ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ : ಸಚಿವ ಮುರುಗನ್
ಶಿವಮೊಗ್ಗ, ಫೆ.೨೬: ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮ ಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ ಇಡಲಾಗಿದೆ ಎಂದು ಕೇಂದ್ರದ ಮಾಹಿತಿ ಹಾಗೂ ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ತಿಳಿಸಿದರು.
ಶಿವಮೊಗ್ಗದ ವಿದ್ಯಾನಗರದಲ್ಲಿ ಇಂದು ಭದ್ರಾವತಿ ಆಕಾಶವಾಣಿಗೆ ನೂತನವಾಗಿ ಅಳವಡಿಸಲಾದ ೧೦ ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಭದ್ರಾವತಿ ಆಕಾಶವಾಣಿಗೆ ಇದೊಂದು ಉಡುಗೊರೆಯಾ ಗಿದ್ದು, ಜಿಯ ಮೂಲೆ ಮೂಲೆ ಸೇರಿದಂತೆ ೮ ಜಿಗಳನ್ನು ತಲುಪಲಿದೆ. ರೇಡಿಯೋ ಒಂದು ಶಕ್ತಿಯುತವಾದ ಸಂವಹನ ಮಾಧ್ಯವಾಗಿದ್ದು ಕೇಂದ್ರ ಸರ್ಕಾರವು ಡಿಜಿಟಲ್ ಮತ್ತು ಸಂವಹನ ಮಾಧ್ಯಮಗಳ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮತ್ತು ಗುಣಮಟ್ಟ ವೃದ್ದಿಗಾಗಿ ರೂ.೨೦೦೦ ಕೋಟಿ ಖರ್ಚು ಮಾಡುತ್ತಿದೆ ಎಂದರು.

ರೇಡಿಯೋ ಆಧುನಿಕ ತಂತ್ರeನ ಬಳಕೆ ಮಾಡಿಕೊಂಡು ಅತಿ ಹೆಚ್ಚು ಜನರನ್ನು ತಲುಪುತ್ತಿದ್ದು ಶೇ.೯೨ ಭಾಗವನ್ನು ತಲುಪುತ್ತಿರುವ ಬಹುದೊಡ್ಡ ಪ್ರಸಾರ ಮಾಧ್ಯಮ ವಾಗಿದೆ. ಕೇಂದ್ರವು ಕಲೆ, ಸಂಸ್ಕೃತಿ, ವಿನ್ಯಾಸ, ಚಲನಚಿತ್ರ, ಸಂಗೀತ, ಸಾಫ್ಟ್ವೇರ್ ಮತ್ತು ಗೇಮಿಂಗ್ ನಂತಹ ಸೃಜನಶೀಲ ಉದ್ಯಮಗಳನ್ನು ಒಳಗೊಂಡಿರುವ ಆರ್ಥಿಕ ವ್ಯವಸ್ಥೆ ಆರೆಂಜ್ ಎಕಾನಮಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ೨೫ ಸಾವಿರ ಶಾಲೆಗಳಿಗೆ ಕ್ರಿಯೇಟಿವ್ ಲ್ಯಾಬ್ನ್ನು ನೀಡುತ್ತಿದೆ ಎಂದರು.
ರೇಡಿಯೋ ೨೩ ಭಾಷೆಗಳು ಮತ್ತು ೧೮೨ ಉಪಭಾಷೆಗಳಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾ, ಗಡಿನಾಡು, ಗುಡ್ಡಗಾಡು, ಮತ್ತು ದೂರದ ಪ್ರದೇಶಗಳನ್ನು ತಲುಪುತ್ತಿದೆ. ಎಲ್ಲ ವರ್ಗ ಮತ್ತು ವಯೋಮಾನ ಹಾಗೂ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಬಿತ್ತರವಾಗುತ್ತವೆ. ಆಕಾಶವಾಣಿ ಪಾಡ್ಕಾಸ್ಟ್ ಸಹ ಶುರುವಾಗಿದ್ದು ಕಮ್ಯುನಿಟಿ ರೇಡಿಯೋ ಸಹ ಬಹು ದೊಡ್ಡ ಪಾತ್ರ ವಹಿಸುತ್ತಿದೆ. ೫೫೦ ಕಮ್ಯುನಿಟಿ ರೇಡಿಯೋ ಕೆಲಸ ಮಾಡುತ್ತಿದೆ. ಭದ್ರಾವತಿ ಆಕಾಶವಾಣಿ ಎಫ್ ಎಂ ೨೫ನೇ ಪ್ರೇಷಕವಾಗಿದ್ದು ೩೫೦೦ ಚ ಕಿ.ಮೀ ನ್ನು ಕವರ್ ಮಾಡುತ್ತದೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಎಫ್.ಎಂ ಪ್ರೇಷಕ ಅಳವಡಿಕೆಗೆ ೨೦೨೪ರ ಜನವರಿ ಯಲ್ಲಿ ಅಡಿಗಲ್ಲು ಹಾಕಲಾಗಿತ್ತು. ಇದೀಗ ಅದು ಸಾಕಾರಗೊಂಡಿದ್ದು ಆಕಾಶವಾಣಿ ಭದ್ರಾವತಿ ಕೇಂದ್ರ ೧೦ ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ ೧೦೧.೪ ತರಂಗಾಂತರ ಎಫ್ ಎಂ ಪ್ರೇಷಕದ ಅಳವಡಿಕೆ ಯಿಂದಾಗಿ ಶಿವಮೊಗ್ಗದ ಸುತ್ತಲಿನ ಎಂಟು ಜಿಗಳಿಗೆ ಪ್ರಸಾರ ವ್ಯಾಪ್ತಿ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು ೧ ಕೋಟಿ ಜನರಿಗೆ ಈ ಸೇವೆ ಲಭ್ಯ ವಾಗುತ್ತಿದ್ದು ಭದ್ರಾವತಿ ಆಕಾಶವಾಣಿಯ ವಜ್ರ ಮಹೋತ್ಸ ವದ ಉಡುಗೊರೆ ಇದಾಗಿದೆ ಎಂದರು.
ಶಾಸಕ ಎಸ್.ಎನ್. ಚನ್ನಬಸಪ್ಪಅವರು ಮಾತನಾಡಿ, ಎಫ್.ಎಂ ಪ್ರಸಾರಕ್ಕಾಗಿ ಶಿವಮೊಗ್ಗದ ಜನತೆ ಬಹಳ ವರ್ಷಗಳಿಂದ ಕಾಯುತ್ತಿದ್ದರು. ಇದೀಗ ಎಫ್.ಎಂ. ಪ್ರೇಷಕದ ಅಳವಡಿಕೆಯು ಜನರಲ್ಲಿ ಸಂತೋಷ ತಂದಿದೆ ಎಂದರು.
ಆಕಾಶವಾಣಿ ಮಹಾ ನಿರ್ದೇಶಕ ರಾಜೇಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೌರವ್ ದ್ವಿವೇದಿ, ಮಾಜಿ ಶಾಸಕ ಕುಮಾರಸ್ವಾಮಿ, ಜಿಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ದಕ್ಷಿಣ ವಲಯ (ಬ್ರಾಡ್ಕಾಸ್ಟ್ ಆಪರೇಷನ್ಸ್)ದ ಅಪರ ಮಹಾ ನಿರ್ದೇಶಕಿ ಗೀತಾ ರಾಣಿ, ಆಕಾಶವಾಣಿ ಭದ್ರಾವತಿಯ ಮುಖ್ಯಸ್ಥರಾದ ಎಸ್. ಆರ್ ಭಟ್ ಇನ್ನಿತರರಿದ್ದರು.
