ಏ.೧೬: ಶರಾವತಿ ಪಂಪ್ಡ್ ಯೋಜನೆ ವಿರುದ್ಧ ಬೃಹತ್ ಜಾಥಾ…
ಶಿವಮೊಗ್ಗ : ರಾಜ್ಯ ಮತ್ತು ದೇಶಾದ್ಯಂತ ಮಾರಕವಾದ ಶರಾವತಿ ಪಂಪ್ಡ್ ಯೋಜನೆ ವಿರುದ್ಧ ಏ.೧೬ರಂದು ಸೈಕಲ್ ಹಾಗೂ ವಾಹನಗಳ ಜಾಥಾವನ್ನು ರಾಷ್ಟ್ರಭಕ್ತ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆ ಗಳಿಂದ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ವಿರುದ್ಧ ಈಗಾಗಲೇ ಹಲವು ಹೋರಾಟಗಳನ್ನು ನಡೆಸಿದ್ದು ಮುಂದುವರಿದ ಭಾಗಗಳಲ್ಲಿ ಶಿವಮೊಗ್ಗ ನಗರದಲ್ಲಿ ಈ ಯೋಜನೆ ಬಗ್ಗೆ ಸಾರ್ವಜನಿಕ ರಲ್ಲಿ ಅರಿವು ಮೂಡಿಸುವ ಸಲುವಾಗಿ ಜಥಾವನ್ನು ಏರ್ಪಡಿಸಲಾಗಿದೆ ಎಂದರು.
ಈ ಜಾಥಾಕ್ಕೆ ಶಿವಮೊಗ್ಗ ನಗರದ ಅಣ್ಣಾ ಹಜಾರೆ ಹೋರಾಟ ಸಮಿತಿ, ಸೈಕಲ್ ಕ್ಲಬ್, ಸಾಹಸ ಮತ್ತು ಸಾಂಸ್ಕೃತಿಕ ಅಕಾಡೆಮಿ, ತರುಣೋದಯ ಘಟಕ, ಕರ್ನಾಟಕ ರಕ್ಷಣಾ ವೇದಿಕೆ ಸಿಂಹಸೇನೆ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಪಾಲ್ಗೊಳ್ಳುತ್ತಿದ್ದು, ಅಂದು ಬೆಳಿಗ್ಗೆ ೧೦ ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ಖ್ಯಾತ ವೈದ್ಯರಾದ ಡಾ. ಶಿವರಾಮಕೃಷ್ಣ, ಡಾ. ಪಿ. ನಾರಾಯಣ್ ಉದ್ಘಾಟಿಸಿ ಮುಖ್ಯ ಭಾಷಣ ಮಾಡಲಿzರೆ ಎಂದರು.
ಕೆಪಿಸಿಎಲ್ನವರು ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಕೈಗೊಳ್ಳ ದಂತೆ ಹೈಕೋರ್ಟ್ ಆದೇಶಿಸಿದೆ. ಈ ಯೋಜನೆ ಜಾರಿಗೆ ಸಚಿವರೊಬ್ಬರು ಆಸಕ್ತಿ ತೋರಿದ್ದು, ಹತ್ತು ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಯ ಹಣವನ್ನು ಲೂಟಿ ಮಾಡಲು ಹೊರಟಿzರೆ ಎಂದು ಆರೋಪಿಸಿದರು.
ಈ ಯೋಜನೆ ವಿರುದ್ಧ ಸಾಕಷ್ಟು ವಿರೋಧ ಮತ್ತು ಪ್ರತಿಭಟನೆಗಳು ನಡೆದಿದ್ದು, ಹಲವಾರು ಸಂಘ ಸಂಸ್ಥೆಗಳು, ಮಠಾಧೀಶರು, ಪರಿಸರ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು, ವಿಷಯ ತಜ್ಞರು ಯೋಜನೆಯಲ್ಲಿನ ಲೋಪ ದೋಷಗಳನ್ನು ಕೆಪಿಸಿಎಲ್ಗೆ ಮನವರಿಕೆ ಮಾಡಿ ಕೊಟ್ಟರೂ ಸಹ ಕೆಪಿಸಿಎಲ್ನವರು ಪರಿಸರಕ್ಕೆ ಮತ್ತು ಪಶ್ಚಿಮಘಟ್ಟ ಗಳಿಗೆ ಮಾರಕವಾಗಿರುವ ಹಾಗೂ ಯಾವುದೇ ಆರ್ಥಿಕ ಲಾಭವನ್ನು ತರದ ಯೋಜನೆಯನ್ನು ಜರಿ ಗೊಳಿಸಲು ಹೊರಟಿರುವುದು ಪ್ರಶ್ನಾರ್ಥಕವಾಗಿದೆ ಎಂದ ಅವರು, ಯಾವುದೇ ಕಾರಣಕ್ಕೂ ಈ ಯೋಜನೆ ಕೈ ಬಿಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದರು.
ಏ.೧೬ರಂದು ನಡೆಯಲಿರುವ ಸೈಕಲ್ ಹಾಗೂ ವಾಹನಗಳ ಜಥಾದಲ್ಲಿ ೪೦೦ಕ್ಕೂ ಹೆಚ್ಚು ಬೈಕ್ಗಳು, ೨೦೦ಕ್ಕೂ ಹೆಚ್ಚು ಕಾರುಗಳು ಹಾಗೂ ೫೦೦ಕ್ಕೂ ಹೆಚ್ಚು ಸೈಕಲ್ಗಳು ಭಾಗವಹಿ ಸುತ್ತಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿಕೊಂಡರು. ಜಾಥಾವು ಮಹಾವೀರ ವೃತ್ತದಲ್ಲಿ ಸಂಪನ್ನಗೊಳ್ಳಲಿದ್ದು, ನಂತರ ಸಮಾರೋಪ ಹಾಗೂ ಬಹಿರಂಗ ಸಭೆ ನಡೆಯಲಿದೆ ಎಂದರು.
ಪ್ರಮುಖರಾದ ಶ್ರೀಕಾಂತ್, ಡಾ. ಶೇಖರ್ ಗೌಳೇರ್, ಜನಾರ್ಧನ್ ಪೈ, ಪರಿಸರ ರಮೇಶ್, ಎಸ್.ಬಿ. ಅಶೋಕ್ ಕುಮಾರ್, ಪರಿಸರ ಪ್ರಕಾಶ್, ಹರೀಶ್ ಕಾರ್ಣಿಕ್, ಎಸ್.ವಿಶ್ವೇಶ್ವರಯ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
