್ತು ಬರಗು ತಳಿ ಹಾಗೂ ಸಹ್ಯಾದ್ರಿ ಪ್ರಗತಿ ಎಂಬ ಕಡಲೆ ತಳಿಗಳನ್ನು ಅಭಿವೃದ್ಧಿಪಡಿ ಸಲಾಗಿದೆ. ಅಲ್ಲದೇ, ಕೃಷಿ ಮತ್ತು ಕೃಷಿ ಮತ್ತು ತೋಟಗಾರಿಕೆಯಲ್ಲಿ ೧೩ ವಿವಿಧ ಉತ್ಪಾದನಾ ತಾಂತ್ರಿಕತೆಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆಗೊಳಿಸಲಾಗಿದೆ ಮತ್ತು ೨೫ ಕ್ಷೇತ್ರ ಪ್ರಯೋಗಗಳನ್ನು ಕೈಗೊಳ್ಳಲಾಗಿದೆ ಎಂದರು.
ಕೃಷಿ-ತೋಟಗಾರಿಕೆ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಗಣನೀಯ ಸಾಧನೆಗೈದ ಜಿ ಮಟ್ಟದ ಪ್ರಗತಿಪರ ಶ್ರೇಷ್ಠ ರೈತ ಮತ್ತು ರೈತ ಮಹಿಳೆಯರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದರು.
ನ.೭ರಂದು ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ತಾಂತ್ರಿಕ ಕೈಪಿಡಿಗಳ ಬಿಡುಗಡೆಗೊಳಿಸುವರು. ರಾಜ್ಯ ಗಣಿ, ಭೂ ವಿeನ ಮತುತರ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ತಂತ್ರeನ ಉದ್ಯಾನವನ ಉದ್ಘಾಟಿಸುವರು. ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ಉಪಸ್ಥಿತರಿರುವರು. ಶಾಸಕಿ ಶ್ರೀಮತಿ ಶಾರದಾ ಪೂರ್ಯಾ ನಾಯ್ಕಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ವಿವಿಧ ಗಣ್ಯರುಗಳು ಭಾಗವಹಿಸ ಲಿದ್ದಾರೆ ಎಂದರು.
ವಿವಿಯ ಗ್ರಂಥಪಾಲಕ ಬಿ.ಕೆ. ಶಿವಣ್ಣ, ವಿಸ್ತರಣಾಧಿಕಾರಿ ಡಾ. ಗಿರಿಜೇಶ್, ಡಾ. ದುಶ್ಯಂತ ಕುಮಾರ್, ಡಾ. ಹೇಮ್ಲಾನಾಯ್ಕ್, ಡಾ.ತಿಪ್ಪೇಶ ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
