ಸೆ.೪ರೊಳಗೆ ನ್ಯಾಯಯುತ ಸಮಸ್ಯೆ ಪರಿಹರಿಸಿ: ನಿವೃತ್ತ ನೌಕರರ ವೇದಿಕೆ
ಬೆಂಗಳೂರು, ಸೆ.೨: ಇಡೀ ಸೇವಾ ಅವಧಿಯನ್ನು ಸರ್ಕಾರದ ಸೇವೆಗೆ ಮುಡಿಪಾಗಿಟ್ಟಿರುವ ಸರ್ಕಾರಿ ನೌಕರರು, ನಿವೃತ್ತಿಯ ನಂತರ ತಮ್ಮ ನ್ಯಾಯಯುತ ಆರ್ಥಿಕ ಸೌಲಭ್ಯಗಳಿಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿರುವುದು ವಿಷಾದನೀಯ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ರಾಜ್ಯ ಪ್ರಧಾನ ಸಂಚಾಲಕ ಎಂ.ಪಿ.ಎಂ. ಷಣ್ಮುಖಯ್ಯ ತಿಳಿಸಿzರೆ.
ನಿವೃತ್ತ ನೌಕರರು ಯಾವುದೇ ಹೊಸ ಸೌಲಭ್ಯಕ್ಕಾಗಿ ಸರ್ಕಾರವನ್ನು ಒತ್ತಾಯಿಸು ತ್ತಿಲ್ಲ. ಸೇವಾವಧಿಗೆ ಅನುಗುಣವಾಗಿ ಕಾನೂನುಬದ್ಧವಾಗಿ ದೊರೆಯಬೇಕಾದ ಆರ್ಥಿಕ ಸೌಲಭ್ಯಗಳನ್ನು ನ್ಯಾಯಯುತ ವಾಗಿ ಲೆಕ್ಕಹಾಕಿ, ಸಮರ್ಪಕವಾಗಿ ನೀಡಬೇಕು ಎಂಬುದಷ್ಟೇ ತಮ್ಮ ಬೇಡಿಕೆ ಯಾಗಿದೆ ಎಂದು ಅವರು ಸ್ಪಷ್ಟಪಡಿಸಿzರೆ.

ಸರ್ಕಾರವು ನಿವೃತ್ತ ನೌಕರರ ಸಮಸ್ಯೆಯನ್ನು ಮಾನವೀಯ ಹಾಗೂ ನ್ಯಾಯಯುತ ದೃಷ್ಟಿಕೋನದಿಂದ ಪರಿಗಣಿಸಿ ಶೀಘ್ರ ಪರಿಹಾರ ಕಲ್ಪಿಸಬೇಕು. ಕೇವಲ ಮಾತಿನ ಭರವಸೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ವೇದಿಕೆಯ ಪದಾಧಿಕಾರಿಗಳು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಅಧಿಕೃತ ಸಭೆ ನಡೆಸಿ, ಲಿಖಿತ ಭರವಸೆ ನೀಡುವುದರ ಜತೆಗೆ ಕಾರ್ಯರೂಪಕ್ಕೆ ಬರುವ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸೆ.೪ರೊಳಗೆ ವೇದಿಕೆಯ ಪದಾಧಿಕಾರಿಗಳು ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳ ಸಭೆ ಕರೆಯಬೇಕು. ಸಭೆಯಲ್ಲಿ ನಿವೃತ್ತ ನೌಕರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಪರಿಹಾರದ ಸ್ಪಷ್ಟ ಮಾರ್ಗಸೂಚಿ ರೂಪಿಸಬೇಕು ಎಂದು ವೇದಿಕೆ ಮತ್ತೊಮ್ಮೆ ಆಗ್ರಹಿಸಿದೆ.
ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದರೆ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿ ಕೊಳ್ಳಲು ಸಿದ್ಧವಿರುವುದಾಗಿ ವೇದಿಕೆ ತಿಳಿಸಿದೆ. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದಿದ್ದರೆ ಸೆ.೫ರಿಂದ ಪ್ರಜಸತ್ತಾತ್ಮಕ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಸಿದೆ.
ನ್ಯಾಯ ದೊರೆಯುವವರೆಗೆ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ರಾಜ್ಯ ಪ್ರಧಾನ ಸಂಚಾಲಕ ಎಂ.ಪಿ.ಎಂ. ಷಣ್ಮುಖಯ್ಯ ಅವರು ತಿಳಿಸಿzರೆ.
