ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ವಿಐಎಸ್‌ಎಲ್ ಕುರಿತು ಭದ್ರಾವತಿ ಜನತೆಗೆ ಶೀಘ್ರವೇ ಸಿಹಿಸುದ್ದಿ…

Share Below Link

ಶಿವಮೊಗ್ಗ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಶನಿವಾರ ಭೇಟಿ ನೀಡಿದರು.
ಈ ಹಿಂದೆ ಉಕ್ಕು ಸಚಿವರಾದ ಕೂಡಲೇ ೨೦೨೪ ಜೂ.೩೦ ರಂದು ಭೇಟಿ ನೀಡಿದ್ದರು. ಅದಾದ ಮೇಲೆ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಹಲವಾರು ಸಭೆಗಳನ್ನು ನಡೆಸಿದ್ದ ಸಚಿವರು ಮತ್ತೊಮೆ ಭದ್ರಾವತಿ ಕಾರ್ಖಾನೆಗೆ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಾಂತ್ರಿಕ ನಿಲುನರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಖಾನೆಗೆ ಆಗಮಿಸಿದ ಕೂಡಲೇ ಆಡಳಿತ ಮಂಡಳಿ ಜತೆ ಸಭೆ ನಡೆಸಿದ ಸಚಿವರು, ವಿವಿಧ ಯೋಜನೆಗಳು ಹಾಗೂ ಕಾರ್ಖಾನೆಯ ಸದ್ಯದ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದರು. ಅಲ್ಲದೆ, ಉತ್ಪಾದನೆ ಹಾಗೂ ವೆಚ್ಚದ ಬಗ್ಗೆ ಮಾಹಿತಿ ಪಡೆದು ಕೊಂಡರು. ಬಳಿಕ ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತದನಂತರ ಮತ್ತೊಮ್ಮೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವ ಕುಮಾರಸ್ವಾಮಿ ಅವರು, ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ ಮಾರ್ಗೋಪಾಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ಅಲ್ಲದೆ, ಸಭೆಯಿಂದಲೇ ಭಾರತೀಯ ಉಕ್ಕು ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜತೆ ಕೆಲ ಮಹತ್ವದ ಮಾಹಿತಿ ಪಡೆದುಕೊಂಡರು.
ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ ಒತ್ತಾಯ ಮಾಡಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿ ರುವ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಹೆಚ್.ಡಿ.ಕೆ. ಅವರು ಆತಂಕಗೊಂಡಿರುವ ಕಾರ್ಮಿಕರಿಗೆ ಧೈರ್ಯ ತುಂಬಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅವರು ಸ್ವಾತಂತ್ರ್ಯಪೂರ್ವದಲ್ಲಿಯೇ ಕಟ್ಟಿದ್ದ ಈ ಕಾರ್ಖಾನೆ ರಾಷ್ಟ್ರದ ಉಕ್ಕು ಕ್ಷೇತ್ರಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದೆ. ಹೀಗಾಗಿ ಹೇಗಾದರೂ ಮಾಡಿ ಕಾರ್ಖಾನೆ ಯನ್ನು ಉಳಿಸುವ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಚಿಂತನೆ ನಡೆಸುತ್ತಿದೆ. ನಾನು ಉಕ್ಕು ಸಚಿವನಾದ ಮೇಲೆ ಈ ಕಾರ್ಖಾನೆಗೆ ಎರಡನೇ ಸಲ ಭೇಟಿ ನೀಡಿದ್ದೇನೆ. ಕೇಂದ್ರ ಸರಕಾರ ಎಷ್ಟು ಗಂಭೀರವಾಗಿ ಕಾರ್ಖಾನೆಯನ್ನು ಪರಿಗಣಿಸಿದೆ ಎಂಬುದಕ್ಕೆ ನನ್ನ ಭೇಟಿಯೇ ಸಾಕ್ಷಿ ಎಂದರು.
ಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗಿಯಾಗಿ ಕೆಲ ಪ್ರಮುಖ ವಿಚಾರಗಳನ್ನು ಹಂಚಿಕೊಂಡರು.
ನಂತರ ನ.೩೦ರ ಭಾರನುವಾರ ಶಿವವಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉಕ್ಕು ಕ್ಷೇತ್ರದ ಬಲವರ್ಧನೆಗೆ ಅತಿಹೆಚ್ಚು ಮಹತ್ವ ನೀಡುತ್ತಿzರೆ ಎಂದರು.
ಉಕ್ಕು ಉತ್ಪಾದನೆಯಲ್ಲಿ ಸ್ವಾವಲಂಭನೆ ಸಾಧಿಸಬೇಕು ಎನ್ನುವ ಹೆಗ್ಗುರಿಯನ್ನು ಪ್ರಧಾನಿ ಮೋದಿ ಅವರು ಹೊಂದಿzರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಬಹಳ ಶ್ರದ್ಧೆಯಿಂದ ಕೆಲಸ ಮಾಡುತ್ತಿ ದ್ದೇವೆ. ಹೀಗಾಗಿ ಕಾರ್ಮಿಕರು ಆತಂಕಗೊಳ್ಳುವುದು ಬೇಡ ಎಂದು ಸಚಿವರು ಹೇಳಿದರು.
ವಿಐಎಸ್‌ಎಲ್ ಪುನಶ್ಚೇತನಕ್ಕೆ ಈಗಾಗಲೇ ಕೇಂದ್ರ ಸರ್ಕಾರ ೪ಸಾವಿರ ಕೋಟಿ ಮೀಸಲಿಟ್ಟಿದ್ದು, ಶೀಘ್ರದಲ್ಲೇ ಭದ್ರಾವತಿ ಜನತೆಗೆ ಸಿಹಿ ಸುದ್ದಿ ನೀಡಲಾಗುವುದು ಎಂದರು.
ಸುದ್ದಿಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಕಾರ್‍ಯಾಧ್ಯಕ್ಷರಾದ ದಾದಾಪೀರ್, ರಾಮಕೃಷ್ಣ, ಭದ್ರಾವತಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಮತಿ ಶಾರದಾ ಅಪ್ಪಾಜಿಗೌಡ, ಭದ್ರಾವತಿ ತಾಲೂಕು ಘಟಕದ ಅಧ್ಯಕ್ಷ ಕರುಣಾಮೂರ್ತಿ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ರಾಜ್ಯ ಕಾರ್ಯದರ್ಶಿ ರಾಕೇಶ್ ಡಿಸೋಜ, ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಕಾರ್‍ಯಾಧ್ಯಕ್ಷ ನಿಖಿಲ್, ನಗರ ಘಟಕದ ಅಧ್ಯಕ್ಷ ದೀಪಕ್ ಸಿಂಗ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.