ಕುವೆಂಪು ವಿವಿಯಲ್ಲಿ ವಿದ್ಯಾರ್ಥಿ ವಿರೋಧಿ ನಡೆ: ಎನ್‌ಎಸ್‌ಯುಐ ಆಕ್ರೋಶ..
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ವಿರೋಧಿ ನಡೆ ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ ಎಂದು ಎನ್‌ಎಸ್‌ಯುಐ ಆರೋಪಿಸಿದೆ.
ವಿವಿ ಕುಲಪತಿಗಳು ಅಧಿಕಾರ ಸ್ವೀಕರಿಸಿದ ಬಳಿಕ ವಿಶ್ವವಿದ್ಯಾಲಯ ದಲ್ಲಿ ಆಡಳಿತಾತ್ಮಕ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ಸಮಸ್ಯೆಗಳತ್ತ ಯಾವುದೇ ಗಮನ ಹರಿಸಲಾಗುತ್ತಿಲ್ಲ ಎಂದು ಆರೋಪಿಸಿದ ಎನ್‌ಎಸ್‌ಯುಐ ಪದಾಧಿಕಾರಿಗಲು, ಕಳೆದ ಐದು ತಿಂಗಳ ಹಿಂದೆ ನಡೆದ ೧, ೩ ಮತ್ತು ೫ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಲ್ಯಮಾಪನದ ಗೌರವಧನ ನೀಡದ ಹಿನ್ನೆಲೆಯಲ್ಲಿ ಉಪನ್ಯಾಸಕರು ಮಲ್ಯಮಾಪನ ಬಹಿಷ್ಕರಿಸಿದ್ದು, ಪರೀಕ್ಷಾ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗಿದೆ. ಅಲ್ಲದೆ, ಕಳೆದ ಮೂರು ವರ್ಷಗಳಿಂದ ಅಂಕಪಟ್ಟಿ ವಿತರಣೆ ಆಗದೆ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸ ಹಾಗೂ ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿzರೆ.
ಪದವಿ ಪ್ರಮಾಣಪತ್ರ, ಪಾಸಿಂಗ್ ಸರ್ಟಿಫಿಕೇಟ್ ಹಾಗೂ ಜೆನ್ಯೂಯಿನ್ ಪ್ರಮಾಣಪತ್ರ ಗಳನ್ನು ನೀಡದಿರುವುದು ವಿದ್ಯಾರ್ಥಿಗಳಿಗೆ ಸಂಕಷ್ಟ ಉಂಟುಮಾಡಿದೆ. ಜೊತೆಗೆ, ಕಳೆದ ಎರಡು ವರ್ಷಗಳಿಂದ ಘಟಿಕೋತ್ಸವ ಸಮಾರಂಭವೂ ನಡೆಯದಿರುವುದು ವಿವಿಯ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಇತ್ತೀಚಿನ ಫಲಿತಾಂಶ ಪ್ರಕಟಣೆಯಲ್ಲಿಯೂ ಗೊಂದಲ ಉಂಟಾಗಿ, ವಿದ್ಯಾರ್ಥಿ ಗಳಲ್ಲಿ ಆತಂಕ ಹೆಚ್ಚಿಸಿದೆ.
ಈ ಎ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿರುವ ಜಿಲ್ಲಾ ಎನ್‌ಎಸ್‌ಯುಐ, ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದೆ. ಈ ಸಂಬಂಧ ಕುಲಸಚಿವರಿಗೆ ಮನವಿ ಸಲ್ಲಿಸಲಾಗಿದೆ.
ಪ್ರಮುಖರಾದ ವಿಜಯ ಕುಮಾರ್, ರವಿ-ಕಾರ್ಟಿಕೆರೆ, ರವಿ ಕುಮಾರ್, ವರುಣ್ ವಿ ಪಂಡಿತ್,ಆದಿತ್ಯ, ಸುಭಾನ್, ಪರಾಜ್, ಶ್ರೀಖಾಂತ್, ಕುಮಾರ ಸ್ವಾಮಿ ಇನ್ನಿತರರಿದ್ದರು.
