ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಆನ್‌ಲೈನ್ ಶಾಪಿಂಗ್‌ನಲ್ಲಿ ಜಾಗರೂಕರಾಗಿದ್ದು ಜಾಣರಾಗಿರಿ…

Share Below Link

ಶಿವಮೊಗ್ಗ : ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್ ಅನುಕೂಲ ಕರ ಹಾಗೂ ಲಾಭದಾಯಕ ಎಂದೆನಿಸಿದರೂ ಕೂಡ ವಂಚನೆ, ಗುಣಮಟ್ಟದ ಖಾತ್ರಿಯ ಕೊರತೆ, ನಕಲಿ ಉತ್ಪನ್ನಗಳ ಮಾರಾಟ ಮತ್ತು ಡೇಟಾ ಸೋರಿಕೆಯ ಅಪಾಯ ಗಳಿರುವುದರಿಂದ ಜಾಗರೂಕರಾ ಗಿದ್ದು ಜಾಣರಾಗಿರಿ ಎಂದು ಜಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ ಟಿ. ಶಿವಣ್ಣ ಎಚ್ಚರಿಸಿದರು.
ಜಿಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾ ವಿದ್ಯಾಲಯ ಮತ್ತು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಆಶ್ರಯದಲ್ಲಿ ಕೋಟೆ ರಸ್ತೆಯ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣ ದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರವು ೧೯೮೬ರಲ್ಲಿ ಗ್ರಾಹಕ ಹಕ್ಕುಗಳ ಕಾಯ್ದೆ ಜಾರಿ ಗೊಳಿಸಿದೆ. ದೈನಂದಿನ ಜೀವನ ದಲ್ಲಿ ಪ್ರತಿಯೊಬ್ಬರೂ ಗ್ರಾಹಕರೇ. ಗ್ರಾಹಕರಿಗೆ ನ್ಯಾಯಯುತ, ಯೋಗ್ಯ ಹಾಗೂ ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ನೀಡುವ ಜವಾಬ್ದಾರಿ ವ್ಯಾಪಾರಸ್ಥ ರದ್ದು. ಯಾವುದೇ ವಸ್ತುಗಳನ್ನು ಕೊಡುವವನ ತೃಪ್ತಿಗಾಗಿ ಕೊಳ್ಳುವು ದಲ್ಲ, ಅಲ್ಲಿ ಗ್ರಾಹಕರ ಸಂತೃಪ್ತಿಯೇ ಮುಖ್ಯ. ಸುರಕ್ಷತೆ, ಆಯ್ಕೆ ಹಾಗೂ ಆರೋಗ್ಯಪೂರ್ಣ ಪರಿಸರ ಹೊಂದುವ ಹಕ್ಕನ್ನು ಕಾಯ್ದೆಯು ಎ ಗ್ರಾಹಕರಿಗೂ ನೀಡಿದೆ ಎಂದರು.
ಗ್ರಾಹಕರು ಮೋಸ ಹೋದ ಬಳಿಕ ಎಚ್ಚೆತ್ತು ಕೊಳ್ಳುವ ಬದಲು ಜಾಗೃತರಾಗಿರುವುದು ಉತ್ತಮ. ಗ್ರಾಹಕರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಗ್ರಾಹಕ ಕಾಯ್ದೆಯನ್ನು ಜಾರಿಗೊಳಿಸಲಾ ಗಿದೆ. ಈ ಬಗ್ಗೆ ಜಾಗೃತಿ ಮೂಡಿಸು ತ್ತಿದ್ದರೂ ಸಹ ಮೋಸ ಹೋಗು ವುದು ತಪ್ಪುತ್ತಿಲ್ಲ. ಆಕಸ್ಮಿಕವಾಗಿ ಮೋಸ ಹೋದಾಗ ಗ್ರಾಹಕರ ರಕ್ಷಣೆಗೆ ಇರುವ ಕಾಯ್ದೆಗಳ ಬಗ್ಗೆ ಅರಿವು ಹೊಂದಿ ನ್ಯಾಯ ಪಡೆಯಬೇಕೆಂದರು.
ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ಪ್ರಶಾಂತ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಬಿ.ಡಿ. ಯೋಗಾನಂದ, ವಾಸವಿ ವಿದ್ಯಾಲಯದ ಕಾರ್ಯದರ್ಶಿ ಶೇಷಾಚಲ, ಜಿ ಗ್ರಾಹಕ ಮಾಹಿತಿ ಕೇಂದ್ರದ ಸಂಚಾಲಕ ಎಂ.ಎಂ. ಜಯಸ್ವಾಮಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಸಿ.ಎಂ. ಧನಲಕ್ಷ್ಮಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಡಿ. ಸತೀಶ್, ಸಹಾಯಕ ನಿರ್ದೇಶಕರಾದ ಲಕ್ಷ್ಮಿ ಉಪಸ್ಥಿತರಿದ್ದರು.
ಕಾನೂನು ಮಾಪನ ಶಾಸ್ತ್ರ ಇಲಾಖೆ ವತಿಯಿಂದ ತೂಕ ಮತ್ತು ಅಳತೆಯ ಬಗ್ಗೆ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ಲೋಲಾಕ್ಷಿ ಮತ್ತು ತಂಡ ಸ್ವಾಗತಿಸಿ, ಎಂ. ಮೇಘನಾ ಸ್ವಾಗತಿಸಿದರು.