ಸ್ವಪಕ್ಷೀಯ ನಾಯಕರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸುಂದರೇಶ್
ಶಿವಮೊಗ್ಗ, ಸೆ.೨೬: ಜಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಹಾಗೂ ಮಂಜುನಾಥ ಭಂಡಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಪರಸ್ಪರರ ಕುರಿತು ಮಾತನಾಡಿರುವ ವಿಡಿಯೋ ತುಣುಕುಗಳು ತಮ್ಮ ಬಳಿ ಇದ್ದು, ಅವುಗಳನ್ನು ಕೆಪಿಸಿಸಿ, ಎಐಸಿಸಿ ಮುಖಂಡರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರುವುದಾಗಿ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ತಿಳಿಸಿzರೆ.

ನಗರದ ಖಾಸಗಿ ಹೊಟೇಲ್ನಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ತಾವು ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಡಿದ ಹೇಳಿಕೆಗಳ ಪೈಕಿ ಕೆಲವು ವಿಷಯಗಳನ್ನು ಹೊರತುಪಡಿಸಿ ಉಳಿದ ಹೇಳಿಕೆಗಳಿಗೆ ಈಗಲೂ ಬದ್ಧವಾಗಿರುವುದಾಗಿ ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಶೀಘ್ರದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಹಿತಿ ನೀಡುವುದಾಗಿ ತಿಳಿಸಿದರು.
ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಕುರಿತು ಈ ಹಿಂದೆ ಅಸಂಬದ್ಧ ಪದಗಳನ್ನು ಬಳಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಸುಂದರೇಶ್, ಅವರು ಪಕ್ಷ ಹಾಗೂ ವಯಸ್ಸಿನಲ್ಲಿ ಹಿರಿಯ ರಾಗಿದ್ದು, ಅವರ ಬಗ್ಗೆ ಅಪಾರ ಗೌರವವಿದೆ ಎಂದರು. ಆರ್.ಎಂ. ಮಂಜುನಾಥ ಗೌಡರ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿದ್ದರೆ ಕ್ಷಮೆ ಕೋರುವುದಾಗಿ ಹೇಳಿದರು.
ಮಧು ಬಂಗಾರಪ್ಪ ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದರೂ, ಅವರ ಕಾರ್ಯವೈಖರಿ ಕುರಿತು ಈ ಹಿಂದೆ ಮಾಡಿದ್ದ ಟೀಕೆಗಳಿಗೆ ತಾವು ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿ ದರು. ಮಧು ಬಂಗಾರಪ್ಪ ಅವರನ್ನು ಶಿವಮೊಗ್ಗ ಜಿಯಿಂದ ಬೇರೆಡೆಗೆ ವರ್ಗಾಯಿಸಬೇಕು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡರಾದ ಬಿ.ವಿ.ಶ್ರೀನಿವಾಸ್, ಕಲಗೋಡು ರತ್ನಾಕರ್, ಚೇತನ್, ಎಚ್.ಸಿ. ಯೋಗೀಶ್, ಎಸ್.ಪಿ.ದಿನೇಶ್ ಹಾಗೂ ಮಾಲತೇಶ್ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರ ಕುರಿತು ತಾವು ನೀಡಿದ್ದ ಹೇಳಿಕೆಗಳಿಗೂ ಬದ್ಧವಾಗಿರುವುದಾಗಿ ತಿಳಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಧ್ಯಕ್ಷ ಚಂದ್ರಭೂಪಾಲ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವ ಎನ್.ರಮೇಶ್ ಇವರಿಬ್ಬರ ಸೇವೆಯೂ ಸಾಕು, ಅವರನ್ನು ಕೂಡ ಪದವಿಯಿಂದ ಬದಲಾಯಿಸಬೇಕು ಎಂದರು.
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಹಾಗೇಯೇ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಶಾಸಕರು ಗಳಾದ ದಿನೇಶ್ ಗುಂಡೂರಾವ್, ಸಲೀಂ ಅಹಮ್ಮದ್, ಜಮೀರ್ ಅಹಮ್ಮದ್ ಮುಂತಾದ ಮುಸ್ಲಿಂ ನಾಯಕರಿಗೂ ಕೂಡ ಸಚಿವರ ಪಟ್ಟ ನೀಡುವುದರಲ್ಲಿ ತಪ್ಪಿಲ್ಲ ಎಂದರು.
ಜಿಯಲ್ಲಿ ಗಾಂಜ ಸೇರಿದಂತೆ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶಿವಮೊಗ್ಗಕ್ಕೆ ಕರೆಸಿ ಪರಿಸ್ಥಿತಿ ಪರಿಶೀಲಿಸುವಂತೆ ಮನವಿ ಮಾಡಲಾಗುವುದು.
ಕೊಲೆ, ಕಳ್ಳತನ ಸೇರಿದಂತೆ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಒತ್ತಾಯಿಸಲಾ ಗುವುದು ಎಂದರು.
