ಕೋಣಂದೂರು ರೋಟರಿ ಕ್ಲಬ್‌ನಿಂದ ನವರಾತ್ರಿ ಸಂಭ್ರಮ: ದಾಂಡಿಯಾ ನೃತ್ಯ
ಶಿವಮೊಗ್ಗ : ಕೋಣಂದೂರು ರೋಟರಿಕ್ಲಬ್ ವತಿಯಿಂದ ರೋಟರಿ ಭವನದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ದಾಂಡಿಯಾ ನೃತ್ಯ ಕಾರ್ಯಕ್ರಮ ವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ಲಬ್‌ನ ಸದಸ್ಯರು ಹಾಗೂ ಮಹಿಳೆಯರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ, ದಾಂಡಿಯಾ ನೃತ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಸಂಗೀತದ ಲಯಕ್ಕೆತಕ್ಕಂತೆ ಹೆಜ್ಜೆ ಹಾಕಿದ ಸದಸ್ಯರು ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದರು. ಬಣ್ಣಬಣ್ಣದ ಉಡುಪುಗಳು, ಆಕಷಕ ನೃತ್ಯ ಹಾಗೂ ಸದಸ್ಯರ ಉತ್ಸಾಹ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಕ್ಲಬ್‌ನ ಅಧ್ಯಕ್ಷ ಕೆ.ಎಂ. ಸಂದೇಶ್ ಕುಮಾರ್, ನವರಾತ್ರಿ ಹಬ್ಬವು ಶಕ್ತಿ ಆರಾಧನೆಯ ಜೊತೆಗೆ ನಮ್ಮ ಭಾರತೀಯ ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಗಳನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬವಾಗಿದೆ. ದಾಂಡಿಯಾದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸದಸ್ಯರಲ್ಲಿ ಪರಸ್ಪರ ಪ್ರೀತಿ, ಸ್ನೇಹ, ಸಹಕಾರ ಮತ್ತು ಒಗ್ಗಟ್ಟಿನ ಭಾವನೆಯನ್ನು ಬೆಳೆಸುತ್ತವೆ. ಇಂದಿನ ಒತ್ತಡದ ಜೀವನದಲ್ಲಿ ಇಂತಹ ಕಾರ್ಯಕ್ರಮಗಳು ಎಲ್ಲರಿಗೂ ಸಂತೋಷ ಹಾಗೂ ಮನಸ್ಸಿಗೆ ನೆಮ್ಮದಿ ನೀಡುತ್ತವೆ. ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯ ಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಮೂಲಕ ಸದಸ್ಯರ ನಡುವೆ ಆತ್ಮೀಯತೆ ಮತ್ತು ಸೌಹಾರ್ದತೆ ಹೆಚ್ಚುವುದರ ಜೊತೆಗೆ ನವರಾತ್ರಿ ಹಬ್ಬದ ಮಹತ್ವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದರು. ಕಾರ್ಯಕ್ರಮವು ಹಬ್ಬದ ಸಡಗರ ಮತ್ತು ಸಂಭ್ರಮದೊಂದಿಗೆ ಯಶಸ್ವಿಯಾಗಿ ನೆರವೇರಿತು.
