ಕ್ರೈಮ್ ಕಂಟ್ರೋಲ್‌ಗೆ ಗಮನ ನೀಡಿ; ದಿಶಾ ಸಭೆಯಲ್ಲಿ ಸಂಸದ ಬಿವೈಆರ್…
ಶಿವಮೊಗ್ಗ: ಹವಾಮಾನ ಆಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕ ವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆ ಯುವಲ್ಲಿ ರೈತರಿಗೆ ಆದ ಅನ್ಯಾಯ ಸಹ ಸರಿಪಡಿಸಬೇಕೆಂದು ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿಂದು ಏರ್ಪಡಿಸಿದ್ದ ಜಿ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹವಾಮಾನ ಆಧಾರಿತ ಬೆಳೆ ವಿಮೆ ಯಲ್ಲಿ ಜಿಯ ರೈತರಿಗೆ ಸಾಕಷ್ಟು ಅನ್ಯಾಯವಾಗಿದೆ. ಕಳೆದ ಸಾಲಿನಲ್ಲಿ ರೂ. ೭೦-೮೦ ಕೋಟಿಯಷ್ಟು ವಿಮಾ ಮೊತ್ತ ನಷ್ಟವಾಗಿದೆ. ಆದ್ದರಿಂದ ಬೆಳೆ ನಷ್ಟವನ್ನು ನಿರ್ಧರಿ ಸುವ ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಜಿಯಲ್ಲಿ ಒಟ್ಟು ೨೮೦ ಮಳೆ ಮಾಪನ ಕೇಂದ್ರಗಳಿದ್ದು ಇದರಲ್ಲಿ ೧೧೨ ಅಂದರೆ ಕೇವಲ ಶೇ.೪೦ ರಷ್ಟು ಮಾತ್ರ ಕೆಲಸ ಮಾಡುತ್ತಿವೆ ಎಂದು ವರದಿ ನೀಡಲಾಗಿದೆ. ಈ ಕೇಂದ್ರಗಳ ಬ್ಯಾಕ್ ಅಪ್ ಸ್ಟೇಷನ್‌ಗಳು ಸಹ ಸರಿ ಇಲ್ಲ. ಈ ಬಗ್ಗೆ ಅಧಿಕಾರಿಗಳು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಹಾಗೂ ರೈತರಿಗೆ ವಿಮೆ ನೀಡುವಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕಳೆದ ಬಾರಿ ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದರಲ್ಲದೇ, ವಿಮೆ ನಿರ್ಧರಿಸುವ ಟರ್ಮ್ ಶೀಟ್ ಮಾನದಂಡವನ್ನು ಪಾರದರ್ಶಕ ಗೊಳಿಸಬೇಕು. ಸ್ಥಳೀಯ ಶಾಸಕ ರೊಂದಿಗೆ ಸಭೆ ನಡೆಸಿ ರೈತರ ಪರವಾಗಿ, ಅವರಿಗೆ ಅನುಕೂಲ ವಾಗುವಂತೆ ಟರ್ಮ್ ಶೀಟ್‌ನ್ನು ಸಿದ್ದಪಡಿಸಬೇಕೆಂದು ತಿಳಿಸಿದರು.
ಶಿಕಾರಿಪುರ ತಾಲ್ಲೂಕಿನ ಕಪುರ ಗೇಟ್‌ನಿಂದ ಕುಟ್ರಳ್ಳಿವರೆಗೆ ಕೇವಲ ೩೦ ಕಿ ಮೀ ಇದ್ದರೂ ಇಲ್ಲಿ ಟೋಲ್ ನಿರ್ಮಿಸಿದ್ದು ಈ ಟೋಲ್ ಗೇಟಿನಿಂದಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ನಿಯಮಾವಳಿ ಪ್ರಕಾರ ೬೦ ಕಿ.ಮೀಗೆ ಟೋಲ್ ನಿರ್ಮಿಸ ಬಹುದು ಎಂದಿದೆ. ಆದ್ದರಿಂದ ಈ ಟೋಲ್‌ನ್ನು ಬೇರೆಡೆ ಶಿಫ್ಟ್ ಮಾಡಬೇಕೆಂದು ಸದಸ್ಯರು, ಸಂಸದರು ತಿಳಿಸಿದರು.

ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ಅಂಡರ್ ಬ್ರಿಡ್ಜ್‌ಗೆ ಅನುಮೋದನೆ ದೊರೆತು ಒಂದು ವರ್ಷವಾಗಿದ್ದು ಶೀಘ್ರ ಕಾರ್ಯಾರಂಭ ಮಾಡಬೇಕು ಹಾಗೂ ರೂ.೭೩ ಕೋಟಿ ವೆಚ್ಚದಲ್ಲಿ ಮಂಜೂರಾಗಿರುವ ಫ್ರೀಡಂ ಪಾರ್ಕ್ ಹಿಂದಿನ ಆರ್‌ಓಬಿ ಕಾಮಗಾರಿಯನ್ನು ಸಹ ಶೀಘ್ರದಲ್ಲಿ ಆರಂಭಿಸಬೇಕೆಂದು ರೈಲ್ವೆ ಅಧಿಕಾರಿಗಳು ಮತ್ತು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ರಸ್ತೆ ಡಾಂಬರೀಕರಣ ಹಾಳಾಗಿರುವೆಡೆ ಜಿ.ಪಂ ಸಿಇಓ ಅವರು ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಬೇಕು ಎಂದ ಅವರು ಪಿಎಂಜಿಎಸ್‌ವೈ ಯೋಜನೆಯ ಕಾಮಗಾರಿಗಳನ್ನು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದು ಇತರೆ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯವೆಸಗಬೇಕೆಂದರು.
೨೦೨೪-೨೫ನೇ ಸಾಲಿನ ಸಂಸತ್ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ ಮಾಡಿ, ವಿಕಲಚೇತನರು ಸ್ವಾವಲಂಬಿಗಳಾಗಿ, ಆತ್ಮಗೌರವ ದೊಂದಿಗೆ ಬದುಕು ಕಟ್ಟಿಕೊಳ್ಳಲು ಚಲನೆಯ ಸ್ವಾತಂತ್ರ್ಯ ಅತ್ಯಂತ ಅವಶ್ಯಕ. ಈ ದ್ವಿಚಕ್ರವಾಹನಗಳು ಅವರ ಶಿಕ್ಷಣ, ಉದ್ಯೋಗ ಹಾಗೂ ದಿನನಿತ್ಯದ ಜೀವನವನ್ನು ಸುಲಭಗೊಳಿಸಿ, ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಜಿಯಲ್ಲಿ ಚಡ್ಡಿ ಗ್ಯಾಂಗ್ ಸೇರಿದಂತೆ ಕಳ್ಳತನ ಹೆಚ್ಚಾಗಿದ್ದು, ಶೇ.೧೦ ರಿಂದ ೧೨ ಮಾತ್ರ ರಿಕವರಿ ಆಗುತ್ತಿದೆ. ಹಾಗೂ ಜಿಯಲ್ಲಿ ಗಾಂಜ, ಓಸಿ, ಮಟ್ಕಾ, ಗ್ರಾಮಗಳಲ್ಲಿ ಸೆಕೆಂಡ್ಸ್ ಮದ್ಯ ಮಾರಾಟ ಹೆಚ್ಚಿದ್ದು, ಇದನ್ನು ನಿಯಂತ್ರಿಸಲು ಮತ್ತು ತಡೆಯಲು ಜಿ ಪೊಲೀಸ್ ವರಿಷ್ಟಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಸಂಸದರು ಸೂಚಿಸಿದರು.
ದಿಶಾ ಸಮಿತಿ ಸದಸ್ಯರಾದ ದೇವೇಂದ್ರಪ್ಪ, ಮಹಾದೇವಪ್ಪ, ಸುವರ್ಣ, ಗುರುಮೂರ್ತಿ, ಗಿರೀಶ್ ಭದ್ರಾಪುರ, ಆನಂದ್ , ನಗರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾ ಪಂ ಅಧ್ಯಕ್ಷರು, ಸದಸ್ಯರು, ಜಿಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ.ಸಿಇಓ ಹೇಮಂತ್ ಎನ್, ಎಸ್‌ಪಿ ನಿಖಿಲ್ ಬಿ, ಜಿ ಮಟ್ಟದ ಅಧಿಕಾರಿಗಳು ಹಾಜರಿದ್ದರು.
