ವಿವಿಧ ಕಾಲೋನಿಗಳಲ್ಲಿ ಅಕ್ರಮ ಮದ್ಯೆ ತಡೆಯಲು ಆಗ್ರಹ…
ಭದ್ರಾವತಿ: ತಾಲೂಕಿನ ವಿವಿಧ ಕಾಲೋನಿ ಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವ ಮನೆಗಳ ಮೇಲೆ ಹಾಗೂ ಪೆಟ್ಟಿಗೆ ಅಂಗಡಿಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿ ಗಳು ದಾಳಿ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ಸಾಮಾಜಿಕ ಹೋರಾಟಗಾರ ತೀರ್ಥೇಶ್ ಅಗ್ರಹಿಸಿದರು.
ಅಬಕಾರಿ ಇಲಾಖೆಯ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ವಿವಿಧ ಕಾಲೋನಿಗಳಲ್ಲಿ ಅಕ್ರಮ ವಾಗಿ ಮದ್ಯ ಸಂಗ್ರಹಣೆ ಹಾಗೂ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಮಾಹಿತಿ ಸಾರ್ವಜನಿಕರಲ್ಲಿ ಹರಿದಾಡುತ್ತಿದೆ. ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ನಡೆಸುತ್ತಿದ್ದು, ಇದರಿಂದ ಗ್ರಾಮದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಯುವಜನರ ಭವಿಷ್ಯಕ್ಕೆ ಹಾನಿಯಾಗುತ್ತಿದೆ ಎಂದು ಆರೋಪಿಸಿದರು.

ಹೊರಗಿನಿಂದ ಮನೆಗಳಿಗೆ ಮದ್ಯ ತರಿಸಿ ಅಕ್ರಮವಾಗಿ ಸಂಗ್ರಹಣೆ ಮಾಡಿ ಸಾರ್ವಜನಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಮದ್ಯೆ ಸೇವಿಸಿ ಕಾಲೋನಿಗಳಲ್ಲಿ ಅಶಾಂತಿ, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವುದು ಕಂಡು ಬಂದಿರುತ್ತದೆ.
ಈ ಹಿನ್ನಲೆಯಲ್ಲಿ ಇಲಾಖೆ ವತಿಯಿಂದ ಗುಪ್ತತನಿಖೆ ನಡೆಸಿ, ಎ ಮನೆಗಳ ಮೇಲೆ ಏಕಕಾಲ ದಲ್ಲಿ ದಾಳಿನಡೆಸಿ, ಅಕ್ರಮ ಮದ್ಯ ವಶಪಡಿಸಿಕೊಂಡು, ಸಂಬಂಧಪಟ್ಟ ವರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ ಹಾಗೂ ಇತರೆ ಅನ್ವಯಿಸುವ ಕಾನೂನು ಗಳಡಿ ಕಠಿಣ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿದರು.
