ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅನೇಕ ಕಾರಣಗಳಿಂದ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗೆ ಡಿವಿಎಸ್ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ..

Share Below Link

ಶಿವಮೊಗ್ಗ: ಅನೇಕ ಕಾರಣ ಗಳಿಂದ ಶಿಕ್ಷಣದಿಂದ ವಂಚಿತ ರಾಗುವ ವಿದ್ಯಾರ್ಥಿಗಳಿಗೆ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ ಇರುವ ಬಗ್ಗೆ ಮಾಹಿತಿ ನೀಡುವ ಜತೆಯಲ್ಲಿ ಅಧ್ಯಯನ ನಡೆಸಲು ಪ್ರೋತ್ಸಾಹಿಸಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್. ರಾಜಶೇಖರ್ ಹೇಳಿದರು.
ಶಿವಮೊಗ್ಗ ನಗರದ ದೇಶಿಯ ವಿದ್ಯಾ ಶಾಲಾ ಸಮಿತಿಯ ಡಿವಿಎಸ್ ಸಂಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಸಾಂಪ್ರದಾಯಿಕ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪದವಿ ಶಿಕ್ಷಣ ಪಡೆಯಲು ಆಸಕ್ತಿ ಇದ್ದರೂ ಕುಟುಂಬ ನಿರ್ವಹಣೆಯ ಕಾರಣಕ್ಕಾಗಿ ಕೆಲಸ ಮಾಡಬೇಕಾ ಗುತ್ತದೆ. ಅಂತಹವರಿಗೆ ಸಂಜೆ ಕಾಲೇಜಿನ ಬಗ್ಗೆ ಮಾಹಿತಿ ಒದಗಿಸಬೇಕು. ಇದರಿಂದ ಪದವಿ ಪೂರ್ಣಗೊಳಿಸಲು ಸಾಧ್ಯವಾಗು ತ್ತದೆ ಎಂದು ತಿಳಿಸಿದರು.
ಡಿವಿಎಸ್ ಸಂಜೆ ಕಾಲೇಜಿಗೆ ಅವಶ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ದೇಶಿಯ ವಿದ್ಯಾಶಾಲಾ ಆಡಳಿತ ಮಂಡಳಿ ಸಂಪೂರ್ಣ ಶ್ರಮಿಸಲಿದೆ. ಸಂಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್ ಗಳಿಸುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು ಎಂದರು.
ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಎ. ಸತೀಶ್ ಕುಮಾರ್ ಶೆಟ್ಟಿ ಮಾತ ನಾಡಿ, ಸಾಂಪ್ರದಾಯಿಕ ಆಚರಣೆ ಯಂತಹ ಕಾರ್ಯಕ್ರಮ ವಿದ್ಯಾರ್ಥಿ ಗಳಲ್ಲಿ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸುತ್ತದೆ. ಎಲ್ಲ ವಿದ್ಯಾರ್ಥಿಗಳು ಪರಸ್ಪರ ಸ್ನೇಹ ಭಾವವನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ. ಬದುಕಿನ ಸುಂದರ ಕ್ಷಣಗಳನ್ನು ನೆನೆಪಿಸಿಕೊಳ್ಳುವ ಉತ್ತಮ ಭಾವನೆಗಳನ್ನು ಮನಸ್ಸಿನಲ್ಲಿ ಮೂಡಿಸುತ್ತದೆ ಎಂದು ಹೇಳಿದರು.
ಡಿವಿಎಸ್ ಸಂಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಎ.ಟಿ. ಪದ್ಮೇಗೌಡ ಮಾತನಾಡಿ, ೫೦ಕ್ಕೂ ಅಧಿಕ ವರ್ಷಗಳಿಂದ ಸಂಜೆ ಕಾಲೇಜನ್ನು ನಡೆಸುವ ಮೂಲಕ ಡಿವಿಎಸ್ ಆಡಳಿತ ಮಂಡಳಿಯು ಆಸಕ್ತ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಕಾರಣವಾಗಿದೆ. ಸಾಮಾಜಿಕ ಕಳಕಳಿಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದೆ ಎಂದು ತಿಳಿಸಿದರು.
ಸಾಂಪ್ರದಾಯಿಕ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಡಿವಿಎಸ್ ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿನಂದಿ ಲಾಯಿತು. ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಡಾ. ಮಹೇಶ್ ಮತ್ತಿತರರಿದ್ದರು.