ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜೀತ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯ…

Share Below Link

ಭದ್ರಾವತಿ : ಸಮಾಜದಲ್ಲಿ ಜೀತ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ರೂಪಿಸಲಾಗಿರುವ ಕಾಯ್ದೆ ಕುರಿತು ಅರಿತುಕೊಳ್ಳ ಬೇಕೆಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್ ಹೇಳಿದರು.
ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಆಯೋಜಿ ಸಿದ್ದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೀತ ಪದ್ಧತಿ ನಿಷೇಧ ಕಾಯ್ದೆ ೧೯೭೬ರ ಕುರಿತು ಸಮಗ್ರ ಮಾಹಿತಿ ನೀಡಿ, ಅಧಿಕಾರಿಗಳು ನಿರ್ವಹಿಸ ಬೇಕಾದ ಜವಾಬ್ದಾರಿಗಳನ್ನು ವಿವರಿಸಿದರು.
ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮಾತನಾಡಿ, ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವz ಗಿದ್ದು, ಎ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕೆಂದರು.
ಉಪತಹಸೀಲ್ದಾರ್ ಮಂಜಾ ನಾಯ್ಕ, ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ರಕ್ಷಿತ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.