ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಆಕ್ಸಿಡೆಂಟ್: ಬಸ್ ಪಲ್ಟಿ… ಪ್ರಯಾಣಿಕರು ಆಸ್ಪತ್ರೆಗೆ…

Share Below Link

ಶಿವಮೊಗ್ಗ: ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೊರಟಿದ್ದ ಖಾಸಗಿ ಬಸ್ ಶಿಕಾರಿಪುರ ನಗರ ಪ್ರವೇಶ ದ್ವಾರದಲ್ಲಿ ಪಲ್ಟಿಯಾಗಿ ೧೨ ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ೯ ಗಂಟೆ ಸಮಯದಲ್ಲಿ ನಡೆದಿದೆ.
ಬೈಕ್ ಸವಾರ ಬಸ್‌ಗೆ ಅಡ್ಡ ಬಂದಿದ್ದರಿಂದ ಆತನನ್ನು ಉಳಿಸಲು ಹೋದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್‌ನಲ್ಲಿ ಸುಮಾರು ೨೫ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರಲ್ಲಿ ೧೨ ಮಂದಿಗೆ ಗಾಯ ಗಳಾಗಿದ್ದು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗು ತ್ತಿದೆ. ಇವರಲ್ಲಿ ಐವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಹಾಗೂ ಗಾಯಾಳುಗಳಲ್ಲಿ ೯ ತಿಂಗಳ ಗರ್ಭೀಣಿಯೂ ಸೇರಿzಳೆ. ಮೆಗ್ಗಾನ್ ಆಸ್ಪತ್ರೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವಾನ ಹೇಳಿದರು. ಮತ್ತು ವೈದ್ಯರನ್ನು ಸಂಪರ್ಕಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಸೂಚಿಸಿದರು.
ಗಾಯಾಳುಗಳಲ್ಲಿ ಕೆಲವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದ ಅವರು, ಸುಧೈವವಶಾತ್‌ನಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದ ಅವರು, ಗಾಯಾಳುಗಳಲ್ಲಿ ಹೆಚ್ಚಾಗಿ ಕೂಲಿಕಾರ್ಮಿಕರಾಗಿದ್ದು ಅವರು ಚೇತರಿಸಿಕೊಳ್ಳಲು ೨-೩ ತಿಂಗಳು ಬೇಕಾಗುತ್ತದೆ. ಸರ್ಕಾರ ದಿಂದ ಸಿಗುವ ಪರಿಹಾರವನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.