ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಿವಮೊಗ್ಗ ಜೆಡಿಎಸ್‌ಗೆ ರಾಮಕೃಷ್ಣ ಸಾರಥ್ಯ; ಫೆ.23: ಪಕ್ಷದ ಜಿಲ್ಲಾ ಮುಖಂಡರ ಸಮಕ್ಷಮದಲ್ಲಿ ಅಧಿಕಾರ ಸ್ವೀಕಾರ…

Share Below Link

ಶಿವಮೊಗ್ಗ : ಶಿವಮೊಗ್ಗ ಜಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಯಾಗಿದ್ದು ಜೆಡಿಎಸ್ ಜಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಎನ್. ರಾಮಕೃಷ್ಣ ಅವರು ಫೆ.೨೩ರಂದು ಬೆಳಿಗ್ಗೆ ೧೦.೩೦ಕ್ಕೆ ಪಕ್ಷದ ಜಿ ಕಚೇರಿಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿzರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ನಿರ್ಗಮಿತ ಜಿ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯ ಸಮಿತಿ ಸಭೆಯಲ್ಲಿ ೧೫ ಜಿಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ ಎಂದರು.
ಈ ಹಿಂದೆ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ತಾವು ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ನನಗೆ ವಯಸ್ಸಾಗಿದೆ ಒಂದು ವರ್ಷ ಮಾತ್ರ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪಕ್ಷದ ವರಿಷ್ಠರಿಗೆ ತಿಳಿಸಿzಗಿ ನುಡಿದ ಅವರು, ಪಕ್ಷದ ಜಿಲ್ಲಾ ಮುಖಂಡರ ಸಹಕಾರದಿಂದಾಗಿ ಕಳೆದ ಮೂರು ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದಾಗಿ ತಿಳಿಸಿದರಲ್ಲದೇ, ತಮ್ಮ ಅವಧಿಯಲ್ಲಿ ಪಕ್ಷ ವನ್ನು ಸಂಘಟಿತಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿzಗಿ ಡಾ. ಕಡಿದಾಳ್ ಗೋಪಾಲ್ ವಿವರಿಸಿದರು.


ತಮ್ಮ ಅವಧಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಜಯ ಸಾಧಿಸಿದ್ದು, ಮೈತ್ರಿ ರಾಜಕಾರಣದ ಬಲವನ್ನು ತೋರಿಸಿದೆ ಎಂದು ಅವರು ಅಭಿಪ್ರಾಯಪಟ್ಟರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಲ್ಲಿ ಸಂಘಟನೆ ಬಲಪಡಿಸಲಾಗಿದೆ ಎಂದು ತಿಳಿಸಿದರು.
ನೂತನ ಜಿ ಅಧ್ಯಕ್ಷ ಕೆ.ಎನ್. ರಾಮಕೃಷ್ಣ ಅವರು ಮಾತನಾಡಿ, ತಾವು ಕಳೆದ ೪೨ ವರ್ಷಗಳಿಂದ ಜನತಾದಳ ಹಾಗೂ ಜತ್ಯಾತೀತ ಜನತಾದಳದಲ್ಲಿ ಸಕ್ರಿಯ ವಾಗಿ ಕಾರ್ಯನಿರ್ವಹಿಸಿರುವುದು ತಮ್ಮ ರಾಜಕೀಯ ಪಯಣದ ದೊಡ್ಡ ಸಂಪತ್ತಾ ಗಿದೆ ಎಂದರಲ್ಲದೇ, ೧೬ ವರ್ಷಗಳ ಕಾಲ ಶಿವಮೊಗ್ಗ ತಾಲೂಕು ಅಧ್ಯಕ್ಷರಾಗಿ, ೮ ವರ್ಷ ಜಿ ಘಟಕದಲ್ಲಿ ವಿವಿಧ ಹುzಗಳನ್ನು ನಿರ್ವಹಿಸಿzಗಿ ವಿವರಿಸಿದರು.
ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇ ಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ ಎಂದರು.
ಜಿದ್ಯಂತ ಪ್ರವಾಸ ಮಾಡಿ ತಾಲೂಕು ಹಾಗೂ ಬೂತ್ ಮಟ್ಟದ ಕಾರ್ಯಕರ್ತ ರನ್ನು ಸಂಪರ್ಕಿಸಿ ಪಕ್ಷವನ್ನು ಮತ್ತಷ್ಟು ಸಂಘಟಿಸುತ್ತೇನೆ. ನಂತರ ಪಕ್ಷದ ರಜತ ಮಹೋತ್ಸವವನ್ನು ದೊಡ್ಡ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.
ಸಹಕಾರ ಕ್ಷೇತ್ರದಲ್ಲಿಯೂ ಸುಮಾರು ೩೩ ವರ್ಷಗಳ ಅನುಭವ ಹೊಂದಿರುವ ರಾಮಕೃಷ್ಣ, ಕಳೆದ ೨೦ ವರ್ಷಗಳಿಂದ ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸು ತ್ತಿದ್ದು, ವಿವಿಧ ಪ್ರಶಸ್ತಿಗಳನ್ನು ಪಡೆದಿzರೆ.
ಫೆ.೨೩ರ ಸರಳ ಸಮಾರಂಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್‍ಯನಾಯ್ಕ, ಭದ್ರಾವತಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಗಳೂ ಆದ ಜೆಡಿಎಸ್ ರಾಜ್ಯ ಮುಖಂಡರಾದ ಶ್ರೀಮತಿ ಶಾರದಾ ಅಪ್ಪಾಜಿಗೌಡ, ಮಾಜಿ ಶಾಸಕರೂ ಆದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್, ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿzರೆ. ಬಳಿಕ ನಡೆಯುವ ಪದಾಧಿಕಾರಿಗಳ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ತಂತ್ರ ಹಾಗೂ ಸಂಘಟನೆ ಬಲವರ್ಧನೆ ಕುರಿತು ಚರ್ಚೆ ನಡೆಯಲಿದೆ ಎಂದರು.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಜತ ಮಹೋತ್ಸವ ಸಮಾರಂ ಭದ ಬಳಿಕ, ಫೆ.೨೭ರಂದು ವಿಜಯಪುರದಲ್ಲಿ ನಡೆಯುವ ಮತ್ತೊಂದು ರಜತ ಮಹೋತ್ಸವ ಕಾರ್ಯಕ್ರಮದಲ್ಲಿಯೂ ಶಿವಮೊಗ್ಗ ಜಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿzರೆ ಎಂದು ತಿಳಿಸಲಾಗಿದೆ.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ರಾಕೇಶ್ ಡಿಸೋಜ, ಜಿಲ್ಲಾ ಕಾರ್‍ಯಾಧ್ಯಕ್ಷ ದಾದಾಪೀರ್, ಮಹಾಪ್ರಧಾನ ಕಾರ್‍ಯದರ್ಶಿ ತ್ಯಾಗರಾಜ್, ಜೆಡಿಎಸ್ ಯುವ ಘಟಕದ ಜಿಲ್ಲಾ ಕಾರ್‍ಯಾಧ್ಯಕ್ಷ ನಿಖಿಲ್, ಪ್ರಮುಖರಾದ ಹೆಚ್.ಎಂ. ಸಂಗಯ್ಯ, ಎಂ. ಉಮಾಶಂಕರ ಉಪಾಧ್ಯ, ನಾಗೇಶ್, ಪ್ರೇಮ್ ಕುಮಾರ್, ವಾಜಿದ್, ಎಸ್.ಮುಕುಂದ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *