ಜಿಲ್ಲಾ ಸುದ್ದಿತಾಜಾ ಸುದ್ದಿ

ಜ.11: ಪಂಚಾಚಾರ್ಯ ಸಹಕಾರ ಸಂಘದ ರಜತ ಮಹೋತ್ಸವ ಕಾರ್‍ಯಕ್ರಮ…

Share Below Link

ಶಿವಮೊಗ್ಗ: ಶ್ರೀ ಜಗದ್ಗುರು ಪಂಚಾಚಾರ್ಯ ಪತ್ತಿನ ಸಹಕಾರ ಸಂಘದ ೨೫ನೇ ವರ್ಷದ ರಜತ ಮಹೋತ್ಸವದ ಕಾರ್ಯ ಕ್ರಮವು ಜ.೧೧ರಂದು ಬೆಳಿಗ್ಗೆ ೧೦.೩೦ಕ್ಕೆ ಜೆ.ಹೆಚ್.ಪಟೇಲ್ ಬಡಾವಣೆಯ ಶ್ರೀ ವೀರಶೈವ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀಮದ್ ಉಜ್ಜಯಿನಿ ಜಗದ್ಗುರು ಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಸಹಕಾರ ಸಂಘದ ಉಪಾಧ್ಯಕ್ಷ ಹೆಚ್.ಎಲ್. ಲಿಂಗರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಬಿ.ವೈ. ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಹಕಾರ ಸಂಘದ ಅಧ್ಯಕ್ಷ ಟಿ.ವಿ. ಈಶ್ವರಯ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಬಿ.ಕೆ. ಸಂಗಮೇಶ್ವರ್, ಶಾರದಾ ಎಸ್. ಪೂರ್‍ಯಾನಾಯ್ಕ, ಡಿ.ಎಸ್. ಅರುಣ್, ಡಾ|ಧನಂಜಯ ಸರ್ಜಿ, ಡಿಸಿಸಿ ಬ್ಯಾಂಕ್ ಅಧ್ಯಕ್ಚ ಆರ್.ಎಂ. ಮಂಜುನಾಥಗೌಡ, ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ಪ್ರಮುಖರಾದ ಹನುಮಂತಪ್ಪ ಸಿ., ಅಮೃತೇಶ್ವರ ಬಿ.ಎಂ., ಎಸ್.ಎನ್. ಮಹಾಲಿಂಗಯ್ಯ ಶಾಸ್ತ್ರೀ, ನಾಗಭೂಷಣ್ ಸಿ. ಕಲ್ಮನೆ, ಶ್ರೀನಿವಾಸ ಟಿ.ವಿ. ಉಪಸ್ಥಿತರಿರುವರು ಎಂದರು.
ಉಜ್ಜಯಿನಿ ಪೀಠದ ಶ್ರೀ ಶ್ರೀ ೧೦೦೮ ಜಗದ್ಗುರು ಸಿದ್ಧಲಿಂಗ ರಾಜದೇಶೀ ಕೇಂದ್ರ ಶಿವಾಚಾರ್‍ಯ ಭಗವತ್ಪಾದ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದು, ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು, ಸಾಲೂರು ಹಿರೇಮಠದ ಶ್ರೀ ಗುರುಲಿಂಗ ಜಂಗಮ ಶಿವಾಚಾರ್ಯ ಸ್ವಾಮಿಗಳು, ಬೆಂಗಳೂರು ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್‍ಯ ಸ್ವಾಮಿಗಳ ಸಮ್ಮುಖ ದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಹಕಾರ ಸಂಘದ ಅಧ್ಯಕ್ಷ ಟಿ.ವಿ. ಈರಯ್ಯ, ನಿರ್ದೇಶಕರಾದ ಚೇತನ್ ಹಿರೇಮಠ್, ನೀಲಕಂಠಯ್ಯ, ಪ್ರದೀಪ್ ಚಂದ್ರ , ಮೃತ್ಯುಂಜಯ ಶಾಸ್ತ್ರೀ, ಮೊದಲಾದವರಿದ್ದರು.