ಜಿಲ್ಲಾ ಸುದ್ದಿತಾಜಾ ಸುದ್ದಿ

ಬರದ ಮುನ್ಸೂಚನೆ ನಡುವೆಯೇ ರಾಜ್ಯದಲ್ಲೇ ಮೊದಲು ಭರ್ತಿಯಾದ ತುಂಗಾ ಡ್ಯಾಂ…

Share Below Link

ಶಿವಮೊಗ್ಗ: ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ದುರ್ಬಲಗೊಂಡಿದ್ದರೂ, ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶಿವಮೊಗ್ಗದ ತುಂಗಾ ಜಲಾಶಯ ರಾಜ್ಯದ ಈ ವರ್ಷ ಮೊದಲಿಗೆ ಭರ್ತಿಯಾಗುವ ಮೂಲಕ ದಾಖಲೆ ನಿರ್ಮಿಸಿದೆ. ಜಲಾಶಯಕ್ಕೆ ೨೦,೫೬೫ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಸುರಕ್ಷತಾ ಕ್ರಮವಾಗಿ ೧೨ ಗೇಟ್‌ಗಳ ಮೂಲಕ ೧೮,೦೫೧ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಜಿಡಳಿತ ಸೂಚಿಸಿದೆ.
ಕಳೆದ ಮೂರು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಒಳಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ ೫೮೮.೨೪ ಮೀಟರ್ ಆಗಿದ್ದು, ೩.೨೪ ಟಿಎಂಸಿ ನೀರಿನ ಪೂರ್ಣ ಸಾಮರ್ಥ್ಯವನ್ನು ತಲುಪಿದೆ. ಇದರಿಂದ ಈ ಭಾಗದ ರೈತರಲ್ಲಿ ಸಂತಸ ಮನೆಮಾಡಿದೆ.
ಜುಲೈ ೪ರ ಸಂಜೆ ಎರಡು ಗೇಟ್‌ಗಳನ್ನು ತೆರೆಯುವ ಮೂಲಕ ನೀರು ಬಿಡುಗಡೆ ಆರಂಭಿಸಲಾಗಿತ್ತು. ಬಳಿಕ ಒಳಹರಿವು ಹೆಚ್ಚಿದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ೧೨ ಗೇಟ್‌ಗಳನ್ನು ತೆರೆಯಲಾಗಿದ್ದು, ಹೊರಹರಿವನ್ನೂ ಹೆಚ್ಚಿಸಲಾಗಿದೆ. ವಿದ್ಯುತ್ ಉತ್ಪಾದನಾ ಘಟಕದ ಮೂಲಕವೂ ಸುಮಾರು ೫,೦೦೦ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಒಟ್ಟಾರೆ ಹೊರಹರಿವು ೧೮ ಸಾವಿರ ಕ್ಯೂಸೆಕ್‌ಗಿಂತ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿzರೆ.
ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯ ಕೆಳಭಾಗದ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಆದ್ದರಿಂದ ನದಿದಡದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಹಾಗೂ ನದಿಗೆ ಇಳಿಯಬಾರದು ಎಂದು ಜಿಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *