ನಿರುದ್ಯೋಗಿ ಮಹಿಳೆಯರ ಉದ್ಯೋಗ ಬುದುಕಿನ ಸೇತುವೆಯಾದ ಡಾ| ಸರ್ಜಿ ಕನಸಿನ ಕಾಯಕ ಸೇತು…
ಶಿವಮೊಗ್ಗ : ಯುವತಿಯರ ಆರ್ಥಿಕ ಸಬಲೀಕರ ಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಶಿವಮೊಗ್ಗದಲ್ಲಿ ಆಯೋಜಿಸಲಾದ ಐದು ದಿನಗಳ ಬೃಹತ್ ಉದ್ಯೋಗ ಸಂದರ್ಶನ ಕಾರ್ಯಕ್ರಮ ಕಾಯಕ ಸೇತುಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಇಂದ ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಡಾ| ಧನಂಜಯ ಸರ್ಜಿ ಅವರ ನಗರದ ಜನಪರ ಜೀವಪರ ಕಾರ್ಯಾಲಯ ದಲ್ಲಿ ಆರಂಭಗೊಂಡ ಈ ವಿಶೇಷ ನೇಮಕಾತಿ ಅಭಿಯಾನದಲ್ಲಿ ೨೦೦೦ಕ್ಕೂ ಅಽಕ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಸ್.ಎನ್. ಚನ್ನಬಸಪ್ಪ, ಕಾಯಕವೇ ಕೈಲಾಸ ಎಂಬ ನುಡಿಗೆ ಅರ್ಥ ತುಂಬುವ ಕಾರ್ಯ ವನ್ನು ಖ್ಯಾತ ವೈದ್ಯರೂ ಆದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾಡುತ್ತಿzರೆ. ಕಳೆದ ಏಳು ತಿಂಗಳ ಹಿಂದೆ ಕಾಯಕ ಸೇತು ಕಾರ್ಯಕ್ರಮಕ್ಕೆ ತಾವ ಚಾಲನೆ ನೀಡಿದ್ದು, ಅಂದಿನಿಂದ ಆರಂಭವಾದ ಪ್ರಯತ್ನ ಇಂದು ಸಾವಿರಾರು ಮಹಿಳೆಯರ ಬದುಕಿಗೆ ಆಶಾಕಿರಣ ವಾಗಿ ಪರಿಣಮಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿವಮೊಗ್ಗದ ಯುವಜನರಲ್ಲಿ ಅಪಾರ ಕೌಶಲ್ಯ ಮತ್ತು ಸಾಮರ್ಥ್ಯ ಅಡಗಿದೆ. ಅದನ್ನು ಗುರುತಿಸಿ ಉದ್ಯೋಗಾವಕಾಶಗಳೊಂದಿಗೆ ಸಂಪರ್ಕಿಸುವ ಸೇತುವೆಯಾಗಿ ಕಾಯಕ ಸೇತು ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾದರೆ ಕುಟುಂಬ ಮತ್ತು ಸಮಾಜ ಎರಡೂ ಸದೃಢವಾಗುತ್ತವೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಗಳು ಅತ್ಯಂತ ಮಹತ್ವzಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಮಾತನಾಡಿ, ಕಳೆದ ಒಂದು ದಶಕದಲ್ಲಿ ಭಾರತದ ಕೈಗಾರಿಕಾ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ ಎಂದರು.
ಒಂದು ಕಾಲದಲ್ಲಿ ಮೊಬೈಲ್ ಉತ್ಪಾದನೆಗೆ ವಿದೇಶಗಳನ್ನೇ ಅವಲಂಬಿಸಿದ್ದ ಭಾರತ, ಇಂದು ಜಾಗತಿಕ ಮಟ್ಟದಲ್ಲಿ ಮೊಬೈಲ್ ಉತ್ಪಾದನೆ ಮತ್ತು ರಫ್ತಿನಲ್ಲಿ ಪ್ರಮುಖ ಸ್ಥಾನ ಪಡೆದುಕೊಳ್ಳುತ್ತಿದೆ. ಕರ್ನಾಟಕದ ಉತ್ತಮ ಕೈಗಾರಿಕಾ ವಾತಾವರಣ, ತಾಂತ್ರಿಕ ಮೂಲ ಸೌಕರ್ಯ ಹಾಗೂ ಪ್ರತಿಭಾವಂತ ಮಾನವ ಸಂಪನ್ಮೂಲವು ಬಹುರಾಷ್ಟ್ರೀಯ ಕಂಪನಿಗಳನ್ನು ಆಕರ್ಷಿಸುತ್ತಿದೆ ಎಂದು ಹೇಳಿದರು.
ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರeನ ಕ್ಷೇತ್ರದಲ್ಲಿ ವೇಗವಾಗಿ ಬದಲಾವಣೆಗಳು ನಡೆಯುತ್ತಿದ್ದರೂ, ಭಾರತ ಅದಕ್ಕೆ ತಕ್ಕಂತೆ ತನ್ನ ಕೌಶಲ್ಯ ಮತ್ತು ದೃಷ್ಟಿಕೋನವನ್ನು ರೂಪಿಸಿ ಕೊಳ್ಳುತ್ತಿದೆ. ಹೊಸ ತಂತ್ರeನಗಳು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳ ಜೊತೆಗೆ ಹೊಸ ಅವಕಾಶಗಳನ್ನೂ ಸೃಷ್ಟಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ರೂವಾರಿಗಳಾದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರು ಮಾತನಾಡಿ, ಕಾಯಕ ಸೇತು ಹಾಗೂ ಸರ್ಜಿ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಈ ವಿಶೇಷ ನೇಮಕಾತಿ ಶಿಬಿರ ಆಯೋಜಿಸಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಬಹು ರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯಲ್ಲಿ ಖಾಲಿ ಇರುವ ೨೦೦೦ಕ್ಕೂ ಹೆಚ್ಚು ಹುzಗಳಿಗೆ ಮಹಿಳಾ ಅಭ್ಯರ್ಥಿಗಳ ನೇಮಕಾತಿ ನಡೆಯಲಿದ್ದು, ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜಿಗಳ ಮಹಿಳೆ ಯರಿಗೆ ಇದು ಅಪರೂಪದ ಅವಕಾಶವಾಗಿದೆ ಎಂದು ಹೇಳಿದರು.

ಗ್ರಾಮೀಣ ಭಾಗದ ಯುವತಿ ಯರು ಆರ್ಥಿಕವಾಗಿ ಸ್ವತಂತ್ರರಾಗ ಬೇಕು, ಸುರಕ್ಷಿತ ಮತ್ತು ಉತ್ತಮ ವಾತಾವರಣದಲ್ಲಿ ಉದ್ಯೋಗ ಪಡೆಯಬೇಕು ಎಂಬ ಉದ್ದೇಶ ದಿಂದಲೇ ಈ ವಿಶೇಷ ಸಂದರ್ಶನವನ್ನು ಆಯೋಜಿಸಲಾಗಿದೆ. ಉದ್ಯೋಗಕ್ಕಾಗಿ ಮಹಾನಗರಗಳಿಗೆ ತೆರಳುವ ಮಹಿಳೆಯರಿಗೆ ಅಗತ್ಯ ಸೌಲಭ್ಯಗಳನ್ನು ಕಂಪನಿಯೇ ಒದಗಿಸುತ್ತಿದೆ ಎಂದು ವಿವರಿಸಿದರು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಚಿತ ವಸತಿ, ಉಚಿತ ಊಟ, ಉಚಿತ ಕ್ಯಾಬ್ ಸೌಲಭ್ಯ, ಪಿಎಫ್ ಮತ್ತು ಇಎಸ್ಐ ಸೌಲಭ್ಯಗಳು, ೨೪/೭ ತುರ್ತು ವೈದ್ಯಕೀಯ ನೆರವು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಂಪನಿಯ ವತಿಯಿಂದ ನೀಡಲಾಗು ತ್ತದೆ. ೧೦ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ೧೮ ರಿಂದ ೩೪ ವರ್ಷದೊಳಗಿನ ಯುವತಿಯರು ಹಾಗೂ ಮಹಿಳೆಯರು ಸಂದರ್ಶನ ದಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.

ಜೂ.೮ರ ಇಂದಿನಿಂದ ಆರಂಭವಾದ ಉದ್ಯೋಗ ಸಂದರ್ಶನವು ಜೂನ್ ೧೨ರವರೆಗೆ ಐದು ದಿನಗಳ ಕಾಲ ನಗರದ ವಿನೋಬನಗರದಲ್ಲಿರುವ ಡಾ. ಧನಂಜಯ ಸರ್ಜಿ ಅವರ ಜನಪರ ಜೀವಪರ ಕಾರ್ಯಾಲಯದ ೨ನೇ ಮಹಡಿಯಲ್ಲಿ ನಡೆಯಲಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ನೇರವಾಗಿ ಹಾಜರಾಗಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸರ್ಜಿ ಸಮೂಹದ ಪ್ರಮುಖರಾದ ಹರ್ಷ ಸರ್ಜಿ, ಈಶ್ವರ್ ಸರ್ಜಿ ಇನ್ನೋವ್ ಕಂಪನಿಯ ಸಹಾಯಕ ವ್ಯವಸ್ಥಾಪಕರಾದ ದಯಾನಂದ್, ಮಂಜುನಾಥ್, ಪ್ರಮುಖರಾದ ನಾಗರಾಜ್, ತಮ್ಮಡಿಹಳ್ಳಿ ನಾಗರಾಜ್, ಚಂದ್ರಶೇಖರ್ ಎಸ್., ಬಾಳೆಕಾಯಿ ಮೋಹನ್, ರಾಜು, ಸೇರಿದಂತೆ ಹಲವರು ಉಪಸ್ಥಿತರಿದ್ದರು.


