ಜಿಲ್ಲೆಯ ೭೯ ಕೇಂದ್ರಗಳಲ್ಲಿ ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ…
ಶಿವಮೊಗ್ಗ : ವಿದ್ಯಾರ್ಥಿಗಳ ಜೀವನದ ದಿಸೆಯನ್ನು ನಿರ್ಧರಿಸುವ ಮುಖ್ಯ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಾಳೆಯಿಂದ ಶುರುವಾಗಲಿದ್ದು, ಏ.೪ ರವರೆಗೆ ಜಿಲ್ಲೆಯ ಒಟ್ಟು ೭೯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ.
ಭದ್ರಾವತಿ ೧೫, ಹೊಸನಗರ ೭, ಸಾಗರ ೯, ಶಿಕಾರಿಪುರ ೧೧, ಶಿವಮೊಗ್ಗ ೨೦, ಸೊರಬ ೧೦ ಮತ್ತು ತೀರ್ಥಹಳ್ಳಿ ೭ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಎ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಹಾಗೂ ಒತ್ತಡ ರಹಿತ ವಾತಾವರಣವನ್ನು ನಿರ್ಮಿಸಬೇಕು. ಎ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಪೂರ್ವಭಾವಿಯಾಗಿ ಡ್ರೈರನ್ ನಡೆಸಲಾಗಿದ್ದು, ಮತ್ತೊಮ್ಮೆ ಇಂಟರ್‌ನೆಟ್ ವ್ಯವಸ್ಥೆ, ಯುಪಿಎಸ್ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಜಿಕಾರಿಗಳು ಸಂಬಂಸಿದ ಅಕಾರಿಗಳಿಗೆ ಸೂಚನೆ ನೀಡಿzರೆ.

ಪರೀಕ್ಷೆಗೆ ೩೧ ಮಾರ್ಗ ರಚಿಸಲಾಗಿದ್ದು, ಈ ಮಾರ್ಗಗಳಿಗೆ ಮಾರ್ಗಾಕಾರಿಗಳನ್ನು ನೇಮಿಸಲಾಗಿದೆ. ೭೯ ಸ್ಥಾನಿಕ ಜಗೃತ ದಳದ ಅಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ನವರು ಒದಗಿಸುವಂತೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಾದ ಪೊಲೀಸ್ ಬಂದೋಬಸ್ತ್ಗೆ ಮನವಿ ಮಾಡಲಾಗಿದ್ದು, ಕೇಂದ್ರಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾe ಜರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಆದೇಶಿಸಲಾಗಿದೆ.
ವಿದ್ಯಾರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ. ಈ ಬಗ್ಗೆ ಸೂಕ್ತವಾಗಿ ಪರಿಶೀಲನೆ ನಡೆಸಲಾಗುವುದು ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುವಂತೆ ಎಲ್ಲ ಅಕಾರಿಗಳು ನೋಡಿಕೊಳ್ಳಬೇಕೆಂದು ಸೂಚಿಸಿzರೆ.
