ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಪೊಲೀಸ್ ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆ …
ಶಿವಮೊಗ್ಗ: ಕರ್ನಾಟಕ ನಾಗರಿಕ ಪೊಲೀಸ್ ಕಾನ್‌ಸ್ಟೆಬಲ್ ಹುzಗಳ ನೇಮಕಾತಿಗಾಗಿ ಭಾನುವಾರ ಶಿವಮೊಗ್ಗ ನಗರದ ೨೮ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಶಾಂತಿಯುತ ಹಾಗೂ ಯಶಸ್ವಿಯಾಗಿ ನಡೆಯಿತು.
ಜಿಗೆ ನಿಗದಿಪಡಿಸಲಾಗಿದ್ದ ೧೦,೭೩೭ ಅಭ್ಯರ್ಥಿಗಳ ಪೈಕಿ ೧೦,೧೬೭ ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಉತ್ತಮ ಹಾಜರಾತಿ ದಾಖಲಾಗಿದೆ.
ಪರೀಕ್ಷೆಯನ್ನು ಯಾವುದೇ ಅಡೆತಡೆಗಳಿಲ್ಲದೆ, ಪಾರದರ್ಶಕ ಹಾಗೂ ಸುಗಮವಾಗಿ ನಡೆಸಲು ಜಿಡಳಿತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿ ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದವು.
ಭದ್ರತಾ ದೃಷ್ಟಿಯಿಂದ ಎಲ್ಲ ೨೮ ಪರೀಕ್ಷಾ ಕೇಂದ್ರಗಳಲ್ಲಿ ೬ ಡಿವೈಎಸ್‌ಪಿ, ೨೮ ಪೊಲೀಸ್ ಇನ್‌ಸ್ಪೆಕ್ಟರ್, ೫೬ ಪೊಲೀಸ್ ಉಪನಿರೀಕ್ಷಕರು ಸೇರಿದಂತೆ ಒಟ್ಟು ೯೦ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಭ್ಯರ್ಥಿಗಳ ತಪಾಸಣೆಗಾಗಿ (ಫ್ರಿಸ್ಕಿಂಗ್) ೧೩೯ ಮಂದಿ ಹಾಗೂ ಪರೀಕ್ಷಾ ಕೇಂದ್ರಗಳ ಹೊರವಲಯದ ಭದ್ರತೆಗೆ ೧೫೦ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲಾಗಿದ್ದು, ಜಮರ್, ಗಡಿಯಾರ, ಕುಡಿಯುವ ನೀರು, ಗಾಳಿ-ಬೆಳಕಿನ ವ್ಯವಸ್ಥೆ, ಪೀಠೋಪಕರಣಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿತ್ತು. ಇದರಿಂದ ಪರೀಕ್ಷೆ ಯನ್ನು ಸಂಪೂರ್ಣ ಪಾರದರ್ಶಕ ವಾಗಿ ಹಾಗೂ ಶಿಸ್ತಿನಿಂದ ನಡೆಸಲು ಸಾಧ್ಯವಾಯಿತು.
ಶಿವಮೊಗ್ಗ ಜಿಯಲ್ಲಿ ಲಿಖಿತ ಪರೀಕ್ಷೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಪರೀಕ್ಷೆಯ ಯಶಸ್ಸಿಗೆ ಸಹಕರಿಸಿದ ಜಿಡಳಿತ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಜಿ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಕೃತಜ್ಞತೆ ಸಲ್ಲಿಸಿzರೆ.
