ಆ.೧೫ರಂದು ವಿದ್ಯಾನಗರ ಮೇಲ್ಸೇತುವೆ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳಿ: ಬಿವೈಆರ್
ಶಿವಮೊಗ್ಗ : ಜಿಗೆ ಅತಿ ಹೆಚ್ಚಿನ ಮೊಬೈಲ್ ಟವರ್ಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತ್ತಿದ್ದು, ಈ ಎ ಟವರ್ಗಳ ನಿರ್ಮಾಣ ಕಾರ್ಯ ವಿವಿಧ ಹಂತದಲ್ಲಿದೆ. ಈ ಎ ಟವರ್ಗಳ ನಿರ್ಮಾಣ ಕಾರ್ಯ ಡಿಸೆಂಬರ್ ಮಾಸಾಂತ್ಯದೊಳಗೆ ಪೂರ್ಣ ಗೊಂಡು ಸಾರ್ವಜನಿಕ ಸೇವೆಗೆ ಮುಕ್ತಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಜಿ ಮಟ್ಟದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಕೈಗೊಳ್ಳುವ ಎ ಕಾಮಗಾರಿಗಳನ್ನು ಡಿಸೆಂಬರ್ ಮಾಹೆಯೊಳಗಾಗಿ ಪೂರ್ಣ ಗೊಳಿಸುವಂತೆ ಸೂಚಿಸಿದರು.
ಪಿ. ಟಿ.ಕಾಲೋನಿಯ ರೈಲ್ವೇ ಕೆಳಸೇತುವೆಯನ್ನು ತಿಂಗಳೊಳಗಾಗಿ ಪೂರ್ಣಗೊಳಿಸಿ. ವಿದ್ಯಾನಗರದ ರೈಲ್ವೇ ಮೇಲ್ಸೇತುವೆಯನ್ನು ಆ. ೧೫ ರಂದೇ ಉದ್ಘಾಟಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಅವರು, ಮೇಲ್ಸೇತುವೆಗಳ ಸಮೀಪವಿರುವ ವಿದ್ಯುತ್ ಟ್ರಾನ್ಸ್ಫಾರ್ಮರ್ ಗಳನ್ನು ಹಾಗೂ ನೀರಿನ ಟ್ಯಾಂಕು ಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು. ಸಭೆಯಲ್ಲಿ ಡಿಸಿ ಡಾ| ಸೆಲ್ವಮಣಿ, ಜಿಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಎಸ್ಪಿ ಮಿಥುನ್ಕುಮಾರ್, ಮೇಯರ್ ಶಿವಕುಮಾರ್, ಶಾಸಕರಾದ ಬಿ.ವೈ. ವಿಜಯೇಂದ್ರ, ಎ.ಎಸ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸೇರಿದಂತೆ ಜಿ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.