ಜಿಲ್ಲಾ ಸುದ್ದಿತಾಜಾ ಸುದ್ದಿ

ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಜು.೨೫ರಂದು ಪ್ರತಿಭಟನಾ ಮೆರವಣಿಗೆ

Share Below Link

ಶಿವಮೊಗ್ಗ: ರೈಲ್ವೆ ನಿಲ್ದಾಣ ಸಮೀಪದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆಯಿಂದ ಜು.೨೫ರಂದು ಬೆಳಿಗೆ ೧೦ ಗಂಟೆಗೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್ ಸುದ್ದಿಗೋಷ್ಟಿಯಲ್ಲಿ ಆಗ್ರಹಿಸಿದರು.
ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯವರು ಕೆಲವು ದಿನಗಳ ಹಿಂದೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕತ್ತಿ, ಗುರಾಣಿ ಪ್ರತಿಕೃತಿಯನ್ನು ಇಟ್ಟಿದ್ದು, ಅದರ ಬಗ್ಗೆ ಸಾರ್ವಜನಿಕರಿಗೆ ಈ ಕತ್ತಿ ಗುರಾಣಿ ಯಾವ ರಾಜನದ್ದೊ, ಯಾವ ಕಾಲದ್ದೊ ಎಂಬ ಬಗ್ಗೆ ಮಾಹಿತಿ ತಿಳಿಯುವುದಿಲ್ಲ. ಆದ್ದ ರಿಂದ ಈ ಕತ್ತಿ ಗುರಾಣಿ ತೆರವು ಗೊಳಿಸಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು.
ಕ್ರಾಂತಿವೀರ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಕಿತ್ತೂರು ಸಂಸ್ಥಾನದಲ್ಲಿ ನಾಡಿನ ಉಳಿವಿಗಾಗಿ ಬ್ರಿಟಿಷರ ವಿರುದ್ಧ ಹೋರಾಡಿ ತನ್ನ ಪ್ರಾಣವನ್ನೇ ಅರ್ಪಿಸಿದ ಮಹಾನ್ ವೀರ ಸೇನಾನಿ. ಆತನ ಪ್ರತಿಮೆ ಯನ್ನು ಸ್ಥಾಪಿಸಬೇಕೆಂದು ಜು.೨೫ ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಈ ಮೆರವಣಿಗೆ ಯಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವ ಹಿಸುತ್ತಿದ್ದಾರೆ. ಈ ಹೋರಾಟಕ್ಕೆ ರೈತ, ದಲಿತ, ಕಾರ್ಮಿಕ ಹಾಗೂ ಕನ್ನಡಪರ ಸಂಘಟನೆಗಳು, ಕುರುಬ ಸಮುದಾಯದ ವಿವಿಧ ಘಟಕಗಳು ಬೆಂಬಲ ನೀಡುತ್ತಿವೆ ಎಂದರು.
ವೇದಿಕೆಯ ಪ್ರಮುಖರಾದ ಗಣೇಶ್ ಬಿಳಗಿ ಮಾತನಾಡಿ, ನಾಡಿನ ಉಳಿವಿಗಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನವಾದ ಆ.೧೫ ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಭಾವಚಿತ್ರ ಇಟ್ಟು ಗೌರವ ಸಲ್ಲಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ರೈತಮುಖಂಡ ವಸಂತಕುಮಾರ್, ಲಿಂಗರಾಜ್, ಲೊಕೇಶ್, ನಾಗರಾಜ್, ಅಕ್ಬರ್ ಪಾಶಾ, ನವುಲೆ ಮಂಜು, ಅರ್ಚನಾ ನಿರಂಜನ್ ಇನ್ನಿತರರು ಉಪಸ್ಥಿತರಿದ್ದರು.