ತಾಜಾ ಸುದ್ದಿದೇಶರಾಜಕೀಯ

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ೫ ಗ್ಯಾರೆಂಟಿಗೂ ಗ್ರೀನ್ ಸಿಗ್ನಲ್…

Share Below Link

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸ ಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುವ ಮೂಲಕ ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷವಾಗಿದೆ ಎಂದು ಸಾಬೀತು ಪಡಿಸಿದರು.
ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜು.೧ ರಿಂದ ಜಾರಿ ಮಾಡಲಾಗುವುದು ಎಂದು ತಿಳಿಸಿದರು.
೧೨ ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇ.೧೦ರಷ್ಟು ಸೇರಿಸಿ, ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು ಎಂದ ಅವರು, ಈ ಹಿಂದಿನ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸ ಬೇಕು. ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಿಂದ ಅನ್ವಯ ವಾಗಲಿದೆ. ಬಾಡಿಗೆದಾರರಿಗೂ ಈ ಯೋಜನೆ ಅನ್ವಯವಾಗಲಿದೆ ಎಂದರು.
ಯಾವುದೇ ಜತಿ, ಧರ್ಮಗಳ ತಾರತಮ್ಯ ಇಲ್ಲದೆ ಗ್ಯಾರಂಟಿ ಯೋಜನೆ ಜರಿಯಾಗಲಿದೆ ಎಂದ ಸಿಎಂ ಸಿದ್ದರಾಮಯ್ಯ, ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎ ಗ್ಯಾರಂಟಿ ಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.


ಎರಡನೇ ಯೋಜನೆ ‘ಗೃಹಲಕ್ಷ್ಮಿ’ಯನ್ನು ಆ.೧೫ ರಂದು ಅನುಷ್ಠಾನಕ್ಕೆ ತರಲಾಗುವುದು, ಈ ಯೋಜನೆಯಡಿ ಬಿಪಿಎಲ್, ಎಪಿಎಲ್ ಖಾತೆದಾರರ ಮನೆ ಯಜಮಾನಿ ಖಾತೆಗೆ ಹಣ ಮಾಡಲಾಗುವುದು, ಆದರೆ, ಯೋಜನೆ ಫಲಾನುಭವಿಗಳು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ ಸಲ್ಲಿಸಬೇಕು, ಜೂ.೧೫ ರಿಂದ ಜು.೧೫ರೊಳಗೆ ಅರ್ಜಿ ಸಲ್ಲಿಸಬೇಕು ಎಂದ ಅವರು, ಸಾಮಾಜಿಕ ಭದ್ರತೆ ಪಿಂಚಣಿ ದಾರರಿಗೂ ಈ ಯೋಜನೆ ಅನ್ವಯವಾಗಲಿದೆ ಎಂದರು.
೩ನೇ ಗ್ಯಾರಂಟಿ ಅನ್ನಭಾಗ್ಯ ಯೋಜನೆಯಡಿ ಜುಲೈ ೧ ರಿಂದ ಎ ಬಿಪಿಎಲ್ ಕಾರ್ಡ್ ದಾರರು ಮತ್ತು ಅಂತ್ಯೋದಯ ಫಲಾನುಭವಿಗಳಿಗೆ ತಲಾ ೧೦ ಕೆಜಿ ಅಕ್ಕಿ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
೪ನೇ ಗ್ಯಾರಂಟಿ ಶಕ್ತಿ: ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದಲ್ಲಿನ ಎ ಮಹಿಳೆಯರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ವಾಗಿ ಪ್ರಯಾಣಿಸುವ ಶಕ್ತಿ ಯೋಜನೆಗೆ ಈ ತಿಂಗಳು ೧೧ ನೇ ತಾರೀಖು ಚಾಲನೆ ನೀಡಲಾಗು ವುದು, ಬೆಂಗಳೂರಿನಿಂದ ತಿರುಪತಿ, ಬೆಂಗಳೂರಿನಿಂದ ಹೈದರಾಬಾದ್‌ಗೆ ಅವಕಾಶವಿಲ್ಲ. ಎಸಿ ಮತ್ತು ಲಕ್ಸುರಿ ಬಸ್ ಹೊರತುಪಡಿಸಿ ಸಾಮಾನ್ಯ ಬಸ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಕೆಎಸ್ ಆರ್ ಟಿ ಸಿ ಬಸ್‌ನಲ್ಲಿ ಶೇ.೫೦ರಷ್ಟು ಸೀಟು ಪುರುಷರಿಗೆ ಮೀಸಲು, ಐರಾವತ, ರಾಜಹಂಸ ಸೇರಿ ಎಲ್ಲ ರೀತಿಯ ಲಕ್ಸ್ಯೂರಿ, ಎಸಿ ಮತ್ತು ನಾನ್ ಎಸಿ ಸ್ಲೀಪರ್ ಬಸ್ ಗಳಿಗೆ ಇದು ಅನ್ವಯವಾಗಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು. ಉಚಿತ ಬಸ್ ಪ್ರಯಾಣದ ಸವಲತ್ತನ್ನು ತೃತೀಯ ಲಿಂಗಿಗಳಿಗೂ ಒದಗಿಸಲಾಗಿದೆ ಎಂದರು.
೫ನೇ ಗ್ಯಾರಂಟಿ ಯುವನಿಧಿ: ೨೦೨೨-೨೩ರಲ್ಲಿ ಪಾಸ್ ಆದ ಪದವೀಧರ ನಿರುದ್ಯೋಗಿಗಳಿಗೆ ನೋಂದಣಿಯಾದ ೨೪ ತಿಂಗಳ ವರಗೆ ಪ್ರತಿ ತಿಂಗಳಿಗೆ ೩,೦೦೦ ಮತ್ತು ಡಿಪ್ಲೋಮಾ ಮಾಡಿದವರಿಗೆ ೧, ೧೫೦೦ ಗೌರವ ಧನ ನೀಡಲಾಗುವುದು ಎಂದ ಮುಖ್ಯಮಂತ್ರಿ ತಿಳಿಸಿದರು.
ವೃತ್ತಿಪರ ಶಿಕ್ಷಣ ಸೇರಿದಂತೆ ಎ ಪದವೀಧರ ನಿರುದ್ಯೋಗಿಗಳಿಗೆ ಇದು ಅನ್ವಯ ವಾಗಲಿದೆ. ತೃತೀಯ ಲಿಂಗಿ ಗಳಿಗೂ ಕೂಡಾ ಈ ಯೋಜನೆ ಅನ್ವಯ ನಿರುದ್ಯೋಗ ಭತ್ಯೆ ನೀಡಲಾಗುವುದು, ಇದಕ್ಕಾಗಿ ಅರ್ಜಿ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಪಪಡಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟದ ಸಚಿವರು ಉಪಸ್ಥಿತರಿದ್ದರು.